ದಸರಾ ಉದ್ಘಾಟನೆ ವೇದಿಕೆಯಲ್ಲಿ ಏಕಾಏಕಿ ಸಿಟ್ಟಿಗೆದ್ದ ಸಿದ್ದರಾಮಯ್ಯ: ರೊಚ್ಚಿಗೆದ್ದು ಬೈದಿದ್ದು ಹೇಗೆ ಗೊತ್ತಾ?
ಮೈಸೂರು ಸೆಪ್ಟೆಂಬರ್ 22: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಹೇಳಿದರು.
ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು ಎಂದರು.
ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ
ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳುಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು. ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು.
ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು .
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications