ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ರೈತರ ಪ್ರತಿಭಟನೆ: ನಳಿನ್ ಕುಮಾರ್ ಕಟೀಲ್ ಸ್ಪೋಟಕ ಹೇಳಿಕೆ!

|
Google Oneindia Kannada News

ಬೆಂಗಳೂರು, ಜ.26: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗಿದೆ. ಕಳೆದ 60 ದಿನಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರು, ಇಂದು ಸಹನೆ ಕಳೆದುಕೊಂಡಿದ್ದರು. ದೆಹಲಿಯಲ್ಲಿ ಪೊಲೀಸರೊಂದಿಗೆ ಘರ್ಷಣೆಯನ್ನೂ ರೈತರು ಮಾಡಿದರು. ಮತ್ತೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ಮಾಡಿದ್ದಾರೆ.

Recommended Video

ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ Farmers..! | Oneinda Kannada

ಫ್ರೀಡಂ ಪಾರ್ಕ್‌ನಲ್ಲಿ ರೈತರು ಸಮಾವೇಶವನ್ನು ಮಾಡಿದರು. ರೈತ ಮುಖಂಡರು ಸೇರಿದಂತೆ ಸಾವಿರಾರು ರೈತರು ಸಮಾವೇಶದಲ್ಲಿ ಭಾಗವಹಿಸಿದ್ದರು. ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ, ಕೆಂಪುಕೋಟಿ ಮೇಲೆ ರೈತ ಧ್ವಜವನ್ನು ಹಾರಿಸಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ರೈತರ ವರ್ತನೆ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ರೈತರ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಪ್ರಧಾನಿ, ಗೃಹ ಸಚಿವರೇ ಎಲ್ಲಿ ಅಡಗಿ ಕೂತಿದ್ದೀರಾ? 'ರಿಸೈನ್ ಅಮಿತ್ ಶಾ' ಫುಲ್ ಟ್ರೆಂಡಿಂಗ್ ಪ್ರಧಾನಿ, ಗೃಹ ಸಚಿವರೇ ಎಲ್ಲಿ ಅಡಗಿ ಕೂತಿದ್ದೀರಾ? 'ರಿಸೈನ್ ಅಮಿತ್ ಶಾ' ಫುಲ್ ಟ್ರೆಂಡಿಂಗ್

ಪವಿತ್ರ ದಿನ; ಅಕ್ಷಮ್ಯ ಅಪರಾಧ!

ಪವಿತ್ರ ದಿನ; ಅಕ್ಷಮ್ಯ ಅಪರಾಧ!

ನಮ್ಮೆಲ್ಲ ದೇಶವಾಸಿಗಳಿಗೆ ಅತ್ಯಂತ ಪವಿತ್ರವಾದ ದಿನ. ನಾವೆಲ್ಲರೂ ಒಪ್ಪಿಕೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿಯಾಗಿರುವ ಪವಿತ್ರವಾದ ಸಂವಿಧಾನವನ್ನು ಅಳವಡಿಸಿಕೊಂಡಿರುವ ದಿನ. ಇದೊಂದು ರಾಷ್ಟ್ರೀಯ ಉತ್ಸವ. ನಾವೆಲ್ಲರೂ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅತ್ಯಂತ ಸಂಭ್ರಮದಿಂದ ಭಾಗವಹಿಸುತ್ತ, ಸಂವಿಧಾನವನ್ನು ಗೌರವಿಸಿ ನಮ್ಮ ಬದ್ಧತೆಯನ್ನು ಮತ್ತೊಮ್ಮೆ ಪ್ರದರ್ಶಿಸಬೇಕಾದ ದಿನ. ಈ ಪವಿತ್ರ ದಿನದಂದು ಪ್ರಜಾಪ್ರಭುತ್ವವನ್ನು ಧಿಕ್ಕರಿಸಿ ಸಂವಿಧಾನದ ಆಶಯವನ್ನು ಅಗೌರವಿಸಿದ್ದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದೇಶವಿರೋಧಿ ವರ್ತನೆ

ದೇಶವಿರೋಧಿ ವರ್ತನೆ

ರಾಷ್ಟ್ರಧ್ವಜವನ್ನು ಗೌರವಿಸುವ ಪವಿತ್ರ ನೆಲೆ ದೆಹಲಿಯ ಕೆಂಪು ಕೋಟೆ. ಐತಿಹಾಸಕ ಕೆಂಪುಕೋಟೆಯಲ್ಲಿ ಗೂಂಡಾಗಿರಿ ಪ್ರದರ್ಶನ ಮಾಡಿ, ಪೊಲೀಸರ ಮೇಲೆ ಹಲ್ಲೆ ನಡೆಸಿ ದೇಶವಿರೋಧಿ ಶಕ್ತಿಗಳಾದ ಖಲಿಸ್ತಾನ್ ಧ್ವಜವನ್ನು ಹಾರಿಸಿರುವುದು ಅಕ್ಷಮ್ಯ ಅಪರಾಧ. ಭಾರತೀಯ ಜನತಾ ಪಾರ್ಟಿ ಈ ಗೂಂಡಾಗಿರಿ ಪ್ರವೃತ್ತಿಯನ್ನು, ವ್ಯವಸ್ಥೆಯ ಮೇಲೆ ಮಾಡಿರುವ ಹಲ್ಲೆಯನ್ನು, ಪೊಲೀಸರ ಮೇಲೆ ನಡೆಸಿರುವ ದೌರ್ಜನ್ಯವನ್ನು ಹಾಗೂ ಸಂವಿಧಾನವನ್ನು ಧಿಕ್ಕರಿಸುವ ದೇಶವಿರೋಧಿ ವರ್ತನೆಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಕಟೀಲ್ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರವಿರೋಧಿ ಶಕ್ತಿಗಳು

ರಾಷ್ಟ್ರವಿರೋಧಿ ಶಕ್ತಿಗಳು

ರೈತರ ಹೆಸರಿನಲ್ಲಿ ರೈತರ ಪರವಾಗಿರುವ ಮಸೂದೆಗಳನ್ನು ಪ್ರತಿಭಟಿಸುತ್ತಿರುವ ನೆಪದಲ್ಲಿ ಒಂಬತ್ತು ಸುತ್ತಿನ ಮಾತುಕತೆಯ ನಂತರವೂ ತಮ್ಮ ಪಟ್ಟನ್ನು ಬಿಡದೆ ರಾಷ್ಟ್ರವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿ ಕಾಂಗ್ರೆಸ್ ಪಕ್ಷ, ಕಮ್ಯೂನಿಸ್ಟ್ ಪಕ್ಷ, ರೈತ ವಿರೋಧಿ ದಲ್ಲಾಳಿಗಳು, ಖಲಿಸ್ತಾನ್ ಮತ್ತು ಟುಕಡೇ ಟುಕಡೇ ಗ್ಯಾಂಗ್‍ನಂಥ ರಾಷ್ಟ್ರವಿರೋಧಿ ಶಕ್ತಿಗಳು ಸಂಘಟಿತರಾಗಿ ನಡೆಸುತ್ತಿರುವ ಹೋರಾಟ ಅತ್ಯಂತ ಖಂಡನೀಯ ಮತ್ತು ಅನವಶ್ಯಕ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಯಾವತ್ತೂ ರೈತ ಪರ

ಬಿಜೆಪಿ ಯಾವತ್ತೂ ರೈತ ಪರ

ಭಾರತೀಯ ಜನತಾ ಪಾರ್ಟಿ ಯಾವತ್ತೂ ರೈತರ ಪರವಾಗಿದ್ದು, ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಮತ್ತು ರೈತರನ್ನು ದಲ್ಲಾಳಿಗಳ ಕಪಿಮುಷ್ಟಿಯಿಂದ ಬಿಡುಗಡೆಗೊಳಿಸಿ ರೈತರಿಗೆ ನ್ಯಾಯ ಒದಗಿಸುವಲ್ಲಿ ತನ್ನನ್ನು ಪ್ರಾಮಾಣಿಕವಾಗಿ ತೊಡಗಿಸಿಕೊಂಡು ಈ ಮಸೂದೆಗಳನ್ನು ತಂದಿರುವುದನ್ನು ದೇಶ ಒಪ್ಪಿಕೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುಂದಾಗಿದ್ದ ಪೊಲೀಸರು ಅತ್ಯಂತ ಸಂಯಮದಿಂದ ವರ್ತಿಸಿದ್ದು, ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳ ಮೇಲೆ ಕಲ್ಲೆಸೆತ, ಮಾರಕಾಯುಧ ಪ್ರಯೋಗ ಮಾಡಿರುವುದು ಹಾಗೂ ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿರುವುದು ಗೂಂಡಾ ಪ್ರವೃತ್ತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಕಟೀಲ್ ತಿಳಿಸಿದ್ದಾರೆ.

English summary
Bharatiya Janata Party (BJP) state BJP President Nalin Kumar Katee said in a press release that the BJP has strongly condemned Farmers protest in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X