ಮೈಸೂರು: ಕೇಂದ್ರದಿಂದ ಶಿಷ್ಟಾಚಾರ ಉಲ್ಲಂಘನೆ: ರಾಷ್ಟ್ರಪತಿಗೆ ಎಚ್‌ಸಿ ಮಹಾದೇವಪ್ಪ ಪತ್ರ
ಮೈಸೂರು, ನವೆಂಬರ್ 17: ಮುಖ್ಯಂತ್ರಿಗಳಿಗಾಗಿ, ರಾಜ್ಯ ಸರ್ಕಾರಕ್ಕಾಗಲಿ ತಿಳಿಸದೇ ಕೇಂದ್ರ ಸರ್ಕಾರವು ಮೈಸೂರಿನಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದೆ. ಸರ್ಕಾರಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾಹಿತಿ ಆಕ್ರೋಶ ಹೊರ ಹಾಕಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರವನ್ನು ಅವರು ತರಾಟೆಗೆ ತೆಗೆದುಕೊಂಡರು. ಮುಖ್ಯಮಂತ್ರಿಗಳಿಗಾಗಲಿ, ರಾಜ್ಯ ಸರ್ಕಾರಕ್ಕೆ ಇಲ್ಲ ಜಿಲ್ಲಾ ಉಸ್ತುವಾರಿ ಸಚಿವರಾದ ತಮಗೂ ಏನು ಹೇಳದೇ ಕೇಂದ್ರ ಸರ್ಕಾರ ಜಿಲ್ಲೆಯಲ್ಲಿ ರಾತ್ರಿ ಕಾರ್ಯಕ್ರಮ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದೆ. ಪ್ರಚಾರಕ್ಕಾಗಿ ಅಧಿಕಾರಿಗಳ ನಿಯೋಜನೆ ಮಾಡಿದೆ. ಒಟ್ಟು ಸುಮಾರು 250- 300 ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದರು.
ಕೇಂದ್ರ ಗಣತಂತ್ರ ವ್ಯವಸ್ಥೆ ದುರ್ಬಲಗೊಳಿಸುತ್ತಿದೆ
ರಾತ್ರಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಕೇಂದ್ರ ಸರ್ಕಾರದ ಅಧಿಕಾರಿಗಳು ಭಾಗವಹಿಸಿದ್ದರು. ಇಲ್ಲಿನ ಸರ್ಕಾರಕ್ಕೆ ತಿಳಿಸದೇ ಕೇಂದ್ರ ಸರ್ಕಾರ ಶಿಷ್ಟಾಚಾರ ಉಲ್ಲಂಘನೆ ಮಾಡಿದೆ. ಈ ಮೂಲಕ ಗಣತಂತ್ರ ವ್ಯವಸ್ಥೆ ದುರ್ಬಲಗೊಳಿಸಲಾಗುತ್ತಿದೆ.ಆಡಳಿತ ವೈಫಲ್ಯಗಳನ್ನು ಮರೆ ಮಾಚಲಾಗಿದೆ.
ಅಖಿಲ ಭಾರತ ಸೇವೆಯ ಅಧಿಕಾರಿಗಳು ಹಿತಾಸಕ್ತಿಯ ಪರವಾಗಿ ಕೆಲಸ ಮಾಡಬಾರದು. ಅನೇಕ ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನ ಇರುತ್ತದೆ. ರಾಜ್ಯ ಸರ್ಕಾರವನ್ನ ಕಡೆಗಣಿಸಿ ಕೇಂದ್ರ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗಿದೆ. ಇದೆಲ್ಲವು ಇದು ಗಣತಂತ್ರ ವ್ಯವಸ್ಥೆಗೆ ವಿರುದ್ಧವಾದದ್ದು.

ಬಿರ್ಸಾ ಮುಂಡಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ವಿಚಾರವಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುತ್ತೇನೆ ಎಂದು ಅವರು ತಿಳಿಸಿದರು.
ಸಿಎಂ ಪುತ್ರನ ವಿಡಿಯೋ ವೈರಲ್‌ಗೆ ಸಚಿವ ಪ್ರತಿಕ್ರಿಯೆ
ಈ ವೇಳೆ ಡಾ.ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರ ಕುರಿತು ಸುದ್ದಿಗಾರರು ಸಚಿವರನ್ನು ಪ್ರಶ್ನೆ ಮಾಡಿದರು. ಇದಕ್ಕೆ ಅವರು, ನಾನು ನೋಡೂ ಇಲ್ಲ, ಕೇಳೂ ಇಲ್ಲ, ನನಗೆ ಗೊತ್ತೇ ಇಲ್ಲ ಎಂದು ಹಾರಿಕೆಯ ಉತ್ತರ ನೀಡಿದರು.
ವರ್ಗಾವಣೆ ಮಾಡೋದು ಮುಖ್ಯಮಂತ್ರಿಯವರ ಪರಮಾಧಿಕಾರ ಎಂದು ಕೆಲವು ಭಾರಿ ಸಚಿವರು ಪುನರುಚ್ಚರಿಸಿದರು.
ಯಾರು ಏನೇ ಹೇಳಬಹುದು. ವರ್ಗಾವಣೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಅವಕಾಶ ಇಲ್ಲ. ಒಂದು ವೇಳೆ ಆ ರೀತಿ ಪ್ರಕರಣ ನಡೆದಿದ್ದರೆ, ಕಾನೂನು ತನ್ನ ಕ್ರಮ ನಿರ್ವಹಿಸಲಿದೆ ಎಂದು ಎಚ್‌ಸಿ ಮಹಾದೇವಪ್ಪ ಹೇಳಿದರು.












Click it and Unblock the Notifications