ಮೈಸೂರು ಮಹಾನಗರ ಪಾಲಿಕೆ ಇನ್ಮುಂದೆ 'ಬೃಹತ್ ಮೈಸೂರು ಮಹಾನಗರ ಪಾಲಿಕೆ': ಈ ಪ್ರದೇಶಗಳು ಸೇರ್ಪಡೆ
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಲವು ಹೆಸರುಗಳು ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಮೈಸೂರು ನಗರ ಪಾಲಿಕೆ ಎಂದು ಮರುನಾಮಕರಣ ಮಾಡಿದೆ. ಗ್ರೇಟರ್ ಬೆಂಗಳೂರು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಹುದಿನದ ಕನಸಾದ ಮೈಸೂರು ಮಹಾನಗರ ಪಾಲಿಕೆ ಇನ್ಮುಂದೆ ಗ್ರೇಟರ್ ಮೈಸೂರು ಕನಸು ಈಡೇರಿಸಿದೆ.
ಸಂಕ್ರಾಂತಿ ಹಬ್ಬಕ್ಕೆ ಮೈಸೂರು ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹಲವು ವರ್ಷಗಳಿಂದ ಲಕ್ಷಾಂತರ ಮೈಸೂರು ಜನತೆಯ ಕನಸು ನನಸಾಗು ಕಾಲ ಬಂದಿದ್ದು, ಮೈಸೂರು ಮಹಾನಗರ ಪಾಲಿಕೆಯನ್ನು ವಿಸ್ತರಿಸುವ ಮೂಲಕ 'ಬೃಹತ್ ಮೈಸೂರು ಮಹಾನಗರ ಪಾಲಿಕೆ'ಯಾಗಿ ಮರುನಾಮಕರಣ ಮಾಡಲು ಸರ್ಕಾರ ಅಧಿಕೃತ ಗುರುವಾರ ಆದೇಶ ಹೊರಡಿಸಿದೆ.

ಮೈಸೂರು ಜನತೆಯ ಬಹುದಿನದ ಕನಸಿನಂತೆ ಮೈಸೂರು ಮಹಾನಗರ ಪಾಲಿಕೆ ಈಗ ಬೃಹತ್ ಮೈಸೂರು ಮಹಾನಗರ ಪಾಲಿಕೆಯಾಗಿ ವಿಸ್ತರಣೆಗೊಂಡಿದೆ. ಹೊರವಲಯದ ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳು ಸೇರ್ಪಡೆಯಾಗಿದ್ದು, 86.31 ಚ.ಕಿ.ಮೀ. ವ್ಯಾಪ್ತಿ 341.44 ಚ.ಕಿ.ಮೀ.ಗೆ ವಿಸ್ತರಿಸಲಾಗಿದೆ. ಹೂಟಗಳ್ಳಿ ನಗರ ಸಭೆ, ಹಲವಾರು ಪಟ್ಟಣ ಪಂಚಾಯಿತಿಗಳು ಮತ್ತು ಹತ್ತಿರದ ಹಳ್ಳಿಗಳನ್ನು ಸೇರಿಸಲು ನಿಗಮದ ಮಿತಿಗಳನ್ನು ವಿಸ್ತರಿಸಲಾಗಿದೆ.
ಮೈಸೂರು ಮಹಾನಗರ ಪಾಲಿಕೆ ಇನ್ಮುಂದೆ ಬೃಹತ್ ಮೈಸೂರು ಮಹಾನಗರ ಪಾಲಿಕೆಯಾಗಿ ವಿಸ್ತರಣೆಗೊಂಡಿದ್ದು, ಆಡಳಿತಾತ್ಮಕ ಸುಧಾರಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ವಿಸ್ತರಣೆಯಿಂದಾಗಿ, ಹೊರವಲಯದ ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳ ಪ್ರದೇಶಗಳೂ ಈಗ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಟ್ಟಿವೆ. ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾದ ದಿನದಿಂದಲೇ ಇದು ಜಾರಿಗೆ ಬರಲಿದೆ ಎಂದು ತಿಳಿಸಲಾಗಿದೆ.
86.31 ಚದರ ಕಿ.ಮೀ.ನಷ್ಟಿರುವ ಪಾಲಿಕೆಯ ವ್ಯಾಪ್ತಿಯನ್ನು 341.44 ಚದರ ಕಿ.ಮೀ.ಗೆ ಹಿಗ್ಗಿಸಲಾಗಿದೆ. ಇದರಿಂದಾಗಿ 11.46 ಲಕ್ಷರಷ್ಟಿದ್ದ ಜನಸಂಖ್ಯೆ ಜೊತೆಗೆ ಪಾಲಿಕೆ ವ್ಯಾಪ್ತಿಗೆ ಹೆಚ್ಚುವರಿಯಾಗಿ ₹ 2.7 ಲಕ್ಷ ಜನರು ಸೇರ್ಪಡೆಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಿಸಿ, ಆ ಭಾಗದ ಹಳ್ಳಿಗಳು, ಪಟ್ಟಣ ಪಂಚಾಯಿತಿಗಳನ್ನು ಒಳಗೊಂಡ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರೂಪಿಸುವ ಒಂದು ಯೋಜನೆಯಾಗಿದ್ದು, ಇದು ನಗರದ ಮೂಲಸೌಕರ್ಯ ಅಭಿವೃದ್ಧಿ, ಸುಗಮ ಆಡಳಿತ ಮತ್ತು ಭವಿಷ್ಯದ ಜನಸಂಖ್ಯೆಯ ಅಗತ್ಯಗಳನ್ನು ಪೂರೈಸುವ ಗುರಿ ಹೊಂದಿದೆ.
ಯಾವೆಲ್ಲಾ ಪ್ರದೇಶಗಳು ಸೇರ್ಪಡೆ?
ಈ ಮೊದಲು ಇದ್ದ ಮೈಸೂರು ಮಹಾನಗರಪಾಲಿಕೆ ಸೇರಿದಂತೆ ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಕಡಕೊಳ, ಬೋಗಾದಿ ಪಟ್ಟಣ ಪಂಚಾಯಿತಿಗಳು. ಹಾಗೆಯೇ,ಸಂಪೂರ್ಣ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ ಆಲನಹಳ್ಳಿ ಗ್ರಾಮ ಪಂಚಾಯಿತಿಯ ಆಲನಹಳ್ಳಿ ಮತ್ತು ಲಲಿತಾದ್ರಿಪುರ ಗ್ರಾಮಗಳು, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಯ ಸಿದ್ದಲಿಂಗಪುರ, ಬೆಲವತ್ತ, ಕೆಸರೆ, ಮೇಟಗಳ್ಳಿ ಗ್ರಾಮಗಳು ಸೇರ್ಪಡೆಯಾಗಿವೆ.
ಇಲವಾಲ ಗ್ರಾಮ ಪಂಚಾಯಿತಿಯ ಇಲವಾಲ, ಕರಕನಹಳ್ಳಿ, ಮೈದನಹಳ್ಳಿ, ಮೇಗಳಾಪುರ ಗ್ರಾಮಗಳು, ಧನಗಳ್ಳಿ ಗ್ರಾಮ ಪಂಚಾಯಿತಿಯ ಧನಗಳ್ಳಿ, ಯಡಹಳ್ಳಿ, ಕೆಂಚಲಗೂಡು, ಹಾಲಾಳು, ಚೌಡಹಳ್ಳಿ (ಕೋಟೆಹುಂಡಿ) ಗ್ರಾಮಗಳು. ಮಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಮಲ್ಲಹಳ್ಳಿ-ಬೀರಿಹುಂಡಿ, ಗೋಹಳ್ಳಿ, ಕುಮಾರಬೀಡು, ಬಲ್ಲಹಳ್ಳಿ ಗ್ರಾಮಗಳು. ನಾಗನಹಳ್ಳಿ ಗ್ರಾಮ ಪಂಚಾಯಿತಿಯ ಶ್ಯಾದನಹಳ್ಳಿ ಮತ್ತು ನಾಗವಾಲ ಗ್ರಾಮ ಪಂಚಾಯಿತಿಯ ನಾಗವಾಲ, ಬೊಮ್ಮನಹಳ್ಳಿ, ಹುಯಿಲಾಳು ಗ್ರಾಮಗಳು ಸಹ ಈಗ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಟ್ಟಿವೆ.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications