ಲಕ್ಷ್ಮೀ ಹೆಬಾಳ್ಕರ್‌ಗೆ 1 ಕೆಜಿ ಬಂಗಾರ ಆಫರ್ ಕೊಟ್ಟ ಮುರುಗೇಶ ನಿರಾಣಿ
ಬಾಗಲಕೋಟೆ, ಡಿಸೆಂಬರ್ 15: ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿರುವವರ ಮೇಲೆ ಲಾಠಿಚಾರ್ಜ್ ಮಾಡಿದ ಕ್ರಮವನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ಇತ್ತ ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡೆಸಿರುವ ಕುರಿತು ವಿಪಕ್ಷಹಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವೆ ಲಕ್ಷ್ಮೀ ಹೆಬಾಳ್ಕರ್‌ಗೆ ಮಾಜಿ ಸಚಿವ ಮುರುಗೇಶ ನಿರಾಣಿ ಭರ್ಜರಿ ಆಫರ್ ನೀಡಿದ್ದಾರೆ.
ಬೆಳಗಾವಿ ಸುವರ್ಣಸೌಧ ಮುಂದೆ ಪಂಚಮಸಾಲಿಗರ ಮೇಲೆ ಪೊಲೀಸರು ಲಾಠಿ ಜಾರ್ಜ್ ಮಾಡಿದ್ದನ್ನು ಖಂಡಿಸಿ ಬಾಗಲಕೋಟೆ ಶಿರೂರ ಅಗಸಿ ಬಳಿ ಪಂಚಮಸಾಲಿ ಸಮಾಜದಿಂದ ನಡೆದ ರಸ್ತೆ ತಡೆ, ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೆ ಸಮಾಜದ ಋಣ ತೀರಿಸಿದಂತೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬಾಳ್ಕರ್‌ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ನಾನು ಕೈಗಾರಿಕಾ ಸಚಿವನಾಗಿದ್ದ ಸಮಯದಲ್ಲಿ 2ಎ ಮೀಸಲಾತಿ ಸಮಾಜಕ್ಕೆ ಒದಗಿಸಿಕೊಟ್ಟರೆ ಸಹೋದರಿ, ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಬೆಳಗಾವಿಯಿಂದ ಕುಂದಾ ತಂದು, ಬಂಗಾರದ ಕಿರೀಟ ಹಾಕುವುದಾಗಿ ಹೇಳಿಕೆ ನೀಡಿದ್ದೀರಿ. ಈಗ ಅವರದ್ದೇ ಸರ್ಕಾರ ಬಂದು ಒಂದೂವರೆ ವರ್ಷ ಆಯ್ತು, ಈಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲಿ ಅಂತ ಮುರುಗೇಶ್ ನಿರಾಣಿ ಸವಾಲು ಹಾಕಿದ್ದಾರೆ. ಅಲ್ಲದೇ ಪಂಚಮಸಾಲಿ ಮೀಸಲಾತಿ ಕೊಟ್ಟರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಒಂದು ಕೆಜಿ ಬಂಗಾರ ಕೊಟ್ಟು ಸನ್ಮಾನ ಮಾಡ್ತೇನೆ ಅಂತಲೂ ಮುರುಗೇಶ್ ನಿರಾಣಿ ಚಿನ್ನದಂತಾ ಆಫರ್ ಕೊಟ್ಟಿದ್ದಾರೆ
ವಿಕಲ ಚೇತನರ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನ: ಲಕ್ಷ್ಮೀ ಹೆಬ್ಬಾಳಕರ್
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಹಿತಕಾಯುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಎಂಆರ್‌ಡಬ್ಲ್ಯು (ವಿವಿಧ್ಯೋದ್ದೇಶ ಪುನರ್ವಸತಿ ಕಾರ್ಯಕರ್ತರು), ವಿಆರ್‌ಡಬ್ಲ್ಯು(ಗ್ರಾಮೀಣ ಪುನವರ್ಸತಿ ಕಾರ್ಯಕರ್ತರು) ಹಾಗೂ ಯುಆರ್‌ಡಬ್ಲ್ಯು(ನಗರ ಪುನರ್ವಸತಿ ಕಾರ್ಯಕರ್ತರ) ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿ ಸುವರ್ಣವಿಧಾನಸೌಧದ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವಕರ್ನಾಟಕ, ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, ನೌಕರಿ ಖಾಯಂ, ಗೌರವಧನ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.
MRW, VRW ಹಾಗೂ URW ಕಾರ್ಯಕರ್ತರಿಗೆ ಸದ್ಯ 9 ಸಾವಿರ ಗೌರವ ಧನ ಸಿಗುತ್ತಿದ್ದು, ಇದರಲ್ಲಿಯೇ ಸ್ವತಂತ್ರವಾಗಿ ಸ್ವಾಭಿಮಾನಿಗಳಾಗಿ ಬದುಕು ಕಟ್ಟಿಕೊಂಡು ಇದ್ದೀರಾ. ಕನಿಷ್ಠ ವೇತನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಶೀಘ್ರವೇ ನಿಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಗಲಿವೆ ಎಂದು ಹೇಳಿದರು.
ಕಳೆದ ಒಂದೂವರೆ ವರ್ಷಗಳಿಂದ ವಿಕಲ ಚೇತನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವೆ. ಜನ ಕೊಟ್ಟ ಅಧಿಕಾರವನ್ನು ಸೂಕ್ತ ರೀತಿಯಲ್ಲಿ ಬಳಸಿ ಕೊಳ್ಳುತ್ತಿದ್ದೇನೆ. ನವಕರ್ನಾಟಕ ಸಂಘಟನೆ ಎಲ್ಲರ ಕಣ್ಣನ್ನು ತೆರೆಸುವ ಕೆಲಸ ಮಾಡುತ್ತಿದೆ. ಸ್ವಾಭಿಮಾನಿಯಾಗಿ ಬದುಕು ಕಂಡಿಕೊಂಡಿರುವವರ ಬೇಡಿಕೆಗಳನ್ನು ಈಡೇರಿಸಲು ನಾನು ಸದಾ ಬದ್ಧನಾಗಿರುತ್ತೇನೆ. ಕನಿಷ್ಠ ವೇತನ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಗಮನಕ್ಕೆ ತರಲಿದ್ದೇನೆ ಎಂದು ಸಚಿವರು ಭರವಸೆ ನೀಡಿದರು. ಈ ವೇಳೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಸಂಸ್ಥಾಪಕ ಅಧ್ಯಕ್ಷರಾದ ಅಂಬಾಜಿ ಮೇಟಿ, ಗೌರವಾಧ್ಯಕ್ಷರಾದ ದತ್ತಾತ್ರೇಯ ಆರ್.ಕುಡಕಿ, ರಾಜ್ಯಾಧ್ಯಕ್ಷರಾದ ಫಕೀರ್‌ಗೌಡ ಸಿ ಪಾಟೀಲ್ ಸೇರಿದಂತೆ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.












Click it and Unblock the Notifications