ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಆರ್‌ಎಸ್‌ ಸಮೀಪ ಸ್ಫೋಟ: ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಗಣಿ ಸಚಿವ ಮುರುಗೇಶ್ ನಿರಾಣಿ!

|
Google Oneindia Kannada News

ಬೆಂಗಳೂರು, ಜು. 12: "ಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಭಾಗಿಯಾಗಿರುವುದು ಕಂಡು ಬಂದರೆ ತಕ್ಷಣವೇ ಅಂತಹವರನ್ನು ಸೇವೆಯಿಂದ ಅಮಾನತು ಪಡಿಸಿ, ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆಂದು" ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ಆರ್‌ ನಿರಾಣಿ ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಈ ವಾರ ಮಂಡ್ಯ ಜಿಲ್ಲೆಯ ಗಣಿಗಾರಿಕೆ ನಡೆಯುವ ಪ್ರದೇಶಗಳಿಗೆ ಸಂಸದರು, ಶಾಸಕರು, ವಿಧಾನ ಪರಿಷತ್‌, ಸದಸ್ಯರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮಾಧ್ಯಮದರವರ ಜೊತೆ ಖುದ್ದು ನಾನೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ಒಂದು ವೇಳೆ ಭೇಟಿಯ ಸಂದರ್ಭದಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಶಾಮಿಲಾಗಿರುವುದು ಕಂಡು ಬಂದರೆ ಅಂತಹವರನ್ನು ಸ್ಥಳದಲ್ಲಿಯೇ ಅಮಾನತು ಪಡಿಸುತ್ತೇನೆ. ನಮ್ಮ ಸರ್ಕಾರ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದಕ್ಕೆ ಜಗ್ಗದೆ ಕಾನೂನು ಕ್ರಮ ಜರುಗಿಸುತ್ತದೆ" ಎಂದು ತಿಳಿಸಿದರು.

ಕೆಆರ್‌ಎಸ್ ಸುತ್ತಲೂ ಅಕ್ರಮ ಗಣಿಗಾರಿಕೆ: ಕುತೂಹಲ ಮೂಡಿಸಿದ ಸುಮಲತಾ-ಮುರುಗೇಶ್ ನಿರಾಣಿ ಭೇಟಿ!ಕೆಆರ್‌ಎಸ್ ಸುತ್ತಲೂ ಅಕ್ರಮ ಗಣಿಗಾರಿಕೆ: ಕುತೂಹಲ ಮೂಡಿಸಿದ ಸುಮಲತಾ-ಮುರುಗೇಶ್ ನಿರಾಣಿ ಭೇಟಿ!

ಕಳೆದ ಫೆಬ್ರವರಿಯಲ್ಲಿ ಪರಿಶೀಲನೆ

ಕಳೆದ ಫೆಬ್ರವರಿಯಲ್ಲಿ ಪರಿಶೀಲನೆ

"ಕಳೆದ ಪೆಬ್ರವರಿ 22ರಂದು ನಾನೇ ಮಂಡ್ಯ ಜಿಲ್ಲೆಯ ಗಣಿಗಾರಿಕ ಪ್ರದೇಶಗಳಿಗೆ ಸಂಸದರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಕಳೆದ ಮೂರು ತಿಂಗಳಿಂದ ಕೆ.ಆರ್‌.ಎಸ್‌ ಅಣೆಕಟ್ಟಿನ ಸುತ್ತಮುತ್ತಲ 15 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಕಾರಿಕೆ ನಡೆಸಲು ಅವಕಾಶ ಕೊಟ್ಟಿಲ್ಲ" ಎಂದು ಸ್ಪಷ್ಟಪಡಿಸಿದರು.

"ಕೆಲವು ಗಣಿಕಾರಿಕೆ ಕಂಪನಿಗಳು ಕಾನೂನು ಬಾಹಿರವಾಗಿ ಗಣಿಕಾರಿಕೆ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದ ತಕ್ಷಣ, ಅವುಗಳಿಗೆ ದಂಡ ವಿಧಿಸಿ ಯಾವುದೇ ರೀತಿಯ ಚಟುವಟಿಕೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ" ಎಂದು ಸಚಿವ ಮುರುಗೇಶ್ ನಿರಾಣಿ ವಿವರಿಸಿದರು.

ಗಣಿಕಾರಿಕೆ ನಿಲ್ಲಿಸಿದ್ದೇವೆ

ಗಣಿಕಾರಿಕೆ ನಿಲ್ಲಿಸಿದ್ದೇವೆ

"ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಕಾರಿಕೆ ನಡೆಯುತ್ತದೆ ಎಂದು ಸಂಸದರು ನಮ್ಮ ಗಮನಕ್ಕೆ ತಂದ ಕೂಡಲೇ ಖುದ್ದು ನಾನೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ" ಎಂದು ಸಚಿವ ನಿರಾಣಿ ಭರವಸೆ ಕೊಟ್ಟಿದ್ದಾರೆ.

"ಮಂಡ್ಯ ಜಿಲ್ಲೆಯಲ್ಲಿ ಒಟ್ಟು 38 ಗಣಿಕಾರಿಕೆಗಳನ್ನು ನಿಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಣಿಕಾರಿಕೆ ನಡೆಯುತ್ತಿಲ್ಲ. ಒಂದು ವೇಳೆ ನಮ್ಮ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇವೆ" ಎಂದಿದ್ದಾರೆ.

ಪ್ರಯೋಗಿಕ ಸ್ಫೋಟ ಪರೀಕ್ಷೆ

ಪ್ರಯೋಗಿಕ ಸ್ಫೋಟ ಪರೀಕ್ಷೆ

"ಪುಣೆಯಲ್ಲಿರುವ ಕೇಂದ್ರ ಜಲ ಮತ್ತು ಇಂಧನ ಸಂಶೋಧನಾ ಸಂಸ್ಥೆ ಮೂಲಕ ಕೆಆರ್‌ಎಸ್ ಅಣೆಕಟ್ಟನ ಸುತ್ತಮುತ್ತಲೂ ಪ್ರಯೋಗಿಕವಾಗಿ ಸ್ಪೋಟಕ ವಸ್ತಗಳನ್ನು ಬಳಸುವ ಕುರಿತಾಗಿ ಪರೀಕ್ಷೆ ನಡೆಸಲು ತೀಮಾನಿಸಲಾಗಿದೆ. ಅದರಿಂದ ಎಷ್ಟು ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಕೆ ಮಾಡಬಹುದು? ಅದರಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಈ ಹಿಂದೆಯೇ ಈ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಕೊರೊನಾವೈರಸ್ ಸಂಕಷ್ಟದ ಕಾರಣದಿಂದಾಗಿ ವಿಳಂಬವಾಗಿದೆ. ತಕ್ಷಣವೇ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ" ಎಂದು ತಿಳಿಸಿದ್ದಾರೆ.

Recommended Video

ಮಗಳ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ! | Oneindia Kannada
ಸಂಸದೆ ಸುಮಲತಾ ಭೇಟಿ ಕುರಿತು

ಸಂಸದೆ ಸುಮಲತಾ ಭೇಟಿ ಕುರಿತು

"ಸಂಸದೆ ಸುಮಲತಾ ಅಂಬರೀಷ್ ಅವರು, ಕೆಆರ್‌ ಎಸ್‌ ಅಣೆಕಟ್ಟು, ಮಂಡ್ಯದ ಬಗ್ಗೆ ಕಳಕಳಿ ಹಾಗೂ ಸಾವಜನಿಕರ ಬಗ್ಗೆ ಕಳಕಳಿ ಇಟ್ಟುಕೊಂಡು ಈ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಸಕಾರ ಯಾವುದೇ ಕಾರಣಕ್ಕೂ ಆಕ್ರಮ ಗಣಿಕಾರಿಕೆಗೆ ಅವಕಾಶ ಕೊಡುವುದಿಲ್ಲ" ಎಂದು ಸಚಿವ ನಿರಾಣಿ ಹೇಳಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅವರು ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿದ್ದರು. ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಭೇಟಿ ಸಂದರ್ಭದಲ್ಲಿ ದಾವಣಗೆರೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರು ಉಪಸ್ಥಿತರಿದ್ದರು.

English summary
Mines and Geology Minister Murugesh Nirani on Monday warned of stringent action against those indulging in illegal mining activities including government officials. The minister said the government will not spare anyone no matter how powerful they are. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X