ಡಿಕೆಶಿ ಯಾವ ಲೆಕ್ಕ, ನಮ್ ರೇಂಜ್ ಏನಿದ್ರೂ ರಾಹುಲ್ ಗಾಂಧಿ: ಜಾರಕಿಹೊಳಿ
Recommended Video
ಬೆಂಗಳೂರು, ಬೆಳಗಾವಿ, ಏ 24: ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಕಾಂಗ್ರೆಸ್ಸಿಗೆ ಮುಗ್ಗುಲಮುಳ್ಳಂತಾಗಿರುವ ರಮೇಶ್ ಜಾರಕಿಹೊಳಿ, ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಉತ್ಸುಕರಾಗಿದ್ದಾರಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
ಡಿ ಕೆ ಶಿವಕುಮಾರ್ ಸಂಧಾನಕ್ಕೆ ಸಿದ್ದ, ನಿಮ್ಮ ಪ್ರತಿಕ್ರಿಯೆ ಏನು ಎನ್ನುವ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ, ಅವರು ಯಾರು ನನ್ನ ಜೊತೆ ಸಂಧಾನ ಮಾಡುವುದಕ್ಕೆ ಎಂದು ಖಾರವಾಗಿ ಉತ್ತರಿಸಿದ್ದಾರೆ.
ಅವರೊಬ್ಬರು ಲೀಡರೇ ಅಲ್ಲ, ನಮ್ಮ ರೇಂಜ್ ಏನಿದ್ರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಭರ್ಜರಿಯಾಗಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಕತ್ತಲಲ್ಲಿ ಕೂತು ಕಲ್ಲು ಹೊಡೆಯುವ ರಾಜಕೀಯ ನನ್ನದಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ರಮೇಶ್ ಅವರ ಈ ಹೇಳಿಕೆ ಹಲವು ಚರ್ಚೆಗೆ ನಾಂದಿ ಹಾಡಿದೆ. ರಾಹುಲ್ ಗಾಂಧಿಯವರು ಮಾತುಕತೆಗೆ ಕರೆದರೆ ರಮೇಶ್ ಮತ್ತೆ ದೆಹಲಿಗೆ ದೌಡಾಯಿಸಲಿದ್ದಾರಾ ಎನ್ನುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ರಮೇಶ್ ಅವರ ಈ ಧಮ್ಕಿಗೆಲ್ಲ ಕೇರ್ ಮಾಡುವುದಿಲ್ಲ, ಅವರಿಗೆ ಕಾಂಗ್ರೆಸ್ ಪಕ್ಷ ಕೇಳಿದ್ದನ್ನು ಕೊಟ್ಟಿತ್ತು, ಅವರನ್ನು ಸಚಿವರನ್ನಾಗಿ ಮಾಡಲಾಗಿತ್ತು, ಅವರು ಶಾಸಕರೂ ಆಗಿದ್ದಾರೆ. ಆದರೆ ಇಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎನ್ನುತ್ತಿದ್ದಾರೆ ಎಂದು ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದರು.
ರಮೇಶ್ ಜಾರಕಿಹೊಳಿ ಅವರ ಆಸೆಯನ್ನು ಆ ಭಗವಂತ ಪೂರೈಸಲಿ ಎಂದಷ್ಟೇ ನಾನು ಕೇಳಿಕೊಳ್ಳುವುದು ಎಂದು ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದರು.












Click it and Unblock the Notifications