ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka State Anthem : ಹೈಕೋರ್ಟ್ ಮೆಟ್ಟಿಲೇರಿದ ನಾಡ ಗೀತೆ ವಿವಾದ; ಸರ್ಕಾರಕ್ಕೆ ನೋಟಿಸ್ ಜಾರಿ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು.ಸೆ.30.ಬೂದಿ ಮುಚ್ಚಿದ ಕೆಂಡದಂತಿದ್ದ ನಾಡಗೀತೆ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಅನಂತಸ್ವಾಮಿ ಸಂಗೀತ ಸಂಯೋಜನೆ ಮಾಡಿರುವ ನಾಡಗೀತೆಯನ್ನು ಅಳವಡಿಸಿಕೊಂಡಿರುವ ಸಂಬಂಧ ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್‌ ಶುಕ್ರವಾರ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಖ್ಯಾತ ರಾಗ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ2 ನಿಮಿಷ 30 ಸೆಕೆಂಡ್‌ಗಳಲ್ಲಿನಾಡಗೀತೆ ಹಾಡುವ ಸಂಬಂಧ ಸರಕಾರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆ ಅರ್ಜಿ ಕುರಿತು ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿ, ಪ್ರತಿವಾದಿಗಳಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ತುರ್ತು ನೋಟಿಸ್‌ ಜಾರಿಗೆ ಆದೇಶಿಸಿತು.

ನಾಡಗೀತೆ ರಾಗ ಸಂಯೋಜನೆಯ ಸರ್ಕಾರದ ನಿರ್ಧಾರ ಸ್ವಾಗತಿಸಿ ಕಸಾಪನಾಡಗೀತೆ ರಾಗ ಸಂಯೋಜನೆಯ ಸರ್ಕಾರದ ನಿರ್ಧಾರ ಸ್ವಾಗತಿಸಿ ಕಸಾಪ

ಅಲ್ಲದೇ ಯಾವ ಅಧಿಕಾರದಡಿ ಮತ್ತು ಯಾವ ನಿಯಮಗಳಡಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂಬ ಬಗ್ಗೆ ದಾಖಲೆ ಸಮೇತ ವಿವರ ನೀಡುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.

Naada Geete Row: HC ordered notice to state government

ಅರ್ಜಿದಾರರ ವಾದವೇನು?

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ನಾಡಗೀತೆಗೆ ಮೈಸೂರು ಅನಂತಸ್ವಾಮಿಯವರ ರಾಗ ಸಂಯೋಜನೆ ಅಳವಡಿಸಿಕೊಳ್ಳುವಂತೆ ಸರ್ಕಾರ ಹೊರಡಿಸಿರುವ ಆದೇಶವು 2013ರ ಜೂ.12ರಂದು ವಸಂತ ಕನಕಪುರ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ತೀರಾ ತದ್ವಿರುದ್ಧವಾಗಿದೆ ಎಂದು ಹೇಳಿದರು.

ಅಲ್ಲದೆ, ಮೈಸೂರು ಅನಂತಸ್ವಾಮಿಯವರು ಪೂರ್ಣ ನಾಡಗೀತೆಗೆ ರಾಗ ಸಂಯೋಜನೆ ಮಾಡಿಲ್ಲವೆಂದು ಆ ಸಭೆಯಲ್ಲಿ ಚರ್ಚಿಸಲಾಗಿತ್ತು. ಡಾ. ಸಿ. ಅಶ್ವಥ್‌ ರಾಗ ಸಂಯೋಜನೆ ಮುಂದುವರಿಸುವ ಬಗ್ಗೆ ಸ್ವತಃ ಮೈಸೂರು ಅನಂತಸ್ವಾಮಿ ಒಪ್ಪಿಕೊಂಡಿದ್ದರು. ಅಲ್ಲದೇ ರಾಜ್ಯ ಸರ್ಕಾರ ನಾಡೋಜ ಚನ್ನವೀರ ಕಣವಿ ನೇತೃತ್ವದ ಸಮಿತಿಯ ಶಿಫಾರಸನ್ನು ಕಡೆ ಗಣಿಸಿದೆ. ಆ ಸಮಿತಿ ಡಾ. ಸಿ. ಅಶ್ವಥ್‌ ರಾಗ ಸಂಯೋಜನೆ ಅಳವಡಿಸಿಕೊಳ್ಳಲು ಶಿಫಾರಸು ಮಾಡಿತ್ತು ಎಂದು ವಿವರಿಸಿದರು.

ತರಾತುರಿಯಲ್ಲಿ ಆದೇಶ:

ಮೈಸೂರು ಅನಂತಸ್ವಾಮಿ ಅವರ ನಾಡಗೀತೆಗೆ ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಸಂಬಂಧ ಅರ್ಜಿದಾರರ ಸಲ್ಲಿಸಿರುವ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ. ಈ ಹಿನ್ನೆಲೆಯಲ್ಲಿನಾಡಗೀತೆಯ ರಾಗ, ಧಾಟಿ ಮತ್ತು ಸಮಯದ ಮಿತಿ ಕುರಿತು ರಾಜ್ಯ ಸರಕಾರ ತರಾತುರಿಯಲ್ಲಿಆದೇಶ ಹೊರಡಿಸಿದೆ. ಹಾಗಾಗಿ, ಈ ಆದೇಶ ರದ್ದುಗೊಳಿಸಬೇಕೆಂದರು.

ಆದ್ದರಿಂದ, ಖ್ಯಾತ ರಾಗ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ2 ನಿಮಿಷ 30 ಸೆಕೆಂಡ್‌ಗಳಲ್ಲಿನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

English summary
Naada Geete dispute has now reached the High Court. The High Court on Friday issued a notice to the state government in connection with the petition seeking cancellation of the order issued in connection with the adoption of the Nada Geete composed by Ananthaswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X