ಮೈಸೂರು-ದರ್ಬಾಂಗ ಎಕ್ಸ್‌ಪ್ರೆಸ್ ರೈಲು ಅಪಘಾತ: ವಿ ಸೋಮಣ್ಣ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 12: ಶುಕ್ರವಾರ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತ ಬಿಚ್ಚಿಬೀಳುವಂತಿತ್ತು. ತ್ತು. ಗೂಡ್ಸ್ ರೈಲಿಗೆ ಮೈಸೂರು-ದರ್ಬಾಂಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿ ಭಾರಿ ಅನಾಹುತ ನಡೆದಿದೆ. ಆದರೆ, ಅದೃಷ್ಟವಶಾತ್ ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ. ಈ ಬಗ್ಗೆ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ ಸೋಮಣ್ಣ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದರ್ಬಾಂಗ ಎಕ್ಸ್‌ಪ್ರೆಸ್ ರೈಲು ಅಪಘಾತದಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ನಿನ್ನೆ ತುಂಬಾ ಒಳ್ಳೇ ದಿನ, ದೇವರ ದಯೆಯಿಂದ ಅಪಘಾತದಲ್ಲಿ ದೊಡ್ಡ ಅನಾಹುತ ತಪ್ಪಿದೆ ಎಂದು ಇಲಾಖೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದರು.

ಇನ್ನೂ ಈ ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ತುಂಬಾ ಒಳ್ಳೇ ದಿನ, ಅಪಘಾತದಲ್ಲಿ ದೊಡ್ಡ ಅನಾಹುತವಾಗಿಲ್ಲ. ಎಲ್ಲ ಪ್ರಯಾಣಿಕರನ್ನೂ ಮೆಮು ಟ್ರೈನ್ ಮೂಲಕ ಶಿಫ್ಟ್ ಮಾಡಲಾಗಿದೆ. . 13 ಬೋಗಿಗಳು ಹಳಿ ತಪ್ಪಿದ್ವು, ಪ್ರಯಾಣಿಕರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇಂದು ಅವರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ ಮಾಡಲಾಗುವುದು. ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಯಾವ ಕಾರಣಕ್ಕೆ ಅಪಘಾತವಾಯ್ತು ಎಂದ ತನಿಖೆ ಆಗಬೇಕಿದೆ ಎಂದು ರಾಜ್ಯ ರೈಲ್ವೆ ಸಚಿವರಾದ ವಿ ಸೋಮಣ್ಣ ಅವರು ಹೇಳಿದ್ದಾರೆ.
ನಿನ್ನೆಯೇ ಸ್ಥಳೀಯರು ರೈಲಿನಲ್ಲಿದ್ದವರನ್ನ ರಕ್ಷಿಸಿದ್ದಾರೆ. ತಮಿಳುನಾಡು ಪೊಲೀಸರು, ರೈಲ್ವೆ ಅಧಿಕಾರಿಗಳು, NDRF ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಎಲ್ಲಾ ಪ್ರಯಾಣಿಕರು ಸೇಫಾಗಿದ್ದಾರೆ. ಆದರೂ ಶ್ವಾನ ದಳದಿಂದ ಯಾರಾದ್ರೂ ನಾಪತ್ತೆಯಾಗಿದ್ದಾರಾ ಅಂತಾ ಹುಡುಕಾಟ ನಡೆದಿದೆ. ಅಲ್ಲದೇ ರೈಲ್ವೆ ಇಲಾಖೆ ಸಹಾಯವಾಣಿ ಕೂಡ ಓಪನ್ ಮಾಡಿದೆ. ಪ್ರಯಾಣಿಕರ ಬಗ್ಗೆ ಮಾಹಿತಿ ನೀಡುತ್ತಿದೆ. ಬದುಕುಳಿದ ಪ್ರಯಾಣಿಕರು ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ ಸೋಮಣ್ಣ ವಿ ಸೋಮಣ್ಣ ಅವರು ಹೇಳಿದರು.
ಘಟನೆ ಹಿನ್ನೆಲೆ ಏನು?
ಶುಕ್ರವಾರ ಮೈಸೂರಿನಿಂದ ಹೊರಟಿದ್ದ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನ KSR ರೈಲ್ವೆ ನಿಲ್ದಾಣ ದಾಟಿ ಹೋಗ್ತಿತ್ತು. ರಾತ್ರಿ 8 ಗಂಟೆ ಸುಮಾರಿಗೆ ಪೆರಂಬೂರು ದಾಟಿದ್ದ ರೈಲು, ದರ್ಬಾಂಗದತ್ತ ಪ್ರಯಾಣ ಬೆಳೆಸಿತ್ತು. 75 ಕಿಲೋಮೀಟರ್ ವೇಗದಲ್ಲಿ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು, ಕಾವರಪೇಟ್ಟೈ ತಲುಪುತ್ತಿದ್ದಂತೆ ಲೂಪ್ ಲೇನ್‌ನಲ್ಲಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. 75 km ವೇಗದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಆಗಿದೆ. ಡಿಕ್ಕಿಯಾದ ರಭಸಕ್ಕೆ ರೈಲಿನ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. 12 ರಿಂದ 13 ಬೋಗಿಗಳು ಹಳಿ ತಪ್ಪಿ ಅಕ್ಕಪಕ್ಕಕ್ಕೆ ಬಂದು ಬಿದ್ದಿದೆ.












Click it and Unblock the Notifications