Get Updates
Get notified of breaking news, exclusive insights, and must-see stories!

Rishab Shetty: ರಿಷಬ್ ಶೆಟ್ಟಿ ಮಗಳ ಹುಟ್ಟುಹಬ್ಬದ ಸಮಾರಂಭದಲ್ಲಿ ಪ್ರತಾಪ್ ಸಿಂಹ ಭಾಗಿ

ನಿರ್ದೇಶಕರಾದ ರಿಷಬ್ ಶೆಟ್ಟಿಯವರ ಮಗಳ ಹುಟ್ಟುಹಬ್ಬದಲ್ಲಿ ಸಿನಿಮಾ ಖ್ಯಾತರೂ ಅಲ್ಲದೆ ರಾಜಕೀಯ ಗಣ್ಯರೂ ಭಾಗವಹಿಸಿದ್ದರು.

ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಕಳೆದ ದಿನ ತಮ್ಮ ಮಗಳ ಹುಟ್ಟುಹಬ್ಬವನ್ನು ಆಚರಿಸಿದರು. ಹುಟ್ಟುಹಬ್ಬದಲ್ಲಿ ಸಿನಿಮಾ ಖ್ಯಾತರೂ ಅಲ್ಲದೆ ರಾಜಕೀಯ ಗಣ್ಯರೂ ಭಾಗವಹಿಸಿದ್ದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ರಿಷಬ್ ಶೆಟ್ಟಿ ಅವರ ಮಗಳ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಿದ್ದರು. ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಖ್ಯಾತ ನಟರು, ನಿರ್ದೇಶಕರಾದ ರಿಷಬ್ ಶೆಟ್ಟಿಯವರ ಮಗಳ ಹುಟ್ಟುಹಬ್ಬದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಪ್ರಮೋದ್ ಶೆಟ್ರು, ವಾದಿರಾಜ್, ಮೈಸೂರು ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು.

 Mysuru MP Pratap Simha Attended Rishab Shettys Daughter Birthday Party

ರಿಷಬ್ ಶೆಟ್ಟಿ ತಮ್ಮ ಮಗಳ ಹುಟ್ಟುಹಬ್ಬದ ಸಲುವಾಗಿ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ವಿಡಿಯೋ ಹಂಚಿಕೊಳ್ಳುವ ಮೂಲಕ ತಮ್ಮ ಮಗಳಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನಟ ರಿಷಬ್ ಶೆಟ್ಟಿ ಅವರು ಇದೀಗ ಕಾಂತಾರ 2 ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ.

ಮಗಳ ಹುಟ್ಟು ಹಬ್ಬದ ಸಂಭ್ರಮದಲ್ಲಿ ರಿಷಬ್- ಪ್ರಗತಿ

ನಟ ರಿಷಬ್ ಶೆಟ್ಟಿ ಅವರು ಕನ್ನಡದಲ್ಲಿ ಸಾಕಷ್ಟು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಇನ್ನು ನಿರ್ದೇಶನದ ಜೊತೆಗೆ ನಾಯಕ ನಟನಾಗಿ ಕೂಡ ರಿಷಬ್ ಮಿಂಚಿದ್ದಾರೆ. ಇತ್ತೀಚೆಗಷ್ಟೇ ತೆರೆ ಕಂಡ ಕಾಂತಾರ ಚಿತ್ರ ರಿಷಬ್ ಶೆಟ್ಟಿ ಅವರಿಗೆ ದೇಶದೆಲ್ಲೆಡೆ ಖ್ಯಾತಿ ತಂದು ಕೊಟ್ಟಿದೆ.

ಕಾಂತಾರ ಯಶಸ್ಸಿನ ಬಳಿಕ ರಿಷಬ್ ಡಿವೈನ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇದೀಗ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ತಮ್ಮ ಮಗಳ ಮೊದಲನೆಯ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಮಗಳ ಹುಟ್ಟುಹಬ್ಬದ ಸಲುವಾಗಿ ದಂಪತಿಗಳು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಮಗಳಿಗೆ ಮೊದಲ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

 Mysuru MP Pratap Simha Attended Rishab Shettys Daughter Birthday Party

ಮಗಳ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಡಿಯೋ ಹಂಚಿಕೊಂಡ ರಿಷಬ್

ಕಾಂತಾರ ಸ್ಟಾರ್ ರಿಷಬ್ ಅವರ ಮಗಳು ರಾಧ್ಯ ಗೆ ಒಂದು ವರ್ಷದ ಹುಟ್ಟು ಹಬ್ಬದ ಸಂಭ್ರಮ. ತಮ್ಮ ಮಗಳ ಹುಟ್ಟುಹಬ್ಬದ ಸಲುವಾಗಿ ಮಗಳ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ಬಿಳಿ ಹಾಗೂ ಹಸಿರು ಬಣ್ಣದ ಡ್ರೆಸ್ ನಲ್ಲಿ ರಾಧ್ಯಳ ಫೋಟೋಶೂಟ್ ಬಹಳ ಅದ್ಭುತವಾಗಿ ಮೂಡಿ ಬಂದಿದೆ. ಅವರ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ರಿಷಬ್ ಅಭಿಮಾನಿಗಳು ರಾದ್ಯಾಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಕಾಂತಾರ ಅಬ್ಬರಕ್ಕೆ ಬಾಕ್ಸಾಫೀಸ್​ ಉಡೀಸ್​!
ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾದ ಬಳಿಕ ತಿಂಗಳವರೆಗೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಿದೆ. ಜೊತೆಗೆ ಈ ಸಿನಿಮಾ ಹಿಂದಿಯಲ್ಲಿ, ತೆಲುಗಿನಲ್ಲಿ ರಿಲೀಸ್ ಮಾಡಲಾಗಿದೆ. ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ.

ಸಿನಿಮಾ ರಿಲೀಸ್ ಆದ ಬಳಿಕ ಇಡೀ ದೇಶದಲ್ಲಿ ಕೇಳಿ ಬಂದ ಒಂದು ಪದ ಅಂದರೆ ಅದು ಕಾಂತಾರ. ಎಲ್ಲಿ ನೋಡಿದರೂ ನಮ್ಮ ಕನ್ನಡ ಸಿನಿಮಾದ ಬಗ್ಗೆಯೆ ಮಾತು. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸೃಷ್ಟಿಸಿರುವ ಕ್ರೇಜ್​ ಇದೆಯಲ್ಲಾ ಅದು ನಿಜಕ್ಕೂ ಸೂಪರ್ ದೂಪರ್ ಆಗಿತ್ತು. ಇತ್ತೀಚೆಗೆ ಕನ್ನಡ ಸಿನಿಮಾಗಳು ಯಾವ ಮಟ್ಟಕ್ಕೆ ಹೆಸರು ಮಾಡುತ್ತಿದೆ ಅಂದರೆ, ಎಲ್ಲ ರಾಜ್ಯದವರು ಸ್ಯಾಂಡಲ್​ವುಡ್​ನತ್ತ ಒಮ್ಮೆ ತಿರುಗಿ ನೋಡುತ್ತಿದ್ದಾರೆ. ಕೆಜಿಎಫ್ ನಂತರ ಕನ್ನಡದ ಮತ್ತೊಂದು ಸಿನಿಮಾ ಕಾಂತಾರ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗಿರುವುದು ಸಹಜವಾಗಿಯೇ ಬಿಟೌನ್ ನಿದ್ದೆ ಕೆಡಿಸಿದೆ. ಕಾಂತಾರ ಸಿನಿಮಾ ಬಳಿಕ ರಿಷಬ್ ಶೆಟ್ಟಿ ಹೆಚ್ಚು ಖ್ಯಾತಿ ಪಡೆದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+