ಹಿಂದೂಪರ ಕಾರ್ಯಕರ್ತರ ಧಮ್ಕಿಗೆ ಧನ್ಯಶ್ರೀ ಆತ್ಮಹತ್ಯೆ: ಅಣ್ಣಾಮಲೈ

Recommended Video

      ಧನ್ಯಶ್ರೀ ಆತ್ಮಹತ್ಯೆ ಪ್ರಕರಣ : ಸುದ್ದಿಗೋಷ್ಠಿಯಲ್ಲಿ ಎಸ್ ಪಿ ಅಣ್ಣಾಮಲೈ ಹೇಳಿದ್ದೇನು ? | Oneindia Kannada

      ಚಿಕ್ಕಮಗಳೂರು, ಜನವರಿ 08 : ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಮೂಡಿಗೆರೆಯ ಬಿಕಾಂ ವಿದ್ಯಾರ್ಥಿನಿ ಧನ್ಯಶ್ರೀ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನೈತಿಕ ಪೊಲೀಸ್‍ ಗಿರಿಗೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

      ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ, "ಮೂಡುಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳುವ ಡೆತ್ ನೋಟ್ ಬರೆದಿಟ್ಟಿದ್ದಾಳೆ, ಧನ್ಯಶ್ರೀಗೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ. ಇದರಿಂದ ಮನನೊಂದು ಧನ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದರು.

      Mudigere BJP Yuva Morcha worker held arrested in student Dhanyashree suicide case

      "ಮುಸ್ಲಿಂ ಯುವಕನೊಂದಿಗೆ ಧನ್ಯಶ್ರೀ ಸುತ್ತಾಡುತ್ತಿರುವುದರಿಂದ ಹಿಂದೂಪರ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ. ಅಷ್ಟೇ ಅಲ್ಲದೇ ಧನ್ಯಶ್ರೀ ಮನೆಗೆ ಹೋಗಿ ನಿಮ್ಮ ಮಗಳಿಗೆ ಬುದ್ಧಿವಾದ ಹೇಳಿ ಎಂದು ಆಕೆಯ ತಾಯಿಗೂ ಧಮ್ಕಿ ಹಾಕಿದ್ದಾರೆ. ಇದೆಲ್ಲ ಆದ ಬಳಿಕ ಸಮಾಜದಲ್ಲಿ ಬದುಕುವುದು ಹೇಗೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

      ಈ ಬಗ್ಗೆ ಎಲ್ಲಾವುದನ್ನು ಧನ್ಯಶ್ರೀ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾಳೆ ಎಂದು ಅಣ್ಣಾಮಲೈ ಹೇಳಿದರು.ಈ ಪ್ರಕರಣ ಸಂಬಂಧ ಐವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಅನಿಲ್ ಎಂಬಾತನನ್ನು ಬಂಧಿಸಲಾಗಿದೆ ಎಂದರು. ಬಂಧಿತ ಆರೋಪಿ ಅನಿಲ್ ಮೂಡಿಗೆರೆ ನಗರ ಘಟಕದ ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+