ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿ ಯಾವ ಲೆಕ್ಕ, ನಮ್ ರೇಂಜ್ ಏನಿದ್ರೂ ರಾಹುಲ್ ಗಾಂಧಿ: ಜಾರಕಿಹೊಳಿ

|
Google Oneindia Kannada News

Recommended Video

Lok Sabha Elections 2019 :ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ | Oneindia Kannada

ಬೆಂಗಳೂರು, ಬೆಳಗಾವಿ, ಏ 24: ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಕಾಂಗ್ರೆಸ್ಸಿಗೆ ಮುಗ್ಗುಲಮುಳ್ಳಂತಾಗಿರುವ ರಮೇಶ್ ಜಾರಕಿಹೊಳಿ, ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಉತ್ಸುಕರಾಗಿದ್ದಾರಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.

ಲೋಕಸಭೆ ಚುನಾವಣೆ ವಿಶೇಷ ಪುಟ

ಡಿ ಕೆ ಶಿವಕುಮಾರ್ ಸಂಧಾನಕ್ಕೆ ಸಿದ್ದ, ನಿಮ್ಮ ಪ್ರತಿಕ್ರಿಯೆ ಏನು ಎನ್ನುವ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ, ಅವರು ಯಾರು ನನ್ನ ಜೊತೆ ಸಂಧಾನ ಮಾಡುವುದಕ್ಕೆ ಎಂದು ಖಾರವಾಗಿ ಉತ್ತರಿಸಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ಧಮ್ಕಿ: ಡಿಕೆಶಿ ಡೋಂಟ್ ಕೇರ್‌ರಮೇಶ್ ಜಾರಕಿಹೊಳಿ ರಾಜೀನಾಮೆ ಧಮ್ಕಿ: ಡಿಕೆಶಿ ಡೋಂಟ್ ಕೇರ್‌

ಅವರೊಬ್ಬರು ಲೀಡರೇ ಅಲ್ಲ, ನಮ್ಮ ರೇಂಜ್ ಏನಿದ್ರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಭರ್ಜರಿಯಾಗಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಕತ್ತಲಲ್ಲಿ ಕೂತು ಕಲ್ಲು ಹೊಡೆಯುವ ರಾಜಕೀಯ ನನ್ನದಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

My range is Rahul Gandhi and not DK Shivakumar: Ramesh Jarkiholi

ರಮೇಶ್ ಅವರ ಈ ಹೇಳಿಕೆ ಹಲವು ಚರ್ಚೆಗೆ ನಾಂದಿ ಹಾಡಿದೆ. ರಾಹುಲ್ ಗಾಂಧಿಯವರು ಮಾತುಕತೆಗೆ ಕರೆದರೆ ರಮೇಶ್ ಮತ್ತೆ ದೆಹಲಿಗೆ ದೌಡಾಯಿಸಲಿದ್ದಾರಾ ಎನ್ನುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಸಹೋದರರ ಆರೋಪ-ಪ್ರತ್ಯಾರೋಪ: ಇಂದೇ ರಮೇಶ್ ಜಾರಕಿಹೊಳಿ ರಾಜೀನಾಮೆ? ಸಹೋದರರ ಆರೋಪ-ಪ್ರತ್ಯಾರೋಪ: ಇಂದೇ ರಮೇಶ್ ಜಾರಕಿಹೊಳಿ ರಾಜೀನಾಮೆ?

ರಮೇಶ್ ಅವರ ಈ ಧಮ್ಕಿಗೆಲ್ಲ ಕೇರ್ ಮಾಡುವುದಿಲ್ಲ, ಅವರಿಗೆ ಕಾಂಗ್ರೆಸ್ ಪಕ್ಷ ಕೇಳಿದ್ದನ್ನು ಕೊಟ್ಟಿತ್ತು, ಅವರನ್ನು ಸಚಿವರನ್ನಾಗಿ ಮಾಡಲಾಗಿತ್ತು, ಅವರು ಶಾಸಕರೂ ಆಗಿದ್ದಾರೆ. ಆದರೆ ಇಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎನ್ನುತ್ತಿದ್ದಾರೆ ಎಂದು ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದ್ದರು.

ರಮೇಶ್ ಜಾರಕಿಹೊಳಿ ಅವರ ಆಸೆಯನ್ನು ಆ ಭಗವಂತ ಪೂರೈಸಲಿ ಎಂದಷ್ಟೇ ನಾನು ಕೇಳಿಕೊಳ್ಳುವುದು ಎಂದು ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದರು.

English summary
D K Shivakumar is not yet all a leader, my range is Rahul Gandhi : Ramesh Jarkiholi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X