ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
ಬೆಂಗಳೂರು,ಮಾರ್ಚ್ 25: ಸಂವಿಧಾನವಿರೋಧಿ ಧೋರಣೆ ಹೊಂದಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಕ್ಷಣವೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಆಗ್ರಹಿಸಿದ್ದಾರೆ. ಸಂವಿಧಾನ ಬದಲಾಯಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುತ್ತೇನೆ' ಎಂಬ ಡಿ.ಕೆ ಶಿವಕುಮಾರ್ ರವರ ಹೇಳಿಕೆಯ ವಿರುದ್ಧ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಪ್ರತಿಭಟನೆಯು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು.
ಪ್ರತಿಭಟನೆಯ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಮಾತನಾಡಿ, ಕಾಂಗ್ರೆಸ್ಸಿನವರು ಯಾವತ್ತೂ ಸಂವಿಧಾನದ ಪರ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರರ ಪರ ಇಲ್ಲ ಎಂದು ಆಕ್ಷೇಪಿಸಿದರು. ಅವರು ಮಾತನಾಡಿದ್ದು ಸಂವಿಧಾನ ವಿರೋಧಿ ಮಾತುಗಳು ಎಂದು ಟೀಕಿಸಿದರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ಡಿ.ಕೆ.ಶಿವಕುಮಾರ್ ಅವರಿಗೆ ಸಂವಿಧಾನದ ಬಗ್ಗೆ ಸ್ವಲ್ಪವಾದರೂ ಗೌರವ ಇದ್ದಲ್ಲಿ, ಪ್ರಜಾಪ್ರಭುತ್ವದ ಬಗ್ಗೆ ಗೌರವ ಇದ್ದಲ್ಲಿ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಅಲ್ಲದೇ ಅವರು ದೇಶದ ಜನತೆಯ ಕ್ಷಮೆ ಕೇಳಬೇಕು ಎಂದರು. ಇದನ್ನು ಒಂದು ಜನಾಂದೋಲನವಾಗಿ ರೂಪಿಸಲು ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹನದ ಮೂಲಕ ಇವತ್ತು ಸಾಂಕೇತಿಕವಾಗಿ ಶುರು ಮಾಡಿದ್ದೇವೆ. ಇದು ನಾಳೆಯಿಂದ ಇಡೀ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಪ್ರಕಟಿಸಿದರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮಾತನಾಡಿ, ಸಿದ್ದರಾಮಯ್ಯನವರ ಸಚಿವ ಸಂಪುಟದ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅತ್ಯಂತ ಆಘಾತಕಾರಿ ಹೇಳಿಕೆ ಕೊಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ತಿದ್ದುಪಡಿ ಮಾಡುವುದಾಗಿ ಹೇಳಿದ್ದಲ್ಲ, ಸಂವಿಧಾನ ಬದಲಿಸುವುದಾಗಿ ಹೇಳಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ದೇಶವಿರೋಧಿ ಶಕ್ತಿಗಳ ಜೊತೆ ಸೇರಿದೆ. ಭಾರತ ದೇಶದಲ್ಲಿ ಅಭದ್ರತೆ ಸೃಷ್ಟಿಸುವ ಪಾತ್ರದಲ್ಲಿ ಕಾಂಗ್ರೆಸ್ ಇರುವುದಾಗಿ ಆರೋಪವಿದ್ದು, ಕಾಂಗ್ರೆಸ್ಸಿನ ಒಬ್ಬ ಶ್ರೀಮಂತ ಸದಸ್ಯನಾದ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದೇನು? 'ನಾವು ಏನೋ ಒಂದು ಮಾಡ್ತಾ ಇದ್ದೇವೆ. ನೀವು ಗಮನಿಸಿ; ಮುಂದಿನ ದಿನಗಳಲ್ಲಿ ಸಂವಿಧಾನವನ್ನೇ ಕಿತ್ತು ಹಾಕುತ್ತೇವೆ' ಎಂಬ ಅರ್ಥದಲ್ಲಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ ಎಂದು ಆರೋಪಿಸಿದರು.

ಜೈ ಭೀಮ್ ಎನ್ನುವ ಕಾಂಗ್ರೆಸ್ಸಿನವರ ಮುಖವಾಡ ಈಗ ಕಳಚಿಬಿದ್ದಿದೆ. ಜನತೆಯ ಮುಂದೆ ಕಾಂಗ್ರೆಸ್ ದಲಿತ ವಿರೋಧಿ, ಕಾಂಗ್ರೆಸ್ ಸಂವಿಧಾನ ವಿರೋಧಿ, ಈ ಸಂವಿಧಾನ ಬುಡಮೇಲು ಮಾಡಲು, ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರು ಕನಸು ಕಂಡಂಥ ಅಖಂಡ ರಾಷ್ಟ್ರವನ್ನು ಛಿದ್ರಗೊಳಿಸಲು ಷಡ್ಯಂತ್ರದ ಭಾಗವಾಗಿ ಕಾಂಗ್ರೆಸ್ ಸಂಚನ್ನು ರೂಪಿಸುತ್ತಿದೆ ಎಂಬುದು ಡಿ.ಕೆ.ಶಿವಕುಮಾರ್ ಅವರ ಸಂದರ್ಶನದಿಂದ ಹೊರಬಂದಿದೆ ಎಂದು ವಿಶ್ಲೇಷಿಸಿದರು. ಸಿದ್ದರಾಮಯ್ಯನವರು ಈ ಕೂಡಲೇ ಡಿ.ಕೆ.ಶಿವಕುಮಾರ್ ಅವರನ್ನು ಸಚಿವಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ನಗರ ಜಿಲ್ಲಾ ಅಧ್ಯಕ್ಷರಾದ ಎಸ್.ಹರೀಶ್, ಸಪ್ತಗಿರಿ ಗೌಡ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕೌತಾ, ಮೋರ್ಚಾದ ಉಪಾಧ್ಯಕ್ಷ ಹೂಡಿ ಮಂಜುನಾಥ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications