Honeytrap: ಬಿಜೆಪಿ ಶಾಸಕ ಹನಿಟ್ರ್ಯಾಪ್ ಮಾಡಲು ಸ್ಟುಡಿಯೋ ಇಟ್ಟುಕೊಂಡಿದ್ದಾರೆ: ವೇಲು ನಾಯ್ಕರ್ ಗಂಭೀರ ಆರೋಪ
ಬೆಂಗಳೂರು, ಜುಲೈ 24: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ದ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಹನಿಟ್ರ್ಯಾಪ್ ಕುರಿತು ಗಂಭೀರ ಆರೋಪ ಮಾಡಿದ್ದಾರೆ.
ಹೌದು, ಶಾಸಕ ಮುನಿರತ್ನ ಬೆಂಬಲಿಗ ಹಾಗೂ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಭಾನುವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು, ಈ ವೇಳೆ ಮಾತನಾಡಿದ ಅವರು, ಮಾಜಿ ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇನ್ನೂ ಮುನಿರತ್ನ ಕರೆಯಿಸುವುದು ಹನಿಟ್ರ್ಯಾಪ್ ಮಾಡುವುದು ಹೆದರಿಸುವುದು. ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಇದಕ್ಕಾಗಿ ಒಂದು ಸ್ಟುಡಿಯೋ ಇಟ್ಟುಕೊಂಡಿದ್ದಾರೆ . ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದು ಮುನಿರತ್ನ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.
2023 ರ ಚುನಾವಣೆ ಎದುರಿಸುವುದು ಹೇಗೆ ಎಂದು ಮುನಿರತ್ನಗೆ ಕೇಳಿದೆವು. ಆಗ ನಿಮ್ಮದು ಈಸ್ಟ್‌ಮನ್ ಕಲರ್ ಪಿಕ್ಚರ್ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ ಎಂದು ಮಾಜಿ ಸಚಿವ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್‌ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಗಂಭೀರವಾಗಿ ಆರೋಪಿಸಿದರು.
ಕಾಂಗ್ರೆಸ್ ನಿಂದ ಆಪರೇಷನ್ ಹಸ್ತ!?
ಹೌದು, ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್, ಮುಂಬರುವ ಸಾಲು ಸಾಲು ಚುನಾವಣೆಯ ಮೇಲೆ ಕಣ್ಣೀಟ್ಟಿದ್ದು. ಈಗಾಗಲೇ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ. ಇತ್ತ 2019 ರ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನದಲ್ಲಿ ಜಯ ಗಳಿಸಿದ್ದ ಕಾಂಗ್ರೆಸ್, ಇದೀಗ 2024 ರ ಲೋಕಸಭಾ ಚುನಾವಣೆಗೆ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಗಾಳ ಹಾಕಿದೆ ಎನ್ನಲಾಗಿದೆ.
ಈಗಾಗಲೇ ಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿದ್ದು, ಇದಕ್ಕಾಗಿ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಬಿಬಿಎಂಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿಕೆ ಶಿವಕುಮಾರ್ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಕನಿಷ್ಠ ಎರಡು ಕ್ಷೇತ್ರಗಳನ್ನ ಗೆಲ್ಲುವ ಗುರಿ ಹಾಕಿಕೊಂಡಿದ್ದು, ಸದ್ದಿಲ್ಲದೇ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ.
ಹೌದು,ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಬೆಂಬಲಿಗರನ್ನು ಕಾಂಗ್ರೆಸ್ಗೆ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ. ಮುನಿರತ್ನ ಬೆಂಬಲಿಗರನ್ನ ಸೆಳೆದ ಡಿ ಕೆ ಶಿವಕುಮಾರ್ ಭಾನುವಾರ ಮಾಜಿ ಬಿಬಿಎಂಪಿ ಸದಸ್ಯರುಗಳಾದ ವೇಲು ನಾಯ್ಕರ್, ಮೋಹನ್ ಕುಮಾರ್, ಶ್ರೀನಿವಾಸ ಮೂರ್ತಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ನಾನು ಹನಿಟ್ರ್ಯಾಪ್ ಅಂತ ಹೇಳಿಲ್ಲ, ಉಲ್ಟಾ ಹೊಡೆದ ವೇಲು ನಾಯ್ಕರ್!
ನಾನು ಹನಿಟ್ರ್ಯಾಪ್ ಅಂತ ನಾನು ಹೇಳಿಲ್ಲ, ಹನಿಟ್ರ್ಯಾಪ್ ತರ ಅಂತ ಹೇಳಿದ್ದೇನೆ. ನನ್ನ ಹಾಗೂ ಮುನಿರತ್ನ ಅವರು ಸಂಬಂಧ 15 ವರ್ಷದ ನಡುವಿನ ಹೊಡನಾಟ ಇದೆ. ನಾನು ಸ್ನೇಹಿತನಾಗಿ ಅದು ಇವತ್ತು ಅವರ ಬಗ್ಗೆ ಬಹಿರಂಗ ಪಡಿಸಿದರೆ ಸ್ನೇಹಿತ ಪದಕ್ಕೆ ಅರ್ಥ ಇರಲ್ಲ. ಮುನಿರತ್ನ ಅವರಿಗೆ ನಾನು ಹೇಳುವುದು ಇಷ್ಟೇ, ನಾನು ಅವರಿಗೆ ಸಲಹೆ ಕೊಡುತ್ತೇನೆ . ಎಲ್ಲಾ ಶಾಸಕರಂತೆ ಒಳ್ಳೆಯ ದಾರಿಯಲ್ಲಿ ಹೋಗಿ. ಅವರು ಒಳ್ಳೆಯ ಹಾದಿಯಲ್ಲಿ ಹೋಗ್ತಾ ಇಲ್ಲ . ದ್ವೇಷದ ರಾಜಕಾರಣ ಮಾಡಬೇಡಿ ಎಂದು ವೇಲು ನಾಯ್ಕರ್ ಸಲಹೆ ನೀಡಿದ್ದಾರೆ.












Click it and Unblock the Notifications