ಬಹುಮತ ಸಿಕ್ಕಿದೆ ಎಂದು ನನ್ನನ್ನು ಸಂಪುಟದಿಂದ ಕೈಬಿಡುವುದು ತಪ್ಪು: ಅಬಕಾರಿ ಸಚಿವ ಎಚ್. ನಾಗೇಶ್!

ಬೆಂಗಳೂರು, ಜ. 13: ತಮ್ಮನ್ನು ಸಚಿವ ಸಂಪುಟದಿಂದ ಕೈಬಿಡಲಾಗುತ್ತಿದೆ ಎಂಬುದರ ಕುರಿತು ಅಬಕಾರಿ ಸಚಿವ ಎಚ್. ನಾಗೇಶ್ ಅವರು ಬೆಂಗಳೂರಿನಲ್ಲಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಷ್ಟ ಕಾಲದಲ್ಲಿ ಬಿಜೆಪಿ ಸರ್ಕಾರದ ಕೈಹಿಡಿದ್ದೇನೆ. ಈಗ ಸರ್ಕಾರಕ್ಕೆ ಬಹುಮತ ಸಿಕ್ಕಿದೆ ಎಂದು ನನ್ನನ್ನು ಸಂಪುಟದಿಂದ ಕೈಬಿಡುವುದು ತಪ್ಪು ಎಂದಿದ್ದಾರೆ.

ಇಂದು ಬೆಳಗ್ಗೆ 11.30ಕ್ಕೆ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಸಿಎಂ ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ನಾನು ಸಂಪುಟ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಮಂತ್ರಿಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸರ್ಕಾರ ಸೇರಿದ್ದೇನೆ. ಹೀಗಾಗಿ ಈಗ ರಾಜೀನಾಮೆ ಕೊಡಲು ಕಾರಣವೇ ಇಲ್ಲ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಕೋಲಾರಕ್ಕೆ ತೆರೆಳಿ ಬೆಂಬಲಿಗರೊಂದಿಗೆ ಚರ್ಚೆ ನಡೆಸುವುದಾಗಿ ಇದೇ ಸಂದರ್ಭದಲ್ಲಿ ನಾಗೇಶ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಹೀಗಾಗಿ ಸಂಪುಟದಿಂದ ನಾಗೇಶ್ ಅವರನ್ನು ಕೈಬಿಟ್ಟಲ್ಲಿ ಅವರು ಬಿಜೆಪಿಗೆ ಕೊಟ್ಟಿರುವ ಬೆಂಬಲವನ್ನು ವಾಪಾಸ್ ಪಡೆಯುವುದು ಬಹುತೇಕ ಖಚಿತವಾಗಿದೆ.

Nagesh said its wrong that dropping me from cabinet as BJP govt has got majority

ತಮ್ಮನ್ನು ಸಂಪುಟದಿಂದ ಕೈಬಿಟ್ಟಲ್ಲಿ ಮುಂದೆನು? ಎಂಬುದನ್ನು ನಂತರ ತೀರ್ಮಾನ ಮಾಡುತ್ತೇನೆ. ಈಗಲೇ ಏನೂ ಹೇಳುವುದಿಲ್ಲ ಎಂದು ನಾಗೇಶ್ ಅವರು ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Recommended Video

      ಮೈಸೂರು: ಡಿಸಿ ರೋಹಿಣಿ ಮತ್ತು ಸಾರಾ ಮಹೇಶ್ ಮಧ್ಯೆ ಶೀತಲ ಸಮರ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+