• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

BREAKING: ಖಾತೆ ಹಂಚಿಕೆ ಕುರಿತು ಮೌನ ಮುರಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

|

ಬೆಂಗಳೂರು, ಜ. 23: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆದ 9 ದಿನಗಳ ನಂತರ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದರು. ಯಡಿಯೂರಪ್ಪ ಅವರು ಖಾತೆ ಹಂಚಿಕೆ ಮಾಡಿದ ಬಳಿಕ ಬಳಹಷ್ಟು ಬೆಳವಣಿಗೆಗಳು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಆಗುತ್ತಿವೆ. ಸಿಎಂ ಯಡಿಯೂರಪ್ಪ ಅವರ ಮೇಲೆ ಹಲವು ಸಚಿವರು ಮುನಿಸಿಕೊಂಡಿದ್ದರಿಂದ, ಮತ್ತೆ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದಾರೆ. ಆದರೂ ಖಾತೆ ಕುರಿತು ಸಂಬಂಧಿಸಿದಂತೆ ಸಚಿವರ ಅಸಮಾಧಾನ ಮಾತ್ರ ಕಡಿಮೆ ಆಗಿಲ್ಲ. ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯಡಿಯೂರಪ್ಪ ಅವರ ತೀರ್ಮಾನದ ಕುರಿತು ಮಹತ್ವದ ಮಾತನ್ನಾಡಿದ್ದಾರೆ.

ಖಾತೆ ಹಂಚಿಕೆ ಕುರಿತಂತೆ ಸಚಿವರುಗಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸ್ವತಂತ್ರರಿದ್ದಾರೆ. ಆದರೆ ಅದರಿಂದ ಪಕ್ಷಕ್ಕೆ ಮುಜುಗರ, ಹಾನಿಯಾಗುವಂತಾದರೆ ಅವರನ್ನು ಕರೆಸಿ ಮಾತನಾಡುತ್ತೇನೆ. ಖಾತೆಗಳ ಹಂಚಿಕೆ ಪುನರ್ ಹಂಚಿಕೆ ನಿರ್ಧಾರ ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

   ಇನ್ನೂ ಮುಂದೆ BJP ಗೆ ಕಾದಿದೆ ಸಂಕಷ್ಟ !! | Oneindia Kannada

   ಸಿಎಂ ಅವರು ಅವರು ಎಲ್ಲವನ್ನು ಸರಿಮಾಡಿದ್ದಾರೆ ಎಂದು ಯಡಿಯೂರಪ್ಪ ಅವರ ಪರವಾಗಿ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ. ಒಟ್ಟಾರೆ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಬಳಿಕ ವಿರೋಧಿಗಳು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ಯಡಿಯೂರಪ್ಪ ಅವರು ರಾಜಕೀಯವಾಗಿ ಮತ್ತಷ್ಟು ಬಲಗೊಳ್ಳುತ್ತಿದ್ದಾರೆ.

   English summary
   BJP President Nalin Kumar Kateel has said that the decision to re-allocate the portfolios is the prerogative of Chief Minister Yediyurappa. Know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X