ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳ ಹಾದಿಯಲ್ಲಿ ನಡೆಯುವ ಸಂಕಲ್ಪ: ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ನವೆಂಬರ್ 11 : ಕೆಂಪೇಗೌಡರ ಚಿಂತನೆ ಹಾಗೂ ವಿಚಾರಧಾರೆಗಳ ಹಾದಿಯಲ್ಲಿ ನಡೆದು ಕರ್ನಾಟಕವನ್ನು ಅಭಿವೃದ್ಧಿಗೊಳಿಸುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ರಾಜ್ಯಕ್ಕೆ ಎರಡು ಕೊಡುಗೆಗಳನ್ನು ಕೊಟ್ಟಿದ್ದಾರೆ. ವಂದೇಭಾರತ ರೈಲು ಮತ್ತು ವಿಮಾಣನಿಲ್ದಾಣದ 2ನೇ ಟರ್ಮಿನಲ್, ಸಬ್ಅರ್ಬನ್ ರೈಲು. ಕರಾವಳಿಯಲ್ಲಿ ಬಂದರು ನಿರ್ಮಾಣ ಸೇರಿದಂತೆ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡುತ್ತಿರುವ ಪ್ರಧಾನಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕೆಂಪೇಗೌಡರ ವಿಚಾರಧಾರೆಯ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಲಾಗಿದೆ ಎಂದರು.

ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿರುವ ದಿನ

ಇಂದು ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿರುವ ದಿನವಾಗಿದೆ. ನಾಡಿಗೆ ಶ್ರೇಷ್ಠ ಸಂತರಾದ ಕನಕದಾಸರ ಜಯಂತಿ , ಮಹರ್ಷಿ ವಾಲ್ಮೀಕಿಯವರಿಗೆ ಹಾಗೂ ನಾಡಿನ ಸಂರಕ್ಷಣೆಗೆ ಜೀವತೆತ್ತ ವೀರ ವನಿತೆ ಒನಕೆ ಓಬವ್ವ ಪುಷ್ಪಾರ್ಚನೆ ಮಾಡುವ ಮೂಲಕ ನಾಡಿನ ಜನರ ಭಾವನೆಗಳಿಗೆ ಗೌರವ ಸಲ್ಲಿಸಿದ್ದಾರೆ.

Nadaprabhu Kempegowda will inspire us to Develop Karnataka to greater heights: CM Bommai

ಬೆಂಗಳೂರು, ಮೈಸೂರು ಚೆನ್ನೈಯನ್ನು ಸಂಪರ್ಕಿಸುವ ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದ ಟರ್ಮಿನಲ್ 2 ಕ್ಕೆ ಚಾಲನೆ ನೀಡಲಾಗಿದ್ದು, ಇದು ದೇಶದ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ. ಇದಕ್ಕಾಗಿ ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರಿಗೆ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಬೆಂಗಳೂರು ಇಂದು ಅಂತರರಾಷ್ಟ್ರೀಯ ನಗರವಾಗಿ ಬೆಳೆದಿದೆ

ನಾಡಪ್ರಭು ಕೆಂಪೇಗೌಡರು, ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗದ ದರ್ಶನವನ್ನು ಬೆಂಗಳೂರಿನ ಸುತ್ತಮುತ್ತಲಿನ ಗ್ರಾಮಗಳಿಗೆ ಮಾಡಿಸಿದ್ದಾರೆ. ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಇಂದು ಅಂತಾರಾಷ್ಟ್ರೀಯ ನಗರವಾಗಿ ಬೆಳೆದಿದೆ. ಯೋಜನಾಬದ್ಧ ನಗರ ನಿರ್ಮಿಸಿ, ಹಲವು ಕೆರೆಕಟ್ಟೆಗಳು, ಪೇಟೆಗಳನ್ನು ನಿರ್ಮಿಸುವ ಮೂಲಕ ಜನ ನೆಮ್ಮದಿಯ ಜೀವನ ಬದುಕುವಂತೆ ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರಿಗೆ ಗೌರವ ಸಲ್ಲಿಸುವ ಮುಖಾಂತರ ನಾಡಿನ ಸಂಸ್ಕೃತಿ, ಇತಿಹಾಸ ಪರಂಪರೆ, ಪ್ರಗತಿಪರ ಚಿಂತನೆಗೆ ಗೌರವ ಸಲ್ಲಿಸಿದಂತಾಗಿದೆ. ಗುಜರಾತಿನಲ್ಲಿ ಏಕತೆಯ ಪ್ರತಿಮೆಯಿದ್ದರೆ, ರಾಜ್ಯದ ಸರದಾರ ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಉದ್ಘಾಟಿಸಲಾಗಿದೆ ಎಂದರು.

Nadaprabhu Kempegowda will inspire us to Develop Karnataka to greater heights: CM Bommai

ಪ್ರಧಾನಿ ಮೋದಿ ಆಧುನಿಕ ಭಾರತದ ವಿಕಾಸ ಪುರುಷ

ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಆಧುನಿಕ ಭಾರತದ ವಿಕಾಸ ಪುರುಷರು. ದೇಶದ ಹತ್ತುಹಲವಾರು ಸವಾಲುಗಳನ್ನು ಬಗೆಹರಿಸಿ ಬಲಿಷ್ಟ ಭಾರತವನ್ನು ಕಟ್ಟಿ, ಆತ್ಮನಿರ್ಭರ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ಅಭಿವೃದ್ಧಿಯಲ್ಲಿ ಎಲ್ಲರಿಗೂ ಅವಕಾಶ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಬಹಳ ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಇಡೀ ವಿಶ್ವದಲ್ಲಿ ಆರ್ಥಿಕ ಹಿಂಜರಿತವಿದ್ದ ಸಂದರ್ಭದಲ್ಲಿ ಭಾರತ ಆರ್ಥಿಕವಾಗಿ ಬಲಿಷ್ಠಗೊಳ್ಳುತ್ತಿದ್ದರೆ, ಅದಕ್ಕೆ ಪ್ರಧಾನಿ ಮೋದಿಯವರ ಯೋಜನೆಗಳೇ ಕಾರಣ.ಒಬ್ಬ ವಿಕಾಸಪುರುಷ ದಾರಿಯಲ್ಲಿ ನವಭಾರತ ನಿರ್ಮಾಣ ಮಾಡುತ್ತಿರುವವರ ಕೈಯಿಂದ ಕೇಂಪೇಗೌಡರ ಮೂರ್ತಿ ಅನಾವರಣ ಮಾಡಿರುವುದು ದೈವೇಚ್ಛೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಸಚಿವರಾದ ಆರ್. ಅಶೋಕ, ಡಾ.ಸಿ ಎನ್. ಅಶ್ವತ್ಥ ನಾರಾಯಣ, ಡಾ.ಕೆ. ಸುಧಾಕರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು

English summary
CM Basavaraj Bommai says we follow the Kempegowda's development method and will Develop Karnataka to greater heights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X