ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನನ್ನ ಉದ್ದೇಶ: ಜನಾರ್ದನ ರೆಡ್ಡಿ
ಕೊಪ್ಪಳ, ಜನವರಿ 20: ಯಾರನ್ನೂ ಸೋಲಿಸಲು ನಾನು ಅಭ್ಯರ್ಥಿಗಳನ್ನು ಹಾಕುವುದಿಲ್ಲ, ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಉದ್ದೇಶ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದರು.
ಈ ಕುರಿತು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸ್ಪರ್ದೆ ಮಾಡುವವರೆಲ್ಲ ಹೊಸ ಅಭ್ಯರ್ಥಿಗಳಾಗಲಿದ್ದಾರೆ ಎಂದು ಹೇಳಿದರು.
ಇನ್ನೂ ನಮ್ಮ ಪಕ್ಷದಲ್ಲಿ ವರ್ಚಸ್ಸು ಇರುವ ಅಭ್ಯರ್ಥಿಗಳು ಇದ್ದಾರೆ, ಒಳ್ಳೆಯ ನಾಗರೀಕತೆ ಇರುವುವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡುತ್ತೇವೆ. ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಯಾದಗಿರಿ, ಕಲಬುರಗಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಯಾರಾಗಬೇಕೆಂದು ಗೊತ್ತಾಗಿದೆ. ಎಲ್ಲಿಯೇ ನಾನು ಹೋದರು ಕೂಡ ಅಲ್ಲಿ ಅಭ್ಯರ್ಥಿಗಳು ಗೆಲ್ಲಬೇಕು. ಯಾರ ಹೇಳಿಕೆಗಳಿಗೂ ನಾನು ಕೌಂಟರ್ ನೀಡುವುದಿಲ್ಲ ಎಂದು ಜನಾರ್ದನ ರೆಡ್ಡಿ ತಿಳಿಸಿದರು.

ಇನ್ನೂ ಈಗಾಗಲೇ ಹೊಸ ಪಕ್ಷ ಕಟ್ಟಿರುವ ಜನಾರ್ದನ ರೆಡ್ಡಿಯಿಂದ ಬಿಜೆಪಿ ನಾಯಕರಿಗೆ ದೊಡ್ಡ ಸಂಕಷ್ಟ ಎದುರಾಗಿದೆ ಎಂದ ಹೇಳಲಾಗಿದೆ. ಇತ್ತ ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದು ಪಕ್ಷಾಂತರ ಪರ್ವ ಶುರುವಾಗಿದ್ರೆ, ಇನ್ನೊಂದು ಕಡೆ ರಾಜ್ಯಾದ್ಯಂತ ಮೂರು ಪಕ್ಷಗಳು ಸಹ ಭರ್ಜರಿ ತಯಾರಿಯನ್ನ ನಡೆಸಿವೆ. ಇತ್ತ ಯಾವ ಕ್ಷೇತ್ರಕ್ಕೆ ಯಾರನ್ನ ಅಭ್ಯರ್ಥಿಯನ್ನಾಗಿ ಹಾಕ್ಬೇಕು ಎಂದು ಈಗಾಗಲೇ ಸಾಲು ಸಾಲು ಸಭೆಗಳನ್ನ ನಡೆಸಿರುವ ಮಾಜಿ ಸಚಿವ ಜನಾರ್ದನ್ ರೆಡ್ಡಿ ಒಳ್ಳೆಯ ನಾಗರೀಕತೆ ಇರುವುವರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಜನಾರ್ದನ್ ರೆಡ್ಡಿ ಹೊಸ ಪಕ್ಷಕ್ಕೆ ಬಿಜೆಪಿ ಮುಖಂಡ ಸೇರ್ಪಡೆ
ಬಿಜೆಪಿ ಮುಖಂಡ, ಬಳ್ಳಾರಿ ಜಿಲ್ಲಾ ಲಿಂಗಾಯತ ಸಮುದಾಯದ ನಾಯಕ ಗೋನಾಳು ರಾಜಶೇಖರಗೌಡ ಅವರು ಮಾಜಿ ಸಚಿವ ಜನಾರ್ಧನ್ ರೆಡ್ಡಿ ಅವರ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.












Click it and Unblock the Notifications