'ಚಿಕ್ಕಮಗಳೂರಿಗೆ ಬನ್ನಿ'.. ಸಿಎಂಗೆ ಕೈ ಮುಗಿದು ಮನವಿ ಮಾಡಿದ ಶಾಸಕ

Recommended Video

      ಸಾಮಾಜಿಕ ಜಾಲತಾಣದಲ್ಲಿ ಎಚ್ ಡಿ ಕೆ ಜಿಲ್ಲೆಗೆ‌ ಬರುವಂತೆ ಮನವಿ ಮಾಡಿದ ಮೂಡಿಗೆರೆ ಶಾಸಕ

      ಚಿಕ್ಕಮಗಳೂರು, ಆಗಸ್ಟ್.24. ಸಿಎಂ ಕುಮಾರಸ್ವಾಮಿ ಚಿಕ್ಕಮಗಳೂರು ಜಿಲ್ಲೆಗೆ‌ ಬರುವಂತೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಕೈ ಮುಗಿದು ಮನವಿ ಮಾಡಿದ್ದಾರೆ.

      ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೈಮುಗಿದು ಜಿಲ್ಲೆಗೆ ಬರುವಂತೆ ಮನವಿ ಮಾಡಿರುವ ಅವರು ಅತಿವೃಷ್ಡಿ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮೂಡಿಗೆರೆ ತಾಲೂಕಿನಲ್ಲಿ ಗ್ರಾಮ ವಾಸ್ತವ ಮಾಡುವಂತೆ ಮನವಿ ಮಾಡಿದ್ದಾರೆ. ಇದೀಗ ಶಾಸಕರು ಕೈ ಮುಗಿದು ಬೇಡಿಕೊಳ್ಳುತ್ತಿರುವ ವೀಡಿಯೊ ವೈರಲ್ ಆಗಿದೆ.

      ಕಾಫಿನಾಡು ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಸೋನೆ ಮಳೆ ಹಾಗೂ ರಣಗಾಳಿಗೆ ಅಲ್ಲಲ್ಲೇ ಬೆಟ್ಟ-ಗುಡ್ಡ ಹಾಗೂ ಭೂಮಿ ಕುಸಿಯುತ್ತಿದ್ದು, ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ. ಕಳೆದ ನಾಲ್ಕು ದಿನದಿಂದ ಮಲೆನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಗಾಳಿಯ ವೇಗ ಹೆಚ್ಚಾಗಿದೆ.

      Mudigere MLA MP Kumaraswamy requested to Chief Minister Kumaraswamy

      ಎರಡು ತಿಂಗಳ ಕಾಲ ಸುರಿದ ಮಳೆಗೆ ಭೂಮಿಯ ತೇವಾಂಶ ಹೆಚ್ಚಾಗಿದ್ದು ಈಗಿನ ದೈತ್ಯ ಗಾಳಿಯಿಂದ ಭೂಕುಸಿತದ ಪ್ರಕರಣ ಹೆಚ್ಚಾಗಿದೆ. ಇಂದು ಗುರುವಾರವೂ ಕೂಡ ಕೊಪ್ಪ‌ ತಾಲೂಕಿನ ಸೋಮೇಶ್ವರಖಾನ್ ಗ್ರಾಮದಲ್ಲಿ ಇದಕ್ಕಿದ್ದಂತೆ 8 ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.

      ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಬರುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮೂಡಿಗೆರೆ ಶಾಸಕರು ಮನವಿ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+