ಪೌರಕಾರ್ಮಿಕರ ಬಹುದಿನಗಳ ಕನಸು ನನಸು; 158 ಕುಟುಂಬಗಳಿಗೆ ಸಿಕ್ತು ಸ್ವಂತ ಮನೆ ಭಾಗ್ಯ!

ಮೈಸೂರು: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರ ಶ್ರಮ ಮತ್ತು ಸೇವೆಗೆ ಗೌರವ ಸಲ್ಲಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಪೌರಕಾರ್ಮಿಕರ ಬದುಕಿನಲ್ಲಿ ಗೌರವ, ಸ್ವಾಭಿಮಾನ ಹಾಗೂ ಭದ್ರತೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಮೈಸೂರಿನ ನಾಯ್ಡು ನಗರ ಮುಖ್ಯರಸ್ತೆಯ ಎಸ್‌ಟಿಪಿ ಪ್ಲಾಂಟ್ ಸಮೀಪದ ಹಳೆ ಕೆಸರೆಯಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ 158 ಪೌರಕಾರ್ಮಿಕರಿಗಾಗಿ ನಿರ್ಮಿಸಿರುವ ಜಿ+3 ಮಾದರಿಯ ವಸತಿ ಸಮುಚ್ಚಯವನ್ನು ಉದ್ಘಾಟಿಸಿ ಮಾತನಾಡಿದರು.

Mysuru Civic Workers Get Housing Boost 158-Family Residential Complex Inaugurated Under Gruha Bhagya Scheme

122 ಪೌರಕಾರ್ಮಿಕ ಕುಟುಂಬಕ್ಕೆ ಮನ ಭಾಗ್ಯ

ಒಟ್ಟು 158 ಪೌರಕಾರ್ಮಿಕರಿಗಾಗಿ ವಸತಿ ಸಮುಚ್ಚಯ ನಿರ್ಮಿಸಲಾಗಿದ್ದು, ಈ ಪೈಕಿ 122 ಪೌರಕಾರ್ಮಿಕ ಕುಟುಂಬಗಳನ್ನು ಪಾರದರ್ಶಕ ಲಾಟರಿ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿ ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಫಲಾನುಭವಿಗಳಿಗೆ ಮನೆ ಹಂಚಿಕೆ ಪತ್ರಗಳನ್ನು ವಿತರಿಸಲಾಗಿದೆ. ಪೌರಕಾರ್ಮಿಕರ ಸ್ವಂತ ಮನೆಯ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಸಂವಿಧಾನ ದಿನಾಚರಣೆಯ ನೆಪದಲ್ಲಿ ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನ? ಮೈಸೂರಿನಲ್ಲಿ ಮಹತ್ವದ ಸಭೆ
ಸಂವಿಧಾನ ದಿನಾಚರಣೆಯ ನೆಪದಲ್ಲಿ ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನ? ಮೈಸೂರಿನಲ್ಲಿ ಮಹತ್ವದ ಸಭೆ

ನನ್ನ ತಂದೆಯವರಾದ ಸಿದ್ದರಾಮಯ್ಯ ಅವರು 2014-15ನೇ ಸಾಲಿನಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರ ಸ್ವಂತ ಮನೆಯ ಕನಸನ್ನು ನನಸಾಗಿಸುವ ಉದ್ದೇಶದಿಂದ ಗೃಹಭಾಗ್ಯ ಯೋಜನೆಯನ್ನು ಜಾರಿಗೆ ತಂದು ಭದ್ರ ಬುನಾದಿ ಹಾಕಿದ್ದರು. ಅಲ್ಲದೆ, ಸುಮಾರು 29 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದರು. ಇದು ಪೌರಕಾರ್ಮಿಕರ ಬದುಕಿನಲ್ಲಿ ಭದ್ರತೆ ಮತ್ತು ಗೌರವವನ್ನು ಹೆಚ್ಚಿಸಿದ ಮಹತ್ವದ ಕ್ರಮವಾಗಿದೆ ಎಂದು ಹೇಳಿದರು.

ಪೌರಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ

ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಪ್ರತಿ ವರ್ಷ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸುವುದಾಗಿ ಘೋಷಿಸಿರುವುದರ ಜೊತೆಗೆ, ಪೌರಕಾರ್ಮಿಕರಿಗೆ ನೀಡಲಾಗುವ ಬೆಳಗಿನ ಉಪಾಹಾರದ ಅನುದಾನವನ್ನೂ ಹೆಚ್ಚಿಸಿದ್ದಾರೆ. ಪೌರಕಾರ್ಮಿಕರ ಕಲ್ಯಾಣಕ್ಕೆ ನಮ್ಮ ಸರ್ಕಾರ ನಿರಂತರವಾಗಿ ಆದ್ಯತೆ ನೀಡುತ್ತಿದೆ ಎಂದರು.

Sting Operation: ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋ ಹರಡಿದ್ದೇ ಎಚ್‌ಡಿ ಕುಮಾರಸ್ವಾಮಿ? ಕಾನೂನು ಕ್ರಮಕ್ಕೆ ಯತೀಂದ್ರ ಒತ್ತಾಯ
Sting Operation: ಸಿದ್ದರಾಮಯ್ಯ ಸ್ಟಿಂಗ್ ವಿಡಿಯೋ ಹರಡಿದ್ದೇ ಎಚ್‌ಡಿ ಕುಮಾರಸ್ವಾಮಿ? ಕಾನೂನು ಕ್ರಮಕ್ಕೆ ಯತೀಂದ್ರ ಒತ್ತಾಯ

ಹಳೆ ಕೆಸರೆಯಲ್ಲಿ ಪರ್ಯಾಯ ನಿವೇಶನ ಒದಗಿಸುವಲ್ಲಿ ನರಸಿಂಹರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ವಿಶೇಷ ಮುತುವರ್ಜಿ ವಹಿಸಿದ್ದು, ಅವರ ಸಾಮಾಜಿಕ ಕಳಕಳಿ ಮತ್ತು ಸಹಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಪೌರಕಾರ್ಮಿಕರ ಬೇಡಿಕೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಈಡೇರಿಸಲು ಸರ್ಕಾರ ಬದ್ಧವಾಗಿದ್ದು, ಅವರೊಂದಿಗೆ ಸರ್ಕಾರ ಸದಾ ಇರಲಿದೆ ಎಂದು ಭರವಸೆ ನೀಡಿದರು.

ಪೌರಕಾರ್ಮಿಕರಿಗೆ ಉತ್ತಮ ವಸತಿ

ಕಾಂಗ್ರೆಸ್ ಪಕ್ಷವು ಸಾಮಾಜಿಕ ನ್ಯಾಯದ ಆಶಯದೊಂದಿಗೆ ಶೋಷಿತರು, ಹಿಂದುಳಿದವರು ಹಾಗೂ ಶ್ರಮಿಕ ವರ್ಗದವರ ಬದುಕಿನಲ್ಲಿ ಗೌರವ ಮತ್ತು ಸ್ವಾಭಿಮಾನವನ್ನು ಹೆಚ್ಚಿಸಲು ಸದಾ ಬದ್ಧವಾಗಿದೆ. ಪೌರಕಾರ್ಮಿಕರ ಬದುಕನ್ನು ಸುಧಾರಿಸುವುದು ಕೇವಲ ಒಂದು ಯೋಜನೆಯಲ್ಲ, ಅದು ನಮ್ಮ ಸರ್ಕಾರದ ಸಾಮಾಜಿಕ ಹೊಣೆಗಾರಿಕೆಯಾಗಿದೆ. ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರಿಗೆ ಉತ್ತಮ ವಸತಿ ಮತ್ತು ಗೌರವಯುತ ಬದುಕು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರನಾಥ್, ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ, ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಅಧ್ಯಕ್ಷರಾದ ಶ್ರೀ ಎಚ್.ಡಿ. ಗಣೇಶ್, ಮೈಸೂರು ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀಮತಿ ಪುಷ್ಪವಲ್ಲಿ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಅಶೋಕ್ ಸಾಲಪ್ಪ, ಮೈಸೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಶ್ರೀ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿಗಳಾದ ಶ್ರೀ ಜಿ. ಲಕ್ಷ್ಮೀಕಾಂತ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಎಂ.ಕೆ. ಸವಿತ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+