ಶಾಂತಿ ಕಾಪಾಡಲು ಅರ್ಜಿ, ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 15 : ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಬೇಕು ಎಂಬ ಅರ್ಜಿಯ ವಿಚಾರಣೆಯಿಂದ ನ್ಯಾ.ಸಿ.ನಾಗಪ್ಪನ್ ಅವರು ಹಿಂದೆ ಸರಿದಿದ್ದಾರೆ.

ಬುಧವಾರ ಕಾವೇರಿ ನದಿ ನೀರು ಹಂಚಿಕೆ ತೀರ್ಪಿನ ಬಳಿಕ ಎರಡೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಿದೆ. ಆದ್ದರಿಂದ, ರಾಜ್ಯಗಳಲ್ಲಿ ಶಾಂತಿ ಕಾಪಾಡಲು ರಾಜ್ಯಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.[ಕರ್ನಾಟಕ, ತಮಿಳುನಾಡಿನಲ್ಲಿ ಶಾಂತಿ ಕಾಪಾಡಲು ಅರ್ಜಿ]

Nagappan recuses from hearing l&o matter relating to kar and tn

ಗುರುವಾರ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸಿ.ನಾಗಪ್ಪನ್ ಅವರು ಹಿಂದೆ ಸರಿದಿದ್ದಾರೆ. ಸಿ.ನಾಗಪ್ಪನ್ ಅವರು ತಮಿಳುನಾಡು ಮೂಲದವರು. ಆದ್ದರಿಂದ, ಅರ್ಜಿಯ ವಿಚಾರಣೆಯಿಂದ ಅವರು ಹಿಂದೆ ಸರಿದಿದ್ದು, ಅರ್ಜಿಯನ್ನು ಮತ್ತೊಂದು ಪೀಠಕ್ಕೆ ವರ್ಗಾವಣೆ ಮಾಡಲಾಗುತ್ತದೆ.[ಕರ್ಫ್ಯೂ ಹೇಗಿತ್ತು?, ಜನರನ್ನು ವ್ಯಾಪಾರಿಗಳು ಸುಲಿಗೆ ಮಾಡಿದ್ರಾ?]

ಕನ್ಯಾಕುಮಾರಿ ಎಂಬುವವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಗಲಭೆಗೆ ಕಾರಣರಾದವರ ವಿರುದ್ಧ ಕ್ರಮಗಳನ್ನು ಕೈಗೊಳ್ಳುವಂತೆ ಎರಡೂ ರಾಜ್ಯಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಸೋಮವಾರ ಈ ವಿಚಾರದಲ್ಲಿ ಬೆಂಗಳೂರಿನಲ್ಲಿ ಗಲಭೆ ನಡೆದಿದೆ. ಈ ಗಲಭೆಯಿಂದಾಗಿ ಸುಮಾರು 25 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Justice C Nagappan of the Supreme Court has recused himself from hearing a matter seeking directions to improve law and order situation in Karnataka and Tamil Nadu. Justice Nagappan is from Tamil Nadu. Matter to be posted before appropriate bench.
Please Wait while comments are loading...