ಕುಕ್ಕರ್, ಐರನ್‌ ಬಾಕ್ಸ್ ಹಂಚಿಕೆ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ದೂರು

ಮೈಸೂರು, ಸೆಪ್ಟಂಬರ್ 24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2023ರ ವಿಧಾನಸಭಾ ಚುನಾವಣೆ ಗೆಲುವಿಗಾಗಿ ಆಮಿಷ ಒಡ್ಡಿರುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ವಾಮಮಾರ್ಗದ ಮೂಲಕ ಚುನಾವಣೆಗೆಯಲ್ಲಿ ಗೆದ್ದಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. \

ಮೈಸೂರು ಜಿಲ್ಲೆ ಬಿಜೆಪಿ ಘಟಕದ ಮುಖಂಡರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ರಾಜ್ಯದಲ್ಲಿ ಕಳೆದ ವಿಧಾನಸಭೆಗು ಮೊದಲು ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಮತದಾರರನ್ನು ಸೆಳೆಯಲು ಕುಕ್ಕರ್, ಐರನ್ ಪೆಟ್ಟಿಗೆಗಳನ್ನು ಹಂಚಿದ್ದಾರೆ. ಈ ಬಗ್ಗೆ ಸ್ವತಃ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರೇ ಬಹಿರಂಗವಾಗಿ ಹೇಳಿರುವುದೇ ಸಾಕ್ಷಿ ಎಂದು ಬಿಜೆಪಿ ತಿಳಿಸಿದೆ.

Mysuru BJP Leader Complaint Filed Against CM Siddaramaiah Kukkar, Iron Box Distribution In Election

ಈ ಸಂಬಂಧ ಈಗಾಗಲೇ ರಾಜ್ಯ ಚುನಾವಣೆ ಆಯೋಗಕ್ಕೆ ದೂರು ನೀಡಿರು ಬಿಜೆಪಿಯು ಇದೀಗ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕೋರಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಶಾಸಕ ಮತ್ತು ಸಿಎಂ ಪುತ್ರ ಯತಿಂದ್ರ ಸಿದ್ದ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್, ಕುಕ್ಕರ್ ಹಂಚಿಕೆಗೆ ಬಗ್ಗೆ ಮಡಿವಾಳ ಸಮಾಜ ಉದ್ಘಾಟನಾ ಸಮಾರಂಭದಲ್ಲಿ ಹೇಳಿದ್ದರು. ಇದಾದ ಬಳಿಕ ಈ ವಿಚಾರ ಮುನ್ನೆಲೆಗೆ ಬಂದಿದೆ.

ಚುನಾವಣೆಯಲ್ಲಿ ಆಮಿಷ ಒಡ್ಡುವುದು ಸಂವಿಧಾನ ವಿರೋಧಿ ಆಗಿದೆ. ಅಲ್ಲದೇ ಚುನಾವಣೆ ಆಯೋಗದ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆ ಆಗಿದೆ. ಈ ಸಂಬಂಧ ಅವರ ಮೇಲೆ ಕಾನೂನು ರೀತಿಯ ಕ್ರಮಗಳು ಜರುಗಿಸುವಂತೆ ವಿಪಕ್ಷಗಳು ಆಕ್ರೋಶ ಹೊರಹಾಕಿವೆ. ಇತ್ತೀಚಗಷ್ಟೇ ಆಮ್ ಆದ್ಮಿ ಪಕ್ಷವು ಸಹಿತ ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರ ಮೇಲೆ ಕ್ರಮ ಜರುಗಿಸುವಂತೆ ಕೋರಿ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿ ಮನವಿ ಮಾಡಿತ್ತು.

ಕೆಲವು ದಿನಗಳ ಹಿಂದೆ ಜನತಾ ಪಕ್ಷವು ಸಹ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿತ್ತು. ಚುನಾವಣೆ ಸಂದರ್ಭದಲ್ಲಿ ಚುನಾವಣೆ ನಿಯಮಗಳನ್ನು ಸಿದ್ದರಾಮಯ್ಯನವರು ಉಲ್ಲಂಘಿಸಿದ್ದಾರೆ. ಸಮುದಾಯವಾರು ಆಸೆ, ಆಮಿಷ ಒಡ್ಡವು ಮೂಲಕ ಪ್ರಜಾಪ್ರತಿನಿಧಿ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಸಂವಿಧಾನ ವಿರೋಧಿಯು ಆಗಿದೆ ಎಂದು ಪಕ್ಷದ ನಾಗೇಶ್ ಎನ್ ಅವರು ಚುನಾವಣೆ ಆಯೋಗಕ್ಕೆ ದೂರು ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+