Mysore Sandal Brand: ಮೈಸೂರು ಸ್ಯಾಂಡಲ್ ಉತ್ಪನ್ನ: ನಟಿ ತಮನ್ನಾ ಭಾಟಿಯಾ ಆಯ್ಕೆಗೆ ಇದೇ ಕಾರಣ: ಸಚಿವ ಎಂ.ಬಿ ಪಾಟೀಲ್
Mysore Sandal Brand Ambassador: ಮೈಸೂರು ಸ್ಯಾಂಡಲ್ ಉತ್ಪನ್ನಗಳ ರಾಯಭಾರಿಯನ್ನಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿಕೊಂಡಿರುವ ಬಗ್ಗೆ ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಉತ್ಪನ್ನಗಳ ರಾಯಭಾರಿಯನ್ನಾಗಿ ಯಾಕೆ ಆಯ್ಕೆ ಎನ್ನುವ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಉತ್ಪನ್ನಗಳ ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದರ ಕುರಿತು ಕೆಲ ತಿಂಗಳ ಹಿಂದೆಯೇ ಸ್ಪಷ್ಟನೆ ನೀಡಿದ್ದೆ. ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಮಾರುಕಟ್ಟೆ ವಿಸ್ತರಣೆಗೆ ಮತ್ತು ವಿದೇಶಕ್ಕೆ ರಫ್ತು ಹೆಚ್ಚಿಸಲು ಜನಪ್ರಿಯ ರಾಯಭಾರಿಯ ಅವಶ್ಯಕತೆ ಇದ್ದು, ಅದಕ್ಕಾಗಿ ಬ್ರಾಂಡಿಂಗ್-ಮಾರ್ಕೆಟಿಂಗ್ ತಜ್ಞರೂ ಸೇರಿದಂತೆ ಒಂದು ಸಮಿತಿ ರಚಿಸಲಾಗಿತ್ತು.

ಸಮಿತಿಯು ನಮ್ಮ ರಾಜ್ಯದ 2-3 ನಟಿಯರೂ ಸೇರಿದಂತೆ 5-6 ಬಹುಭಾಷಾ ನಟಿಯರ ಹೆಸರುಗಳನ್ನು ಅಂತಿಮಗೊಳಿಸಿದ್ದರು. ಆದರೆ ಕೆಲವರು ಈಗಾಗಲೇ ಬೇರೆ ಬ್ರಾಂಡ್ ನೊಂದಿಗೆ ರಾಯಭಾರಿ ಆಗಿರುವುದು ಮತ್ತು ಕೆಲವರು ನಮ್ಮ ಮಾರ್ಗಸೂಚಿಗೆ ಹೊಂದಿಕೆಯಾಗದ ಕಾರಣ; ಅರ್ಹತೆ ಆಧಾರದ ಮೇಲೆ ಸಮಿತಿಯು ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದೆ. ಬೆಳವಣಿಗೆಯ ದೃಷ್ಠಿಯಿಂದ ಇದು ಕೆ.ಎಸ್.ಡಿ.ಎಲ್.ನ ವ್ಯವಹಾರಿಕ ನಿರ್ಧಾರ ಎಂದು ಸಚಿವ ಎಂ. ಬಿ ಪಾಟೀಲ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೈಸೂರು ಸ್ಯಾಂಡಲ್: ನಮ್ಮ ಗುರಿ
1. ಕೆ.ಎಸ್.ಡಿ.ಎಲ್. ಉತ್ಪನ್ನಗಳಿಗೆ ವಿಶ್ವದಾದ್ಯಂತ ಬೇಡಿಕೆ ಹೆಚ್ಚಿಸಿ ಮಾರುಕಟ್ಟೆ ವಿಸ್ತರಿಸುವುದು.
2. 2030ರ ವೇಳೆಗೆ 5,000 ಕೋಟಿ ರೂ. ವ್ಯವಹಾರ.
3. ಕಳೆದ ವರ್ಷ 450 ಕೋಟಿ ಲಾಭ ಮಾಡಿದ್ದು, ಈ ವರ್ಷ 500 ಕೋಟಿ ರೂ. ದಾಟುವ ನಿರೀಕ್ಷೆ ಇದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications