ಜೆಡಿಎಸ್-ಬಿಜೆಪಿ ಮೈತ್ರಿ; ದೇವೇಗೌಡರಿಗೆ ಮಂಡಿಯೂರಿ ನಮಸ್ಕರಿಸಿದ ಪ್ರತಾಪ್ ಸಿಂಹ!
ಮೈಸೂರು, ಸೆಪ್ಟೆಂಬರ್ 12: ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಜೋರಾಗಿ ಸದ್ದು ಮಾಡುತ್ತಿದ್ದು, ಇತ್ತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಅವರಿಗೆ ಸಂಸದ ಪ್ರತಾಪ್ ಸಿಂಹ ಮಂಡಿಯೂರಿ ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ.
ಹೌದು, ಈ ಬಾರಿ ಲೋಕಸಭಾ ಚುನಾವಣೆದಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನ ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿ ಮೈಸೂರು ಜನತೆ ಗೆ ಹೇಳಿದ್ದು, ಪುತ್ರನನ್ನ ಮೈಸೂರು ಕ್ಷೇತ್ರದಿಂದ ಕಣಕ್ಕಿಳಿಸಲು ಸಿಎಂ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

ಹೀಗಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಪ್ರಾಬಲ್ಯ ಹೊಂದಿದ್ದು, ಈಗಿನಿಂದಲೇ ಜೆಡಿಎಸ್ ಮತ ಬ್ಯಾಂಕ್ಗೆ ಕೈಹಾಕಿದ ಸಂಸದ ಪ್ರತಾಪ್ ಸಿಂಹ ಜೆಡಿಎಸ್ ನಾಯಕರ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಕಾಲಿಗೆ ಮಂಡಿಯೂರಿ ನಮಸ್ಕರಿಸಿದ್ದು, ಆಶೀರ್ವಾದ ಪಡೆದಿದ್ದಾರೆ.
ಜೆಡಿಎಸ್ ನಾಯಕ ಆಶೀರ್ವಾದದಿಂದ ಸಂಸದ ಪ್ರತಾಪ್ ಸಿಂಹ ತಮ್ಮ ಹ್ಯಾಟ್ರಿಕ್ ಗೆಲುವಿಗೆ ರಣತಂತ್ರ ಹೆಣೆಯುತ್ತಿದ್ದಾರೆ. ಜೆಡಿಎಸ್ ನಾಯಕ ಸಹಾಯದಿಂದ ಕಾಂಗ್ರೆಸ್ ನಾಯಕರಿಗೆ ಠಕ್ಕರ್ ಕೊಡಲು ಭರ್ಜರಿ ತಂತ್ರಗಾರಿಕೆಯನ್ನ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂ ಭಾನುವಾರ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಭೇಟಿ ನೀಡಿದ್ದರು. ಈ ವೇಳೆ ದೇವೇಗೌಡ ಅವರುಗಳನ್ನು ಭೇಟಿಯಾಗಿ ಪ್ರತಾಪ್ ಸಿಂಹ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೈಸೂರು ಭಾಗದ ಶಾಸಕರು ಹಾಗೂ ಮುಖಂಡರ ಜೊತೆಗೂ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನೂ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಅವರನ್ನ ಭೇಟಿಯಾದ ಕುರಿತು ಸಂಸದ ಪ್ರತಾಪ್ ಸಿಂಹ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
ಪ್ರತಾಪ್ ಸಿಂಹರನ್ನ ಗೆಲ್ಲಿಸಬೇಡಿ: ಸಿದ್ದರಾಮಯ್ಯ
ಸಂಸದ ಪ್ರತಾಪ್ ಸಿಂಹ ಅವರನ್ನ ಗೆಲ್ಲಿಸಬೇಡಿ,ಮುಂದಿನ ಬಾರೀ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಮೈಸೂರಿನ ಜನತೆಗೆ ಹೇಳಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಿ. ಭ್ರಷ್ಟಾ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯಲ್ಲಿ ದೂರವಿಡಿ ಎಂದು ಹೇಳಿದರು.
ಈ ಬಾರೀ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅಂತ ಇದ್ದಾರೆ, ಅವರನ್ನ ಆಯ್ಕೆ ಮಾಡಿ ಕಳುಹಿಸಬೇಡಿ, ಅವರು ಸಮಾಜಕ್ಕೆ ವಿರೋಧವಾದ ಶಕ್ತಿಗಳು. ಕಾಂಗ್ರೆಸ್ ಅಂದ್ರೆ ಧೃಡವಾಗಿರುವ ಪಕ್ಷ, ಕಾಂಗ್ರೆಸ್ ಪಕ್ಷ ದಲಿತರಿಗೆ, ಬಡವರಿಗೆ ಇರುವಂತಹ ಪಕ್ಷ ಕಾಂಗ್ರೆಸ್. ಲೋಕಸಭಾ ಚುನಾವಣೆಯಲ್ಲಿ ಜನರು ಉತ್ತಮ ತೀರ್ಮಾನ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಬೇಕು ಎಂದು ಹೇಳಿದರು.












Click it and Unblock the Notifications