ಬಿಜೆಪಿಯಿಂದ ಹಣ ಪಡೆದ ಮುಸ್ಲಿಮರು ಕಾಂಗ್ರೆಸ್‌ಗೆ ಮತ ಹಾಕಿದರು: ಮಾಜಿ ಸಚಿವ ಎಂಟಿಬಿ ನಾಗರಾಜ್ ವಿವಾದ
ಬೆಂಗಳೂರು, ಜೂನ್ 13: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಮುಸ್ಲಿಂ ಸಮುದಾಯವೇ ಕಾರಣ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇದು ರಾಜ್ಯದಲ್ಲಿ ವಿವಾದವನ್ನು ಹುಟ್ಟುಹಾಕುವ ಎಲ್ಲ ಲಕ್ಷಣಗಳು ಕಾಣುತ್ತಿವೆ.
ಬಿಜೆಪಿಯಿಂದ ಹಣ ಪಡೆದರೂ ಮುಸ್ಲಿಂ ಸಮುದಾಯದವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ನಾಗರಾಜ್ ಆರೋಪಿಸಿದ್ದಾರೆ.

ಹೊಸಕೋಟೆಯಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 'ಮುಸ್ಲಿಮರಿಗೆ ಹಣ ನೀಡಬೇಡಿ ಎಂದು ಬಹಳಷ್ಟು ಜನರು ಹೇಳಿದ್ದರು' ಎಂದು ನಾಗರಾಜ್ ಹೇಳಿದ್ದಾರೆ.
'ಅವರಲ್ಲಿ ಕೆಲವರು ಕುರಾನ್ ಮತ್ತು ಅಲ್ಲಾಹನ ಮೇಲೆ ವಾಗ್ದಾನ ಮಾಡಿದರು. ದೇವರ ಹೆಸರಿನಲ್ಲಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಹಣ ತೆಗೆದುಕೊಂಡರು. ಆದರೆ, ಕಾಂಗ್ರೆಸ್‌ಗೆ ಮತ ನೀಡಿದರು' ಎಂದು ಅವರು ತಿಳಿಸಿದ್ದಾರೆ.
'ಪ್ರತಿದಿನ ನಮಾಜ್ ಮಾಡುವ ಮತ್ತು ದೇವರನ್ನು ಪ್ರಾರ್ಥಿಸುವ ಈ ಜನರನ್ನು ನಾನು ಕೇಳುತ್ತೇನೆ. ನೀವು ಕಾಂಗ್ರೆಸ್‌ಗೆ ಮತ ನೀಡುವುದಿದ್ದರೆ ನಮ್ಮಿಂದ ಬಿಜೆಪಿ ಏಕೆ ಹಣ ತೆಗೆದುಕೊಂಡಿದ್ದೀರಿ? ನಮಗೆ ಉತ್ತರಿಸಿ' ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ.
ನೀವು ಕಾಂಗ್ರೆಸ್‌ಗೆ ಮತ ಹಾಕಬಹುದು. ಅದು ಬೇರೆ ಪ್ರಶ್ನೆ. ಆದರೆ ನಮ್ಮ ಜನರು ನಿಮಗೆ ನೀಡಿದ ವಸ್ತುಗಳನ್ನು ಮತ್ತು ಹಣವನ್ನು ಹೇಗೆ ತೆಗೆದುಕೊಂಡಿರಿ ಎಂದು ಪ್ರಶ್ನಿಸಿದ್ದಾರೆ.
ಎಂಟಿಬಿ ನಾಗರಾಜ್ ಅವರು ವಿಧಾನಸಭಾ ಚುನಾವಣೆಯಲ್ಲಿ ಹೊಸಕೋಟೆಯಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್‌ನ ಶರತ್ ಬಚ್ಚೇಗೌಡ ವಿರುದ್ಧ 5,075 ಮತಗಳಿಂದ ಸೋತಿದ್ದಾರೆ. ನಾಗರಾಜ್ ಭಾಷಣದ ತುಣುಕುಗಳು ಮಂಗಳವಾರ ಸಾಮಾಜಿಕ ಮಾಧ್ಯಮ ಮತ್ತು ವಾಟ್ಸಾಪ್‌ಗಳಲ್ಲಿ ವ್ಯಾಪಕವಾಗಿ ಹರಡುತ್ತಿವೆ.
ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಸತತ ಎರಡನೇ ಬಾರಿಗೆ ಪ್ರತಿಸ್ಪರ್ಧಿ ಎಂಟಿಬಿ ನಾಗರಾಜ್ ಅವರನ್ನು ಸೋಲಿಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರವನ್ನು ಸರ್ಕಾರವನ್ನು ಕೆಡವಲು ಬಿಜೆಪಿ ರೂಪಿಸಿದ ಆಪರೇಷನ್ ಕಮಲದಲ್ಲಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದರು. ಆ ನಂತರ ಬಿಜೆಪಿಗೆ ಸೇರಿ ಸಚಿವರೂ ಆಗಿದ್ದರು.
2೦19 ರ ಡಿಸೆಂಬರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಅವರು ಎಂಟಿಬಿ ನಾಗರಾಜ್ ಅವರನ್ನು ಸೋಲಿಸಿದರು. ಎಂಎಲ್‌ಎ ಚುನಾವಣೆಯಲ್ಲಿ ಸೋತರೂ, ಎಂಎಲ್‌ಸಿ ಸ್ಥಾನವನ್ನು ಗಿಟ್ಟಿಸಿ ಸಚಿವರಾಗಿಯೂ ಎಂಟಿಬಿ ಅಧಿಕಾರ ವಹಿಸಿಕೊಂಡರು.
ಹೊಸಕೋಟೆಯಲ್ಲಿ ಬಚ್ಚೇಗೌಡ ಕುಟುಂಬ ಮತ್ತು ಎಂಟಿಬಿ ಕುಟುಂಬದವರು ಪ್ರತಿಸ್ಪರ್ಧಿಗಳಾಗಿದ್ದಾರೆ. ಶರತ್ ಅವರ ತಂದೆ ಬಚ್ಚೇಗೌಡರು ಐದು ಬಾರಿ ಗೆದ್ದಿದ್ದಾರೆ. 1978, 1985, 1994, 1999 ಮತ್ತು 2008ರಲ್ಲಿ ಎಂಎಲ್‌ಎ ಆಗಿ ಆಯ್ಕೆಯಾಗಿದ್ದಾರೆ. ಎಂಟಿಬಿ ನಾಗರಾಜ್ ಅವರು 2004, 2013 ಮತ್ತು 2018 ರಲ್ಲಿ ಗೆದ್ದಿದ್ದಾರೆ.
ಭಾರತದ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾದ ಎಂಟಿಬಿ ನಾಗರಾಜ್ ಅವರು 2018 ಮತ್ತು 2013 ರಲ್ಲಿ ಬಚ್ಚೇಗೌಡರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸಕೋಟೆಯಿಂದ ಗೆದ್ದಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications