ವಿಜಯನಗರ ವೈದ್ಯಕೀಯ ಆಸ್ಪತ್ರೆಯ ಅವ್ಯವಸ್ಥೆ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಚಂದ್ರು
ವಿಜಯನಗರ, ಅಕ್ಟೋಬರ್ 14: ಇಲ್ಲಿನ ಜಿಲ್ಲಾ ವೈದ್ಯಕೀಯ ಆಸ್ಪತ್ರೆಗೆ ಬರುವ ರೋಗಿಗಳಿಗೆ ಆಸ್ಪತ್ರೆಯ ಒಳಗೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಒಂದು ವೇಳೆ ಪ್ರವೇಶಿಸಿದರೂ, ಅಲ್ಲಿ ಸರಿಯಾದ ಸೌಲಭ್ಯಗಳಿಲ್ಲ. ರೋಗಿಗಳ ನೋವಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ನಮ್ಮನ್ನು ತೀರಾ ನಿಷ್ಕೃಷ್ಠವಾಗಿ ಕಾಣುತ್ತಿದ್ದಾರೆ. ಊಟ ಕೊಡುವುದಿಲ್ಲ, ಔಷಧಿ ಕೊಡಲ್ಲ.... - ಈ ಎಲ್ಲ ಕುಂದುಕೊರತೆಗಳು, ಸಮಸ್ಯೆಗಳು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಬಳ್ಳಾರಿ ಜಿಲ್ಲಾ ಪ್ರವಾಸದಲ್ಲಿರುವ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ನೇತೃತ್ವದ ತಂಡ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಸಂದರ್ಭ ಕಂಡುಬಂದ ದೃಶ್ಯವಿದು. ರೋಗಿಗಳು ತಾವು ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಈ ರೀತಿಯಾಗಿ ಅಳಲು ತೋಡಿಕೊಂಡಿದ್ದಾರೆ. ದಿನನಿತ್ಯವು ಈ ಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ಹೇಳಿದ್ದಾರೆ.

ಪರಿಸ್ಥಿತಿಯನ್ನು ಅವಲೋಕಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಆಸ್ಪತ್ರೆಯಲ್ಲಿನ ಹಲವಾರು ಅವ್ಯವಸ್ಥೆಗಳ ಬಗ್ಗೆ ದೂರು ಬಂದಿತ್ತು. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂಬ ಸುದ್ದಿ ತಿಳಿದು ನಮ್ಮ ತಂಡ ಇಲ್ಲಿಗೆ ಭೇಟಿ ನೀಡಿತು. ಇಲ್ಲಿಗೆ ಬಂದಾಗ ನಮಗೂ ಅವ್ಯವಸ್ಥೆಯ ದರ್ಶನವಾಯಿತು. ಈ ಅವ್ಯವಸ್ಥೆಯು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಲುಪಬೇಕು ಎಂದು ಹೇಳಿದರು.
ರೋಗಿಗಳಿಗೆ ಅಗತ್ಯ ಸೌಲಭ್ಯ ದೊರಕುತ್ತಿಲ್ಲ. ಔಷಧಿಗಳನ್ನು ಹೊರಗಡೆಯಿಂದ ತರುವಂತೆ ಹೇಳಲಾಗುತ್ತಿದೆ. ಆಸ್ಪತ್ರೆಯ ಸಿಬ್ಬಂದಿಗೆ ಸೌಜನ್ಯವೇ ಇಲ್ಲ. ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಊಟದ ವ್ಯವಸ್ಥೆ ಸರಿಯಾಗಿ ನಡೆಯುತ್ತಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿವೆ ಎಂದು ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಯ ವ್ಯವಸ್ಥಾಪಕರ ಗಮನಕ್ಕೆ ತಂದರು.

ಕಟ್ಟಡವನ್ನು ಕೆಡವಲಾಗಿದೆ. ಹೀಗಾಗಿ, ಸದ್ಯ ಬೆಡ್ ಕೊರತೆ ಸಾಕಷ್ಟಿದ್ದು, ಜನಗಳ ಸಂಖ್ಯೆ ಹೆಚ್ಚಾಗಿದೆ. ಈ ನಡುವೆಯೂ ನಾವು ನಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ. ಔಷಧಿಗಳು ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ವೇಳೆ ಹೊರಗಡೆಯಿಂದ ತರಲು ಕೇಳಲಾಗುತ್ತಿದೆ. ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ. ಬೆಡ್ ಕೊರತೆಯಿಂದ ಕೆಲವೊಮ್ಮೆ ಒಂದೇ ಬೆಡ್‌ನಲ್ಲಿ ಇಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಚಂದ್ರು ಅವರಿಗೆ ವೈದ್ಯಾಧಿಕಾರಿಗಳು ಭರವಸೆ ನೀಡಿದರು.
ಈ ವೇಳೆ ಎಎಪಿ ಸಂಘಟನಾ ಕಾರ್ಯದರ್ಶಿ ಅರ್ಜುನ್ ಹಲಗಿ ಗೌಡ, ರಾಜ್ಯ ಉಪಾಧ್ಯಕ್ಷ ದುರ್ಗಯ್ಯ ನವಲಿ ಮಠ, ರಾಜ್ಯ ಕಾರ್ಯದರ್ಶಿ ಬಸವರಾಜ್ ಮುದಿಗೌಡರ್, ರವಿಕುಮಾರ್ ಸೇರಿದಂತೆ ಜಿಲ್ಲಾ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಇದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications