ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುರುಘಾ ಶರಣರ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಿದ್ದರಾಮಯ್ಯ ಆಗ್ರಹ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್‌ 02: ಮುರುಘಾ ಮಠಾಧೀಶರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಗ್ರಹಿಸಿದ್ದಾರೆ.

ಈ ಪ್ರಕರಣದ ಕುರಿತು ಕಾಂಗ್ರೆಸ್‌ನ ರಾಜಕಾರಣಿಯೊಬ್ಬರು ನೀಡಿದ ಮೊದಲ ಹೇಳಿಕೆ ಇದಾಗಿದೆ. ಇಬ್ಬರು ಹೈಸ್ಕೂಲ್ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಸಿದ್ದರಾಮಯ್ಯನವರ ಹೇಳಿಕೆ ಟ್ವೀಟ್ ರೂಪದಲ್ಲಿ ಬಂದಿದೆ.

Breaking: ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ: ಎರಡನೇ ಆರೋಪಿ ರಶ್ಮಿ ಬಂಧನBreaking: ಮುರುಘಾ ಮಠ ಲೈಂಗಿಕ ದೌರ್ಜನ್ಯ ಪ್ರಕರಣ: ಎರಡನೇ ಆರೋಪಿ ರಶ್ಮಿ ಬಂಧನ

ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ವಿರುದ್ಧದ ಆರೋಪ ಗಂಭೀರವಾಗಿದ್ದು, ಪೊಲೀಸರು ಬಾಲಕಿಯರು ನೀಡಿರುವ ದೂರಿನ ಆಧಾರದ ಮೇಲೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಆಗಸ್ಟ್ 26 ರಂದು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಪ್ರಕರಣದಲ್ಲಿ ಮುರುಘಾ ಶರಣರ ಹೆಸರು ಕೇಳಿ ಬಂದಾಗಿನಿಂದ ಯಾವುದೇ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿರಲಿಲ್ಲ.

Muruga Sharan case: Siddaramaiah demands an impartial investigation

ಮೂಲಗಳ ಪ್ರಕಾರ, 2023ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ ಲಿಂಗಾಯತ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿದ್ದು, ಈಗ ಅದೇ ಸುಮದಾಯದ ಪ್ರಭಾವಿ ಮಠಕ್ಕೆ ಮಠಾಧೀಶರು ಮುಖ್ಯಸ್ಥರಾಗಿರುವ ಕಾರಣ ಪ್ರಕರಣದಿಂದ ದೂರವಿರಲು ಕಾಂಗ್ರೆಸ್ ನಿರ್ಧರಿಸಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮಠಾಧೀಶರನ್ನು ಸಮರ್ಥಿಸಿಕೊಂಡಿದ್ದು, ಶರಣರ ವಿರುದ್ಧದ ಪ್ರಕರಣವು ಸುಳ್ಳು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರಕರಣದಿಂದ ದೂರವಿರಲು ನಿರ್ಧರಿಸಿದೆ. ಬಿಜೆಪಿ ಲಿಂಗಾಯತರನ್ನು ತನ್ನ ಪ್ರಮುಖ ಬೆಂಬಲದ ಮೂಲವೆಂದು ಪರಿಗಣಿಸುತ್ತದೆ.

Breaking: ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್Breaking: ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್

ಶರಣರ ವಿರುದ್ಧ ಎಫ್‌ಐಆರ್ ದಾಖಲಿಸಿ ಕೆಲ ದಿನ ಕಳೆದರೂ ಆಡಳಿತಾರೂಢ ಬಿಜೆಪಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ತೀವ್ರ ಟೀಕೆಗಳು ಹಾಗೂ ಪ್ರತಿಭಟನೆಗಳು ನಡೆದಿದ್ದವು. ಅಚ್ಚರಿ ಎಂಬಂತೆ ಪ್ರತಿಪಕ್ಷ ಕಾಂಗ್ರೆಸ್ ಕೂಡ ಸರ್ಕಾರದ ನಿಷ್ಕ್ರಿಯತೆಯ ಬಗ್ಗೆ ಬಾಯಿ ಮುಚ್ಚಿಕೊಂಡಿತ್ತು. ಆಡಳಿತಾರೂಢ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಸಾಮಾನ್ಯವಾಗಿ ಕಟುವಾದ ವಾಗ್ದಾಳಿ ನಡೆಸುವ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಮತ್ತು ಬಿ.ಕೆ. ಹರಿಪ್ರಸಾದ್ ಅವರೂ ಮುರುಘಾ ಶರಣರ ವಿಷಯದಲ್ಲಿ ಮೌನ ವಹಿಸಿದ್ದರು. ಈಗ ಸಿದ್ದರಾಮಯ್ಯ ಟ್ವಿಟ್‌ ಮೂಲಕ ಕ್ರಮಕ್ಕೆ ಆಗ್ರಹಿದ್ದಾರೆ.

Muruga Sharan case: Siddaramaiah demands an impartial investigation

ಮುರುಘಾ ಶರಣರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ ತೊರೆದು ಕರ್ನಾಟಕದಲ್ಲಿ 'ಅಹಿಂದ' ಚಳವಳಿಯನ್ನು ಪ್ರಾರಂಭಿಸಲು ಪ್ರಯತ್ನಿಸಿದಾಗ ಅವರನ್ನು ಮುರುಘಾ ಶರಣರು ಬೆಂಬಲಿಸಿದ್ದರು. ಇದರಿಂದ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್‌ಗೆ ಬಾಗಿಲು ಕೂಡ ತೆರೆದಿತ್ತು. ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಯಾದದ್ದು ಇತಿಹಾಸ.

English summary
Leader of Opposition in Karnataka Siddaramaiah on Friday demanded an impartial investigation into allegations of sexual abuse of minor girls by the Muruga pontiff.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X