ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ ಕೋಚಿಂಗ್ ನೀಡಲಿದೆ ಮುಂಬೈ ಮೂಲದ ಸಂಸ್ಥೆ

ಬೆಂಗಳೂರು, ಅಕ್ಟೋಬರ್ 28: ಕರ್ನಾಟಕ ಸರ್ಕಾರ 2024-25ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲಿದೆ. ಇದಕ್ಕಾಗಿ ಸುಮಾರು 12 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರತಿವರ್ಷ ಕನಿಷ್ಠ 20 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲು ಸರ್ಕಾರ ಯೋಜನೆ ರೂಪಿಸಿದೆ.

ಸದ್ಯದ ಮಾಹಿತಿ ಪ್ರಕಾರ ರಾಜ್ಯದ ಪಿಯುಸಿ ಕಾಲೇಜುಗಳಲ್ಲಿನ ಸುಮಾರು 25 ಸಾವಿರ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಸಿಇಟಿ, ನೀಟ್‌ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿಯನ್ನು ನೀಡಲಾಗುತ್ತದೆ. ಇದಕ್ಕಾಗಿ ಮುಂಬೈ ಮೂಲಕ ಸಂಸ್ಥೆಯೊಂದಿಗೆ ಸರ್ಕಾರ ಒಪ್ಪಂದವನ್ನು ಮಾಡಿಕೊಳ್ಳಲಿದೆ.

Mumbai Based PACE Institute To Provide Coaching To Government College Students

ಆನ್‌ಲೈನ್ ಮೂಲಕ ತರಬೇತಿ: ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್‌ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲು ಸರ್ಕಾರ ಟೆಂಡರ್ ಕರೆದಿತ್ತು. ಮಾಹಿತಿಗಳ ಪ್ರಕಾರ ಟೆಂಡರ್‌ನಲ್ಲಿ PACE, Sinhal Online, Gainups Ventures, K-nomics ಕಂಪನಿಗಳು ಭಾಗಿಯಾಗಿದ್ದವು.

ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆಯೊಂದನ್ನು ಆಯ್ಕೆ ಮಾಡಿದೆ. ಇಲಾಖೆ ಮುಂಬೈ ಮೂಲದ PACE ಸಂಸ್ಥೆ ಕಡಿಮೆ ಬಿಡ್ ಮಾಡಿರುವ ಸಂಸ್ಥೆಯನ್ನು ಆಯ್ಕೆ ಮಾಡಿದೆ. ಆನ್‌ಲೈನ್ ಮೂಲಕ ಸಿಇಟಿ, ಜೆಇಇ, ನೀಟ್‌ಗೆ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ 2024-25, 2025-26ನೇ ಶೈಕ್ಷಣಿಕ ವರ್ಷಕ್ಕೆ ತರಬೇತಿ ನೀಡಲಿದೆ.

ಸರ್ಕಾರದ ಈ ತೀರ್ಮಾನವನ್ನು ವಿದ್ಯಾರ್ಥಿಗಳು, ಪೋಷಕರು ಸ್ವಾಗತಿಸಿದ್ದಾರೆ. PACE ಸಂಸ್ಥೆಗೆ ಕೆಲವೇ ದಿನಗಳಲ್ಲಿ ಈ ಕುರಿತು ಅಧಿಕೃತ ಆದೇಶ ಪತ್ರವನ್ನು ನೀಡಲಾಗುತ್ತದೆ. ಸರ್ಕಾರದ ಈ ನಿರ್ಧಾರದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅತಿ ಹೆಚ್ಚು ಶುಲ್ಕ ನೀಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತರಬೇತಿ ಪಡೆಯುವುದು ಅಸಾಧ್ಯವಾಗಿತ್ತು. ಆದರೆ ಸರ್ಕಾರದ ಈ ತೀರ್ಮಾನ ವಿದ್ಯಾರ್ಥಿಗಳಿಗೆ ಸಹಾಯಕವಾಗಿದೆ.

ಶಾಲಾ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿಯನ್ನು ಉಚಿತವಾಗಿ ನೀಡಲಿದೆ. 674 ಪಿಯು ಕಾಲೇಜುಗಳ 25,000 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ನವೆಂಬರ್‌ನಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಸುಮಾರು 12.5 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ.

PACE ಸಂಸ್ಥೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕಾಲ ಉಚಿತವಾಗಿ ತರಬೇತಿ ನೀಡಲು ನುರಿತ ಉಪನ್ಯಾಸಕರನ್ನು ನೇಮಕ ಮಾಡಲಿದೆ. ಸಂಸ್ಥೆ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಿ ಅವರನ್ನು ಶಾರ್ಟ್‌ಲಿಸ್ಟ್ ಮಾಡಲಿದೆ. ಆನ್‌ಲೈನ್ ಹಾಜರಿ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗಾಗಿ ಮಾಡಲಾಗುತ್ತದೆ.

ಈ ತರಬೇತಿಯ ಭಾಗವಾಗಿ ವಿದ್ಯಾರ್ಥಿಗಳಿಗೆ ಪ್ರತಿ ವಾರವೂ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕನ್ನಡ ಮತ್ತು ಇಂಗ್ಲಿಶ್ ಎರಡೂ ಭಾಷೆಯಲ್ಲಿಯೂ ತರಬೇತಿ ತರಗತಿಗಳನ್ನು ನಡೆಸಲಾಗುತ್ತದೆ.

ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ. ಮೊದಲ ಬಾರಿಗೆ ಪಿಯು ಕಾಲೇಜುಗಳಲ್ಲಿ ಆನ್‌ಲೈನ್, ಲೈವ್‌ ತರಬೇತಿ ತರಗತಿಗಳನ್ನು ನಡೆಸಲಾಗುತ್ತಿದೆ. ಕಾಲೇಜು ಅವಧಿ ಮುಗಿದ ಬಳಿಕ ಈ ತರಗತಿಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ನೋಟ್ಸ್‌ಗಳನ್ನು ಸಹ ವಿತರಣೆ ಮಾಡಲಾಗುತ್ತದೆ.

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಸುಮಾರು 80 ಸಾವಿರ ವಿದ್ಯಾರ್ಥಿಗಳಿದ್ದಾರೆ. ಇವರಲ್ಲಿ ಪ್ರಥಮ ಪಿಯುಸಿಯ ಶೇ 50, ದ್ವಿತೀಯ ಪಿಯುಸಿಯ ಶೇ 50 ಸೇರಿಸಿ ಒಟ್ಟು 25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಈ ಮಾದರಿ ತರಬೇತಿಯನ್ನು ನೀಡಲು ಇಲಾಖೆ ಚಿಂತನೆ ನಡೆಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+