ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಸಿಎಂ ಅಭ್ಯರ್ಥಿ ಒಬ್ಬರಿಗೆ ಕ್ಷೇತ್ರ ಹುಡುಕಾಡಿ ಮುಗಿದಿಲ್ಲ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಪರಮೇಶ್ವರ್, ಮುನಿಯಪ್ಪರ ಹೋರಾಟದಿಂದ ಕಾಂಗ್ರೆಸ್ ಬಸ್ ಪಂಕ್ಚರ್ ಆಗುತ್ತಿದೆ. ಕಾಂಗ್ರೆಸ್ ಕಾಳಗ ಬೀದಿಕಾಳಗವಾಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಹೇಳಿದರು.

|
Google Oneindia Kannada News

ಬೆಂಗಳೂರು,ಫೆಬ್ರವರಿ4: ಇವತ್ತು ಕಾಂಗ್ರೆಸ್ ಪಕ್ಷವು ಬಸ್ ಯಾತ್ರೆ ಜೊತೆಗೇ ಮುಖ್ಯಮಂತ್ರಿ ಸ್ಥಾನಕ್ಕೆ ಹೋರಾಟ ಮುಂದುವರಿಸಿದೆ. ಕಾಂಗ್ರೆಸ್ ಸಿಎಂ ಅಭ್ಯರ್ಥಿ ಒಬ್ಬರಿಗೆ ಕ್ಷೇತ್ರ ಹುಡುಕಾಡಿ ಮುಗಿದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪರಮೇಶ್ವರ್, ಮುನಿಯಪ್ಪರ ಹೋರಾಟದಿಂದ ಕಾಂಗ್ರೆಸ್ ಬಸ್ ಪಂಕ್ಚರ್ ಆಗುತ್ತಿದೆ. ಕಾಂಗ್ರೆಸ್ ಕಾಳಗ ಬೀದಿಕಾಳಗವಾಗಿದೆ. ಜೆಡಿಎಸ್ ಪಂಚರತ್ನ ಯಾತ್ರೆ ಬಿಜಾಪುರ ತಲುಪುವಾಗ ಹಾಸನದಲ್ಲಿ ಮನೆಯೊಳಗೆ ಜಗಳ ಆರಂಭವಾಗಿದೆ. ಆದ್ದರಿಂದ ಬಿಜೆಪಿ ಜನರ ವಿಶ್ವಾಸದ ಪಕ್ಷವಾಗಿ ಕಾಣುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ತನ್ನ ಶಾಸಕರನ್ನು ಭದ್ರಮಾಡಿಕೊಳ್ಳಲಿ: ಬಸವರಾಜ ಬೊಮ್ಮಾಯಿಕಾಂಗ್ರೆಸ್ ತನ್ನ ಶಾಸಕರನ್ನು ಭದ್ರಮಾಡಿಕೊಳ್ಳಲಿ: ಬಸವರಾಜ ಬೊಮ್ಮಾಯಿ

ಜಿಲ್ಲಾ ಸಮಾವೇಶಗಳು, 4 ತಂಡಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಮುಂದುವರಿಸಲು ನಿರ್ಧರಿಸಲಾಗಿದೆ. ಪಕ್ಷವು ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ 150ಕ್ಕಿಂತ ಹೆಚ್ಚು ಶಾಸಕರ ಸ್ಥಾನ ಗೆದ್ದು ಮತ್ತೊಮ್ಮೆ ಸರಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಬೂತ್ ಬೂತ್, ಗ್ರಾಮಗಳಲ್ಲಿರುವ ಫಲಾನುಭವಿಯ ಮನಸ್ಸಿನಲ್ಲಿ ಬಿಜೆಪಿ ಪರ ಅಲೆ ಇದೆ. ವಾತಾವರಣ ನಮ್ಮ ಪರ ಇದೆ. ಬೂತ್ ವಿಜಯ, ಬೂತ್ ಸಂಕಲ್ಪ ಅಭಿಯಾನ ಅತ್ಯಂತ ಯಶಸ್ವಿಯಾಗಿದೆ ಎಂದು ಹೇಳಿದರು.

Nalin Kumar Kateel Outraged On Congress Leader

ರಾಜ್ಯದ ಡಬಲ್ ಎಂಜಿನ್ ಸರಕಾರ ಅದ್ಭುತವಾಗಿ ಕೆಲಸ ನಿರ್ವಹಿಸುತ್ತಿದೆ. ಒಬ್ಬೊಬ್ಬ ಶಾಸಕರ ಕ್ಷೇತ್ರಕ್ಕೆ ಒಂದೊಂದು ಸಾವಿರ ಕೋಟಿಗೂ ಹೆಚ್ಚು ಅನುದಾನ ಬಂದಿದೆ. ಕೇಂದ್ರ- ರಾಜ್ಯ ಸರಕಾರಗಳು ಅತ್ಯಂತ ಸಮರ್ಥವಾಗಿ ಕಾರ್ಯ ಮಾಡುತ್ತಿವೆ. ರೈತ ವಿದ್ಯಾ ನಿಧಿಯಿಂದ 11 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನ ಸಿಕ್ಕಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಆರು ಸಾವಿರ ಮತ್ತು ರಾಜ್ಯ ಸರಕಾರ ನಾಲ್ಕು ಸಾವಿರ ಕೊಡುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಬಂಜಾರ ಸಮುದಾಯಕ್ಕೆ 50 ಸಾವಿರ ಹಕ್ಕುಪತ್ರಗಳನ್ನು ಹಂಚಲಾಗಿದೆ. ಗೋವುಗಳಿಗೆ ಆಂಬುಲೆನ್ಸ್ ಆರಂಭಿಸಿದ ಪ್ರಥಮ ಸರಕಾರವಾಗಿ ಕರ್ನಾಟಕ ಗುರುತಿಸಿಕೊಂಡಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರವು ಸಶಕ್ತ ಭಾರತ ನಿರ್ಮಾಣಕ್ಕೆ ಪೂರಕ ಎನಿಸಿದ ದೂರದೃಷ್ಟಿಯ ಬಜೆಟ್ ಮಂಡಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನೀಡಿದ ಪ್ರಧಾನಿ ಮೋದಿಜಿ, ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಮತ್ತು ಧನ್ಯವಾದಗಳು ಎಂದು ತಿಳಿಸಿದರು.

ರೈತಪರ, ಮಹಿಳಾ ಪರ, ಯುವಕರಿಗೆ ಉದ್ಯೋಗ ನೀಡುವ ಬಜೆಟ್ ದೇಶದ ದಿಕ್ಕನ್ನು ಬದಲಿಸುವ ವಿಶ್ವಾಸ ಇದೆ ಎಂದ ಅವರು, ಹತ್ತಾರು ವರ್ಷಗಳಿಂದ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿಗಳನ್ನು ಕೊಡುತ್ತಾ ಬರಲಾಗುತ್ತಿದೆ. ಈ ಬಾರಿ ಕರ್ನಾಟಕಕ್ಕೆ 8 'ಪದ್ಮ' ಪ್ರಶಸ್ತಿ ಲಭಿಸಿದೆ. ಹಿಂದೆ ಅರ್ಜಿ ಹಿಡಿದು ಹೋದವರಿಗೆ, ಮಂತ್ರಿಗಳ ಹಿಂದೆ ಸುತ್ತಿದವರಿಗೆ ಪ್ರಶಸ್ತಿ ಸಿಗುತ್ತಿತ್ತು. ಈಗ ಸಮಾಜದಲ್ಲಿ ತಮಟೆವಾದಕ ಮುನಿವೆಂಕಟಪ್ಪ, ರಾಣಿ ಮಾಚಯ್ಯ ಸೇರಿ ಅರ್ಹರಿಗೆ ಪ್ರಶಸ್ತಿ ಸಿಕ್ಕಿದೆ. ಎಸ್.ಎಲ್.ಭೈರಪ್ಪ, ಸುಧಾಮೂರ್ತಿ, ಎಸ್.ಎಂ.ಕೃಷ್ಣರಿಗೂ ಪ್ರಶಸ್ತಿ ಸಿಕ್ಕಿದ್ದು ಅವರೆಲ್ಲರಿಗೆ ಅಭಿನಂದನೆಗಳು ಎಂದು ತಿಳಿಸಿದರು.

English summary
Karnataka Assembly Election 2023; BJP will have more than 150 seats in the next assembly elections says Nalin Kumar Kateel
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X