ಯತೀಂದ್ರ ಟಿಕೆಟ್ ಆಕಾಂಕ್ಷಿಯಲ್ಲ, ಟಿಕೆಟ್‌ಗೆ ಅರ್ಜಿ ಹಾಕಿಲ್ಲ

ಬೆಂಗಳೂರು, ಮಾರ್ಚ್ 15 : 'ನನ್ನ ಮಗ ಯತೀಂದ್ರ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಲ್ಲ. ಟಿಕೆಟ್ ಪಡೆಯಲು ಅರ್ಜಿಯನ್ನು ಹಾಕಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, 'ನನ್ನ ಮಗ ಕಾಂಗ್ರೆಸ್ ಪಕ್ಷದ ಟಿಕೆಟ್ ಕೇಳಿಲ್ಲ. ವರುಣಾ ಕ್ಷೇತ್ರದಿಂದ ಅಭ್ಯರ್ಥಿಯಾಗುವ ಕುರಿತು ಜನರು ನಿರ್ಧರಿಸಬೇಕು' ಎಂದು ಹೇಳಿದರು.

'ಪಕ್ಷದ ಹೈಕಮಾಂಡ್ ಸಮೀಕ್ಷೆ ನಡೆಸಿ ಅಭ್ಯರ್ಥಿ ಯಾರಾಗಬೇಕು? ಎಂದು ನಿರ್ಧರಿಸಲಿದೆ. ಪಕ್ಷದಲ್ಲಿರುವ ಎಲ್ಲರೂ ಟಿಕೆಟ್ ಕೇಳಬಹುದು. ಆದರೆ, ವೀಕ್ಷಕರು ಸಮೀಕ್ಷೆಯ ವರದಿ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡುತ್ತಾರೆ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Karnataka

ವರುಣಾ ಕ್ಷೇತ್ರದ ಹಾಲಿ ಶಾಸಕರು ಸಿದ್ದರಾಮಯ್ಯ. ಆದರೆ, 2018ರ ಚುನಾವಣೆಯಲ್ಲಿ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಆದ್ದರಿಂದ, ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಆದರೆ, ಟಿಕೆಟ್ ಆಕಾಂಕ್ಷಿಗಳಿಂದ ಕಾಂಗ್ರೆಸ್ ಅರ್ಜಿ ಆಹ್ವಾನ ಮಾಡಿತ್ತು. ಯತೀಂದ್ರ ಅವರು ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+