ಗಂಗಾವತಿಯಲ್ಲೇ ಮೈಸೂರು ಸಿಲ್ಕ್ ರೇಷ್ಮೆ ಸೀರೆ ಕೊಳ್ಳಿ
ಕೊಪ್ಪಳ, ಜುಲೈ 21 : ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಗಂಗಾವತಿಯಲ್ಲಿ ಮೈಸೂರು ಸಿಲ್ಕ್ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದೆ. ಜುಲೈ 22ರಿಂದ 27ರವರೆಗೆ ಈ ಪ್ರದರ್ಶನ ನಡೆಯಲಿದ್ದು, ಶೇ 25ರಷ್ಟು ರಿಯಾಯಿತಿ ಇದೆ.
ವರಮಹಾಲಕ್ಷ್ಮೀ ಹಬ್ಬ ಹಾಗೂ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮೈಸೂರು ಸಿಲ್ಕ್ ರೇಷ್ಮೆ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಜು. 22 ರಂದು ಬೆಳಗ್ಗೆ 11 ಗಂಟೆಗೆ ಗಂಗಾವತಿ-ಆನೆಗೊಂದಿ ರಸ್ತೆಯಲ್ಲಿನ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಮೇಳಕ್ಕೆ ಚಾಲನೆ ದೊರೆಯಲಿದೆ. [ಸೀರೆ ಖರೀದಿಗೆ ಬಂದವರು, 100 ಸೀರೆ ಕದ್ದರು]

ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ 4ನೇ ಬಾರಿಗೆ ಗಂಗಾವತಿಯಲ್ಲಿ ರೇಷ್ಮೆ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಹಮ್ಮಿಕೊಂಡಿದೆ. ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆಯ ತನಕ ಮೇಳಕ್ಕೆ ಆಗಮಿಸಿ ಸೀರೆಗಳನ್ನು ಖರೀದಿ ಮಾಡಬಹುದಾಗಿದ್ದು, ಶೇ 25ರಷ್ಟು ರಿಯಾಯಿತಿ ನೀಡಲಾಗಿದೆ. [ಮೊಳಕಾಲ್ಮೂರು ಸೀರೆಗೂ ಹತ್ತಿದ ತೆಲಂಗಾಣ ಕಿಚ್ಚು]
ವಿವಿಧ ಬಗೆಯ ಸೀರೆಗಳು : ಸಾಂಪ್ರದಾಯಿಕ ಸೀರೆಗಳ ಜೊತೆ ಕೆಎಸ್ಐಸಿಯ ನಾಜೂಕಾದ ವಿನ್ಯಾಸದ ಸಂಗ್ರಹಿತ 'ಕ್ರೇಪ್ ಡಿ ಚೈನ್' ಸೀರೆ, ಕಸೂತಿ, ಎಂಬ್ರಾಯಿಡರಿ ಸೀರೆಗಳನ್ನು ಮೇಳದಲ್ಲಿ ಕಾಣಬಹುದಾಗಿದೆ. ಸಾದಾ ಮುದ್ರಿತ ಸೀರೆ, ಸ್ಕಾರ್ಫ್ ಇತ್ಯಾದಿ ಉತ್ಪನ್ನಗಳು ಮೇಳದಲ್ಲಿರುತ್ತವೆ. [2015ರ ಸರ್ಕಾರಿ ರಜೆಗಳು]
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications