'ದಲಿತರಿಗೆ ಮುಖ್ಯಮಂತ್ರಿಯಾಗುವ ಭಾಗ್ಯ ಕೊಡಿ'

Posted By:
Subscribe to Oneindia Kannada

ಬೆಂಗಳೂರು, ಮೇ 21 : ಕರ್ನಾಟಕದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ಹಿರಿಯ ಕಾಂಗ್ರೆಸ್ ನಾಯಕ ಎಂ.ವಿ.ರಾಜಶೇಖರನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆಯೇ ದಲಿತ ಮುಖ್ಯಮಂತ್ರಿ ಪಟ್ಟದ ಬೇಡಿಕೆ ಇಟ್ಟರು.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ರಾಜೀವ್ ಗಾಂಧಿ ಪುಣ್ಯತಿಥಿ ಕಾರ್ಯಕ್ರಮಲ್ಲಿ ಮಾತನಾಡಿದ ರಾಜಶೇಖರನ್ ಅವರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಭಾಗ್ಯಗಳನ್ನು ನೀಡಿದ್ದಾರೆ. ಈಗ ದಲಿತ ಭಾಗ್ಯ ಕೊಡಲಿ. ದಲಿತ ನಾಯಕರನ್ನು ಮುಖ್ಯಮಂತ್ರಿ ಮಾಡಲಿ' ಎಂದು ಹೇಳಿದರು. [ಚಿತ್ರಗಳು : ರಾಜೀವ್ ಗಾಂಧಿಗೆ ನಮನ ಸಲ್ಲಿಸಿದ ನಾಯಕರು]

rajasekharan

'ದಲಿತರಿಗೆ ಉನ್ನತ ಸ್ಥಾನ ನೀಡುವುದು ರಾಜೀವ್ ಗಾಂಧಿ ಅವರ ಆಶಯಗಳಲ್ಲಿ ಒಂದಾಗಿತ್ತು. ಜಿ.ಪರಮೇಶ್ವರ ಅವರನ್ನು ಸಿಎಂ ಮಾಡುವ ಮೂಲಕ ಸಿದ್ದರಾಮಯ್ಯ ಅವರು ದಲಿತ ಭಾಗ್ಯ ಕೊಡಲಿ. ಕಾಂಗ್ರೆಸ್ ಪಕ್ಷಕ್ಕೂ ಇದು ಬಹಳ ಮುಖ್ಯವಾಗಿದೆ' ಎಂದು ಸಿದ್ದರಾಮಯ್ಯ ಅವರ ಸಮ್ಮಖದಲ್ಲಿಯೇ ಬೇಡಿಕೆ ಮುಂದಿಟ್ಟರು. [ಮತ್ತೆ ದಲಿತ ಮುಖ್ಯಮಂತ್ರಿ ಚರ್ಚೆ ಹುಟ್ಟು ಹಾಕಿದ ಪರಂ]

ಇದೇ ಮೊದಲಲ್ಲ : ದಲಿತರಿಗೆ ಮುಖ್ಯಮಂತ್ರಿ ಪಟ್ಟ ಕೊಡುವ ಕುರಿತು ಚರ್ಚೆ ನಡೆಯುತ್ತಿರುವುದು ಇದೇ ಮೊದಲಲ್ಲ. ಹಲವು ಬಾರಿ ಈ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆದಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿಗಳು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ. ['ದಲಿತರು ಮುಖ್ಯಮಂತ್ರಿಯಾಗಲು ಇದು ಸಕಾಲವಲ್ಲ']

ಕಳೆದ ತಿಂಗಳು ಬೆಂಗಳೂರಿನಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, 'ದೇಶಕ್ಕೆ ಸ್ವಾತಂತ್ರ್ಯ ಬಂದು 6 ದಶಕಗಳು ಕಳೆದರೂ ದಲಿತರಿಗೆ ಸಂಪೂರ್ಣವಾಗಿ ರಾಜಕೀಯ ಅಧಿಕಾರ ಸಿಕ್ಕಿಲ್ಲ. ನಿರ್ಣಯ ತೆಗೆದುಕೊಳ್ಳುವ ಸ್ಥಾನದಲ್ಲಿ ದಲಿತರು ಇಲ್ಲ. ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಆಗಿಲ್ಲ' ಎಂದು ಹೇಳಿದ್ದರು.

26ರಂದು ದೆಹಲಿಗೆ ಸಿಎಂ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನಾರಚನೆ ಮಾಡಲು ಮುಂದಾಗಿದ್ದಾರೆ. ಮೇ ತಿಂಗಳ ಅಂತ್ಯದಲ್ಲಿ ಸಂಪುಟ ಪುನಾರಚನೆ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ ನಾಯಕರು ಮೇ 26ರಂದು ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರಿಗೆ ಈಗಾಗಲೇ ಸೂಚನೆ ಕೊಟ್ಟಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief Minister post for Dalit leader resounded again in Karnataka. Former Union Minister and senior Congress leader M.V. Rajasekharan demanded Chief Minister post for KPCC president and Home Minister Dr.G.Parameshwara.
Please Wait while comments are loading...