Get Updates
Get notified of breaking news, exclusive insights, and must-see stories!

ಮುರುಘಾ ಮಠ ಸ್ವಾಮೀಜಿಗೆ ನ್ಯಾಯಾಂಗ ಹೋರಾಟದಲ್ಲಿ ಹಿನ್ನಡೆ

ಬೆಂಗಳೂರು, ಮಾರ್ಚ್‌ 12: ಅತ್ಯಾಚಾರದಂತಹ ಗಂಭೀರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಸ್ವಾಮೀಜಿಗೆ ನ್ಯಾಯಾಂಗ ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ.

ಹೈಕೋರ್ಟ್ ಅವರ ವಿರುದ್ಧದ ಅತ್ಯಾಚಾರ ಹಾಗೂ ಪೋಕ್ಸೋ ಆರೋಪ ರದ್ದು ಮಾಡಲು ನಿರಾಕರಿಸಿದೆ. ಹಾಗಾಗಿ ಸ್ವಾಮೀಜಿ ಇದೀಗ ಆ ಎರಡು ಆರೋಪಗಳನ್ನು ಎದುರಿಸಲೇಬೇಕಿದೆ. ಅವರ ವಿರುದ್ಧ ವಿವಿಧ ಕಾಯಿದೆಯ ಸೆಕ್ಷನ್‌ಗಳಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.

Murugha Mutt Sree Case HC Refuse To Quash POSCO Charges

ಆದರೆ, ಹೊಸದಾಗಿ ಆರೋಪ ನಿಗದಿ ಮಾಡಿ, ಪ್ರಕ್ರಿಯೆ ಮುಂದುವರಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿದೆ. ಡಾ. ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ.

ನ್ಯಾಯಾಲಯದ ಆದೇಶವೇನು?: ಪ್ರಾಸಿಕ್ಯೂಷನ್ ಬಿಂಬಿಸಿದ್ದನ್ನು ಆಧರಿಸಿ ಆರೋಪ ನಿಗದಿ ಮಾಡುವಾಗ ವಿಶೇಷ ನ್ಯಾಯಾಲಯವು ಕೇವಲ ಅಂಚೆ ಕಛೇರಿಯಂತೆ ವರ್ತಿಸಬಾರದಿತ್ತು. ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ-1988ರ ಸೆಕ್ಷನ್‌ಗಳಾದ 3(ಎಫ್), 3(ಸಿ), 3(5) ಮತ್ತು 7 ಮುರುಘಾ ಮಠಕ್ಕೆ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ಸಮನ್ವಯ ಪೀಠ ಆದೇಶದಲ್ಲಿ ಹೇಳಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ-1989ರ ಸೆಕ್ಷನ್‌ಗಳಾದ 3(1)(ಡಬ್ಲ್ಯು) (i)(ii), 3(2)(v)(v-a) ಇಲ್ಲಿ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಅಲ್ಲದೆ, ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ-2015ರ ಸೆಕ್ಷನ್ 75 ಅನ್ನು ತಪ್ಪಾಗಿ ಮುರುಘಾ ಶರಣರಿಗೆ ಅನ್ವಯಿಸಲಾಗಿದ್ದು, ಇದು ಪ್ರಕರಣದಲ್ಲಿ ಎರಡನೇ ಆರೋಪಿ ಬಸವಶ್ರೀಗೆ ಅನ್ವಯಿಸುತ್ತದೆ. ಮುರುಘಾ ಶ್ರೀ ವಿರುದ್ಧ ತಪ್ಪಾಗಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ವರದಿಯಾಗುವುದಕ್ಕೂ ಮುನ್ನ 3.5 ವರ್ಷಗಳ ಹಿಂದೆ ಸಾಕ್ಷ್ಯ ನಾಶಪಡಿಸಲಾಗಿದ್ದು, ಐಪಿಸಿ ಸೆಕ್ಷನ್ ೨೦೧ರ ಅಡಿ ತಪ್ಪಾಗಿ ಸಾಕ್ಷ್ಯ ನಾಶ ಆರೋಪ ಹೊರಿಸಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

'ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 376(2)ಎನ್ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ-2012ರ ಸೆಕ್ಷನ್ 4 ಮತ್ತು 6ರ ಅಡಿ ಆರೋಪ ಮುಂದುವರಿಯಲಿವೆ' ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

'ಆರೋಪ ನಿಗದಿ ಎಂಬುದು ಸಮಗ್ರ ವರದಿಯಾಗಿದ್ದು, ಈ ಆದೇಶದಲ್ಲಿನ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಆರೋಪಿ ಮುರುಘಾ ಶರಣರ ವಿರುದ್ಧ ಮರು ಆರೋಪ ನಿಗದಿ ಮಾಡಬೇಕು. ಈ ನೆಲೆಯಲ್ಲಿ ಅರ್ಜಿಗಳನ್ನು ಭಾಗಶಃ ಪುರಸ್ಕರಿಸಲಾಗಿದ್ದು, 13/4/2023 ಮತ್ತು 20/4/2023ರಂದು ವಿಶೇಷ ನ್ಯಾಯಾಲಯ ಮಾಡಿರುವ ಆರೋಪ ನಿಗದಿ ಆದೇಶಗಳನ್ನು ರದ್ದುಗೊಳಿಸಿದೆ.

ಪ್ರಕರಣದ ಹಿನ್ನೆಲೆ: ಮುರುಘಾ ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ್ದರು. ನಂತರ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಿದ್ದರು.

ಆನಂತರ ಮತ್ತಿಬ್ಬರು ಬಾಲಕಿಯರು ಮುರುಘಾ ಶರಣರ ವಿರುದ್ದ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಈ ಪ್ರಕರಣದಲ್ಲಿ 2023ರ ನವೆಂಬರ್‌ನಲ್ಲಿ ಶರಣರಿಗೆ ಹೈಕೋರ್ಟ್‌ನಿಂದ ಜಾಮೀನು ದೊರೆತಿದ್ದು, ಚಿತ್ರದುರ್ಗ ಪ್ರವೇಶ ನಿರ್ಬಂಧಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+