ಕಸಾಪ ಚುನಾವಣೆ; ಅಧ್ಯಕ್ಷ ಸ್ಥಾನದಿಂದ ಹಿಂದೆ ಸರಿದ ಅಭ್ಯರ್ಥಿ!

ಬೆಂಗಳೂರು, ನವೆಂಬರ್ 11; ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್ 21ರಂದು ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನದ ಸ್ಪರ್ಧಿಯೊಬ್ಬರು ಕಣದಿಂದ ಹಿಂದೆ ಸರಿದಿದ್ದಾರೆ.

ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು, 30 ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ 223 ಅಭ್ಯರ್ಥಿಗಳು. ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಗಳಿಗೆ 16 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ನ. ಶ್ರೀ. ಸುಧೀಂದ್ರ ರಾವ್ ರಾಜ್ಯ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದರು. ನವೆಂಬರ್ 21ರಂದು ಮತದಾನ ನಡೆಯಲಿದೆ.

 Na Shree Sudhindrarao To Stay Neutral In Kannada Sahitya Parishat President Election

ನ. ಶ್ರೀ. ಸುಧೀಂದ್ರ ರಾವ್ ಚುನಾವಣೆಯಲ್ಲಿ ಮಹಿಳಾ ಅಭ್ಯರ್ಥಿ ಸರಸ್ವತಿ ಚಿಮ್ಮಲಗಿಗೆ ಬೆಂಬಲ ನೀಡಿದ್ದಾರೆ. "ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಮೊದಲ ಬಾರಿಗೆ ಮಹಿಳೆಯೊಬ್ಬರು ಅಧ್ಯಕ್ಷರಾಗಬೇಕು ಎಂದು ಈ ತೀರ್ಮಾನ ಕೈಗೊಂಡಿದ್ದೇನೆ" ಎಂದು ಹೇಳಿದರು.

ಚುನಾವಣ ಕುರಿತು ಮಾತನಾಡಿದ ನ. ಶ್ರೀ. ಸುಧೀಂದ್ರ ರಾವ್, "ಪರಿಷತ್ತಿನ ಘನತೆಯನ್ನು ಕಡಿಮೆ ಮಾಡುವ ಶಕ್ತಿಗಳು ಅಧಿಕಾರಕ್ಕೇರುವ ಸೂಚನೆಗಳು ಕಂಡು ಬರುತ್ತಿವೆ. ಪರಿಷತ್ತಿನ ಚಟುವಟಿಕೆಗಳಲ್ಲಿ ಹಣ, ಜಾತಿ ಬಲ ಪ್ರದರ್ಶನಕ್ಕೆ ವೇದಿಕೆಯಾಗುತ್ತಿದೆ" ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನ. 24 ರಂದು ಫಲಿತಾಂಶ; ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವೆಂಬರ್ 21ರಂದು ಮತದಾನ ನಡೆಯಲಿದ್ದು, ನವೆಂಬರ್ 24ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಇನ್ನು ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಜೋಶಿ, ರಾಜಶೇಖರ ಮುಲಾಲಿ, ಮ. ಚಿ. ಕೃಷ್ಣ, ವ. ಚ. ಚನ್ನೇಗೌಡ, ಬಸವರಾಜ ಶಿ. ಹಳ್ಳೂರ, ಬಾಡದ ಭದ್ರಿನಾಥ್, ಶಿವರಾಜ ಪಾಟೀಲ, ವೈ. ರೇಣುಕಾ ಸೇರಿದಂತೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ಹಿಂದೆಯೇ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆಗೆ ಸಿದ್ಧತೆಗಳು ನಡೆದಿತ್ತು. ನಾಮಪತ್ರಗಳ ಪರಿಶೀಲನೆ ಸಹ ಪೂರ್ಣಗೊಂಡಿತ್ತು. ಮೇ 9ರಂದು ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಆದರೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾದ ಬಳಿಕ ಚುನಾವಣೆ ಮುಂದೂಡಲಾಗಿತ್ತು. ಈಗ ನವೆಂಬರ್ 21ರಂದು ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿದೆ.

ಅಕ್ಟೋಬರ್ 13ರಂದು ಚುನಾವಣಾಧಿಕಾರಿಯಾಗಿರುವ ಐಎಎಸ್ ಅಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಕಸಾಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಸ್ಥಗಿತಗೊಂಡಿದ್ದ ಚುನಾವಣಾ ಪ್ರಕ್ರಿಯೆ ಯಥಾವತ್ತಾಗಿ ನಡೆಸುವುದಾಗಿ ಈ ವೇಳೆ ಸ್ಪಷ್ಟಪಡಿಸಲಾಗಿದೆ.

ನವೆಂಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಜಿಲ್ಲಾ ಘಟಕಗಳ ಅಧ್ಯಕ್ಷರ ಚುನಾವಣೆ ಫಲಿತಾಂಶ ಅಂದೇ ಘೋಷಣೆಯಾಗಲಿದೆ. ಆದರೆ ರಾಜ್ಯಾಧ್ಯಕ್ಷ, ಗಡಿನಾಡ ಘಟಕ ಅಧ್ಯಕ್ಷರ ಚುನಾವಣೆ ಫಲಿತಾಂಶ ನವೆಂಬರ್ 24ರಂದು ಪ್ರಕಟವಾಗಲಿದೆ.

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ 3,10,109 ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ. ಎಲ್ಲಾ ತಾಲೂಕುಗಳು ಹಾಗೂ ಕೆಲವು ಹೋಬಳಿ ಕೇಂದ್ರಗಳು ಸೇರಿದಂತೆ ಒಟ್ಟು 420 ಮತಗಟ್ಟೆಗಳನ್ನು ತಾಲೂಕು/ ಹೋಬಳಿ ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ. ಬೆಂಗಳೂರು ನಗರದಲ್ಲಿ 27 ವಿಧಾನಸಭಾ ಕ್ಷೇತ್ರಗಳ ಕೆಲವು ಆಯ್ದ ಸ್ಥಳಗಳಲ್ಲಿ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುತ್ತದೆ.

ಚುನಾವಣೆ ಮುಂದೂಡುವಾಗ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಪ್ರಕ್ರಿಯೆಯನ್ನು ಪ್ರಸ್ತುತ ಯಾವ ಹಂತದಲ್ಲಿ ಇರುತ್ತದೆಯೋ ಅಲ್ಲಿಂದ ಮುಂದಿನ ಆದೇಶದವರೆಗೂ ಮುಂದೂಡಿ, ಮುಂದೆ ಇದೇ ಚುನಾವಣೆ ಪ್ರಕ್ರಿಯೆಯನ್ನು ಮುಂದೂಡಿದ ಹಂತದಿಂದ ಯಥಾವತ್ತಾಗಿ ಮುಂದುವರೆಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+