ರಸ್ತೆಯಲ್ಲೇ ನಮಾಜ್: ಶರಣ್ ಪಂಪ್‌ವಲ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು, ಜೂನ್ 08: ಮಂಗಳೂರು ನಗರದ ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಂಚಿಕೊಂಡ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ವಿಭಾಗ ಸಹ ಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.
ಶರಣ್ ಪಂಪ್‌ವೆಲ್ ಸಲ್ಲಿಸಿರುವ ಅರ್ಜಿ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ನ್ಯಾಯಪೀಠ, ಹಲವು ಪ್ರಕರಣಗಳಲ್ಲಿ ಒಂದು ಚಾರ್ಜ್ ಶೀಟ್ ಸಲ್ಲಿಸಲು ತಿಂಗಳುಗಟ್ಟಲೇ ಸಮಯ ತೆಗೆದುಕೊಳ್ಳುತ್ತೀರಿ. ಅದು ಹೇಗೆ ಈ ಪ್ರಕರಣದಲ್ಲಿ 24 ಗಂಟೆಗೊಳಗಾಗಿ 'ಬಿ' ರಿಪೋರ್ಟ್ ಸಲ್ಲಿಸಿದ್ದೀರಿ?. ಅದು ಹೇಗೆ ಸಾಧ್ಯವಾಯಿತು? ಎಂದು ಪೊಲೀಸರ ಕಾರ್ಯವೈಖರಿ ಕುರಿತು ಸರ್ಕಾರಿ ಪರ ವಕೀಲರನ್ನು ಖಾರವಾಗಿ ಪ್ರಶ್ನಿಸಿತು.

ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಕಾನೂನು ಪಾಲಿಸುವ ನಾಗರೀಕರಾಗಿದ್ದಾರೆ. ನಗರದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದು, ರಸ್ತೆ ಸಂಚಾರಕ್ಕೆ ತಡೆ ಉಂಟಾಯಿತು. ಬಳಿಕ ಕದ್ರಿ ಠಾಣಾ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ತದನಂತರ ಪ್ರಕರಣ ದಾಖಸಿದ್ದ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಮನೆಗೆ ಕಳುಹಿಸಿ, ಕೆಲವೇ ಗಂಟೆಗಳಲ್ಲಿ 'ಬಿ 'ರಿಪೋರ್ಟ್ ಸಲ್ಲಿಸಿದ್ದರು ಎಂದರು.
ಅಲ್ಲದೆ, ಅದರಲ್ಲಿ ಪೊಲೀಸರು ನಮಾಜ್ ಮಾಡುವವರಿಗೆ ರಸ್ತೆ ಸಂಚಾರಕ್ಕೆ ತಡೆ ಉಂಟುಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂದು ಉಲ್ಲೇಖಿಸಿದ್ದರು. ಈ ಘಟನೆ ಖಂಡಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಅರ್ಜಿದಾರರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಈ ಕುರಿತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು ಸುಳ್ಳು ಆರೋಪ ಹೊರಿಸಲಾಗಿದೆ. ಹಾಗಾಗಿ ಪ್ರಕರಣ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ: ನಗರದ ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ನಮಾಜ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣ ದಾಖಸಿದ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಮನೆಗೆ ಕಳುಹಿಸಿ, ಕೆಲವೇ ಗಂಟೆಗಳಲ್ಲಿ 'ಬಿ' ರಿಪೋರ್ಟ್ ಸಲ್ಲಿಸಿದ್ದರು.
ಅದರಲ್ಲಿ ಪೊಲೀಸರು ನಮಾಜ್ ಮಾಡುವವರಿಗೆ ರಸ್ತೆ ಸಂಚಾರಕ್ಕೆ ತಡೆ ಉಂಟುಮಾಡುವ ಯಾವುದೇ ಉದ್ದೇಶ ಇರಲಿಲ್ಲ ಎಂದು ಉಲ್ಲೇಖಿಸಿದ್ದರು. ತದನಂತರ ಪ್ರಕರಣದ ವಿಚಾರಣೆಗೆ ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಮಾಹಿತಿ ನೀಡಿದರು.
ಈ ಎಲ್ಲ ಘಟನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶರಣ್ ಪಂಪವೆಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ, 'ಮಂಗಳೂರಿನ ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜ್ ಬಗ್ಗೆ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸುತ್ತದೆ' ಎಂದು ಪೋಸ್ಟ್ ಮಾಡಿದ್ದರು.
ಬಳಿಕ ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಮಂಗಳೂರು ಸಿಟಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇದನ್ನು ರದ್ದುಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications