ನಾಗಮಂಗಲ ಗಲಭೆ ಆಕಸ್ಮಿಕ ಹೇಳಿಕೆ: ಜನಾಕ್ರೋಶದ ಬೆನ್ನಲ್ಲೇ ಜಿ. ಪರಮೇಶ್ವರ್ ಅಲರ್ಟ್
ನಾಗಮಂಗಲ ಗಲಭೆಯನ್ನು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಿಲ್ಲ. ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎನ್ನುವ ಆರೋಪಗಳ ನಡುವೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ನನಗೆ ವಿರೋಧ ಪಕ್ಷಗಳ ಸರ್ಟಿಫಿಕೇಟ್ ಬೇಕಾಗಿಲ್ಲ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಯಾವುದೇ ಸಮುದಾಯವನ್ನು ತುಷ್ಟೀಕರಣ ಮಾಡುವ ಅವಶ್ಯಕತೆ ನನಗೆ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ಅವರನ್ನು ಸಹ ಅಮಾನತು ಮಾಡಲಾಗಿದೆ.
ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಗಲಭೆಯ ಬೆನ್ನಲ್ಲೇ ಜಿ ಪರಮೇಶ್ವರ್ ಅವರು ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಗೃಹ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎನ್ನುವ ದೂರುಗಳು ಕೇಳಿ ಬಂದಿದ್ದವು. ಇದಕ್ಕೆ ಪರಮೇಶ್ವರ್ ಅವರು ನೀಡಿದ ಹೇಳಿಕೆಯೂ ಸಹ ಪ್ರಮುಖ ಕಾರಣವಾಗಿತ್ತು. ಗಲಭೆಯ ಬೆನ್ನಲ್ಲೇ ಮಾತನಾಡಿದ್ದ ಜಿ. ಪರಮೇಶ್ವರ ಅವರು, ಇದು ಆಕಸ್ಮಿಕ ಘಟನೆ, ಕೋಮುಗಲಭೆಯಲ್ಲ, ಗಲಭೆಯಷ್ಟೇ ಎಂಬರ್ಥದಲ್ಲಿ ಮಾತನಾಡಿದ್ದರು. ಇದು ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ವಿಷಯಗಳ ಬಗ್ಗೆ ಜಿ ಪರಮೇಶ್ವರ್ ಅವರು ಮಾತನಾಡಿದ್ದಾರೆ.

ನಾಗಮಂಗಲ ಗಲಭೆಯ ಬಗ್ಗೆ ಮಾತನಾಡಿರುವ ಜಿ. ಪರಮೇಶ್ವರ್ ಅವರು, ಯಾವ ಸರ್ಕಾರವೂ ಹೋಗಿ ಗಲಾಟೆ ಮಾಡಿ ಅಂತ ಹೇಳುತ್ತಾರೆಯೇ? ಈ ರೀತಿ ಆಗಬಾರದಾಗಿತ್ತು ಅಂತ ಹೇಳುವುದೇ ತಪ್ಪಾ ಎಂದು ಕೇಳಿದ್ದಾರೆ. ಇವರಿಗೆ ಕನ್ನಡ ಭಾಷೆ ಅರ್ಥವಾಗುವುದಿಲ್ಲವೇ? ನಾವು ಹಳ್ಳಿಯಿಂದ ಬಂದವರು, ಹಳ್ಳಿ ಭಾಷೆಯಲ್ಲಿ ಹೇಳುತ್ತೇವೆ. ಟೆಕ್ಸ್ಟ ಬುಕ್ ಭಾಷೆ ಬಳಸುತ್ತೇವೆಯೇ? ಒಂದು ಮಾತನ್ನು ಸ್ಪಷ್ಟವಾಗಿ ಹೇಳಲಿಚ್ಛಿಸುತ್ತೇನೆ. ರಾಜ್ಯದಲ್ಲಿ ಯಾರು ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದರು.
ಯಾರೇ ಆಗಿರಲಿ. ಗಣೇಶ ಹಬ್ಬ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಅನವಶ್ಯಕವಾಗಿ ಗೊಂದಲಗಳನ್ನು ಸೃಷ್ಟಿಸಿ, ಗಲಾಟೆ ಮಾಡಿದರೆ ಸುಮ್ಮನೆ ಬಿಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕೋ, ಕಟ್ಟುನಿಟ್ಟಾಗಿ ಮುಲಾಜಿಲ್ಲದೇ ಜರುಗಿಸುತ್ತೇವೆ. ಯಾವುದೇ ಸಮುದಾಯವನ್ನು ತುಷ್ಟೀಕರಣ ಮಾಡುವ ಅಗತ್ಯತೆ ನಮಗೆ ಇಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಂಡರೆ ನಾವೇನು ಮಾಡಲಾಗುವುದಿಲ್ಲ ಎಂದು ಪರಮೇಶ್ವರ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಾನು ಗೃಹ ಸಚಿವನಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ. ಬಿಜೆಪಿಯವರಿಂದ ಸರ್ಟಿಫಿಕೇಟ್ ಬೇಕಿಲ್ಲ. ನನಗು ಜವಾಬ್ದಾರಿ ಇದೆ. ಜವಾಬ್ದಾರಿ ಇಲ್ಲದೆ, ಆ ಸ್ಥಾನದಲ್ಲಿ ಕುಳಿತಿಲ್ಲ. ಕೆಲಸ ಮಾಡುತ್ತಿದ್ದೇವೆ. ನಾಗಮಂಗಲ ಘಟನೆಯನ್ನು ಸಮರ್ಥನೆ ಮಾಡುತ್ತಿದ್ದೇವೆಯೇ? ಯಾರು ಕಾರಣ ಆಗಿದ್ದಾರೆ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ? ಈಗಾಗಲೇ 52 ಜನರನ್ನು ಸುಮ್ಮನೆ ಬಂಧಿಸಲಾಗಿದೆಯೇ? ಎಂದು ಪ್ರಶ್ನಿಸಿದರು. ಬಿಜೆಪಿಯವರು ಹೇಳಿಕೆಗಳನ್ನು ಟ್ವಿಸ್ಟ್ ಮಾಡಿ ವ್ಯಾಖ್ಯಾನ ಮಾಡಿಕೊಳ್ಳಲಿ. ಪರಮೇಶ್ವರ ಹೀಗೆ ಹೇಳಿದರು, ಸಣ್ಣದೆಂದರು, ದೊಡ್ಡದು ಎಂದರು ಹೇಳಿಕೊಳ್ಳಲಿ. ನನಗು ಅವರಂತೆ ಮಾತನಾಡುವುದಕ್ಕೆ ಬರುತ್ತದೆ. ನಾನು ನಿನ್ನೆಯೇ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ವಿಪಕ್ಷದವರಿಗೆ ಮನವಿ ಮಾಡಿದ್ದೇನೆ. ಆದರೂ ರಾಜಕೀಯ ಮಾಡುತ್ತೇವೆ ಅನ್ನುವುದಾದರೆ ಮಾಡಲಿ. ನಾವು ನಿಭಾಯಿಸುತ್ತೇವೆ ಎಂದು ಹೇಳಿದರು.
ಇನ್ನು ಈ ರೀತಿಯ ಘಟನೆಗಳಾದ ಸಂದರ್ಭದಲ್ಲಿ ಪರಿಹಾರ ಕೊಡಲು ಕೆಲವು ನಿಯಮಗಳಿವೆ. ಘಟನೆಯ ತನಿಖಾ ವರದಿ ಬಂದ ನಂತರ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.
ಪೊಲೀಸ್ ಇನ್‌ಸ್ಪೆಕ್ಟರ್ ತಪ್ಪಿನಿಂದ ದುರಂತ
ಗೃಹ ಸಚಿವ ಜಿ. ಪರಮೇಶ್ವರ್ ಅವರು, ಮಂಡ್ಯದ ನಾಗಮಂಗಲ ಗಲಭೆ ಪ್ರಕರಣವು ಉದ್ದೇಶಪೂರ್ವಕ ಅಲ್ಲ, ಆಕಸ್ಮಿಕ ಘಟನೆ ಎಂದು ಹೇಳಿದ್ದರು. ಇದಕ್ಕೆ ಭಾರೀ ಆಕ್ರೋಶ ಕಾರಣವಾಗಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಗೃಹ ಇಲಾಖೆ ಮೇಜರ್ ಸರ್ಜರಿಗೆ ಮುಂದಾಗಿದೆ. ಗಣೇಶ ಮೆರವಣಿಗೆ ಹೊರಡಬೇಕಿದ್ದ ದಾರಿಯನ್ನು (Root) ಮುಂಚಿತವಾಗಿ ನೀಡಲಾಗಿತ್ತು. ಇದನ್ನು ಇನ್‌ಸ್ಪೆಕ್ಟರ್ ಬದಲಾಯಿಸಿದ್ದರು. ಹೀಗಾಗಿ, ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.
ಯಾವುದೇ ಘಟನೆಗಳಾದರೆ ನಿಮ್ಮನ್ನೆ ಹೊಣೆ ಮಾಡುವುದಾಗಿ ಪೊಲೀಸ್ ಅಧಿಕಾರಿಗಳಿಗೆ ಮೊದಲೇ ಎಚ್ಚರಿಸಿದ್ದೇವೆ. ಡಿವೈಎಸ್‌ಪಿ ಮೇಲೂ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಯಾವುದೇ ಅಹಿತರ ಘಟನೆ ನಡೆಯದಂತೆ, ಮುನ್ನೆಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುತ್ತೇವೆ. ಅದರ ಆಧಾರದ ಮೇಲೆ ಡಿಜಿ ರವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಂಬಂಧಪಟ್ಟ ಎಲ್ಲ ಎಸ್‌ಪಿ ಮತ್ತು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಸಾರ್ವಜನಿಕರೊಂದಿಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ, ಎಸ್‌ಪಿ ಎಲ್ಲರು ಸಹ ಸಭೆಗಳನ್ನು ನಡೆಸಿರುತ್ತಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌ಆರ್‌ಪಿ ವಾಹನ ಇಟ್ಟುಕೊಂಡು ಸಜ್ಜಾಗಿದ್ದರು ಎಂದು ಉತ್ತರಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications