BJP MLA Munirathna: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ದಾಳಿ ಹಿಂದೆ ಯಾರಿದ್ದಾರೆ ರಿವೀಲ್!
ಬಿಜೆಪಿ ಶಾಸಕ ಮುನಿರತ್ನ ಅವರ ಕೇಸ್‌ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ. ಬುಧವಾರ ಬೆಂಗಳೂರಿನ ಲಗ್ಗೆರೆಯಲ್ಲಿ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರೇ ಮೊಟ್ಟೆ ಎಸೆದಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಹಾಗೂ ಬಿಜೆಪಿ ನಾಯಕರು ಸೇರಿದಂತೆ ಹಲವರು ಗಂಭೀರ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಕಾಂಗ್ರೆಸ್ ಕಾರ್ಯಕರ್ತರ ಬಂಧನವಾಗಿದೆ. ಹೌದು ಇದನ್ನು ಕಾಂಗ್ರೆಸ್‌ನವರೇ ಮಾಡಿದ್ದಾರೆ ಎಂದು ಶಾಸಕ ಮುನಿರತ್ನ ಅವರು ಆಗಲೇ ದೂರಿದ್ದರು. ಇದನ್ನು ಕಾಂಗ್ರೆಸ್ ನಾಯಕರು ವಿರೋಧಿಸಿದ್ದರು. ಎಲ್ಲವನ್ನೂ ಅವರೇ ಮಾಡಿಕೊಂಡು ನಾಟಕವಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಇದೀಗ ಕೊನೆಗೂ ಯಾರು ಅಟ್ಯಾಕ್ ಮಾಡಿದ್ದಾರೆ ಎನ್ನುವುದು ರಿವೀಲ್ ಆಗಿದೆ.
ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಹೊಡೆದಿರುವುದಕ್ಕೆ ಬಿಜೆಪಿ ನಾಯಕರು ಕೆಂಡಾ ಮಂಡಲರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರೊಂದಿಗೆ ಹೋಗುವಾಗಲೇ ಮುನಿರತ್ನ ಮೇಲೆ ದಾಳಿಯಾಗಿತ್ತು. ಕಾಂಗ್ರೆಸ್‌ನವರೇ ಮೊಟ್ಟೆ ಎಸೆದಿದ್ದು ಎಂದು ಆರೋಪಿಸಿ ಮುನಿರತ್ನ ಅವರು ಪ್ರತಿಭಟನೆ ಮಾಡಿದರು. ಇದನ್ನು ವಿರೋಧಿಸಿ ಕಾಂಗ್ರೆಸ್‌ನಿಂದಲೂ ಪ್ರತಿಭಟನೆ ನಡೆದಿತ್ತು. ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರ ನಡುವೆ ಮಾತಿನ ಚಕಮಕಿ ನಡೆದು, ನೆನ್ನೆ ಎಲ್ಲಾ ಲಗ್ಗೆರೆಯಲ್ಲಿ ರಾಜಕೀಯ ಹೈಡ್ರಾಮಾವೇ ನಡೆದಿತ್ತು. ಇದೀಗ ಮೂವರನ್ನು ಬಂಧಿಸಲಾಗಿದೆ.

ಕಾಂಗ್ರೆಸ್‌ನ ಮೂರು ಜನ ಅರೆಸ್ಟ್: ಇನ್ನು ಮುನಿರತ್ನ ಮೇಲೆ ಮೊಟ್ಟೆ ಹೊಡೆದಿರುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಲಾಗಿರುವ ಮೂರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಅಶ್ವತ್ಥ್, ವಿಶ್ವನಾಥ್ ಹಾಗೂ ವಿಶ್ವ ಎಂದು ಗುರುತಿಸಲಾಗಿದೆ. ಈ ಮೂಲಕ ಬಿಜೆಪಿ ಮಾಡಿದ ಆರೋಪ ನಿಜ ಎನ್ನುವಂತಾಗಿದೆ. ಆದರೆ, ವಿಚಾರಣೆ ಮುಂದುವರಿದಿದೆ.
ಶಾಸಕ ಮುನಿರತ್ನ ಅವರು ವಿವಿಧ ಆರೋಪಗಳನ್ನು ಎದುರಿಸುತ್ತಿದ್ದಾರೆ. ಆರೋಪ ಎದುರಿಸುತ್ತಿರುವವರು ಕಾರ್ಯಕ್ರಮಗಳನ್ನು ನಡೆಸಬಾರದು ಎಂದು ಇಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಡೆಯುತ್ತಿದ್ದಾರೆ ಎನ್ನಲಾಗಿದೆ. ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಇನ್ನು ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇರುವುದರಿಂದಲೇ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 100ಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದ್ದರು ಎಂದು ಹೇಳಲಾಗಿದೆ.
ಘಟನೆಯ ಹಿನ್ನೆಲೆ ಏನು
ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕಳೆದ ಕೆಲವು ದಿನಗಳ ಹಿಂದೆ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ವಿವಿಧ ಕೇಸ್ ದಾಖಲಾದ ಮೇಲೆ ಮುನಿರತ್ನ ಹೆಚ್ಚು ಹೊರಗೆ ಕಾಣಿಸಿಕೊಂಡಿರಲಿಲ್ಲ. ಇದೀಗ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಂದಾಗುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.
ಇಲ್ಲಿನ ಲಗ್ಗೆರೆಯ ಲಕ್ಷ್ಮೀದೇವಿ ನಗರದಲ್ಲಿರು ಬಿಜೆಪಿ ಘಟಕದಲ್ಲಿ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುವಾಗ ಶಾಸಕ ಮುನಿರತ್ನ ಅವರ ಮೇಲೆ ಕಿಡಿಗೇಡಿಗಳು ತಲೆಗೆ ಮೊಟ್ಟೆಯಿಂದ ಹೊಡೆದಿದ್ದಾರೆ.
ನೂರಾರು ಜನ ಪೊಲೀಸ್ ಭದ್ರತೆಯ ನಡುವೆಯೂ ಮುನಿರತ್ನ ಅವರ ತಲೆ ಮೊಟ್ಟೆ ಹೊಡೆದಿದ್ದಾರೆ. ಅಲ್ಲದೆ ಘಟನೆಯಲ್ಲಿ ಮುನಿರತ್ನ ಅವರ ತಲೆಗೆ ಸಣ್ಣ ಗಾಯವೂ ಆಗಿದೆ ಎನ್ನಲಾಗಿದ್ದು, ಅವರಿಗೆ ಈ ಸಂಬಂಧ ಚಿಕಿತ್ಸೆ ನೀಡಲಾಗಿದೆ.












Click it and Unblock the Notifications