Namma Metro: ʼಮುಂಬೈ, ದೆಹಲಿಯಲ್ಲಿ ಮೆಟ್ರೋ ಪ್ರಯಾಣ ದರ ಹೆಚ್ಚಾಗಿಲ್ಲ ಯಾಕೆʼ
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಆಗಿದೆ. ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಮೇಲೆ ನಮ್ಮ ಮೆಟ್ರೋ ಪ್ರಯಾಣ ದರವನ್ನು ಇಳಿಕೆ ಸಹ ಮಾಡಲಾಗಿದೆ. ಆದರೆ, ಇಲ್ಲಿಯ ವರೆಗೆ ನಮ್ಮ ಮೆಟ್ರೋದ ಪ್ರಯಾಣ ದರವನ್ನು ಹೆಚ್ಚಳ ಮಾಡಿದವರು ಯಾರು ಎನ್ನುವುದಕ್ಕೆ ಉತ್ತರ ಸಿಕ್ಕಿಲ್ಲ. ಅಲ್ಲದೆ ನಮ್ಮ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಳ ಮಾಡಿದ್ದು ಕೇಂದ್ರ ಸರ್ಕಾರ ಎಂದು ಇಲ್ಲ ರಾಜ್ಯ ಸರ್ಕಾರವೇ ಮಾಡಿದೆ ಎಂದು ಕೇಂದ್ರ ಸರ್ಕಾರವು ಹೇಳುತ್ತಿದೆ. ಈ ರೀತಿ ಆರೋಪ ಹಾಗೂ ಪ್ರತ್ಯಾರೋಪ ಮುಂದುವರಿದಿದೆ. ಅಲ್ಲದೆ ರಾಜ್ಯ ಸರ್ಕಾರವೇ ಮೆಟ್ರೋ ಬೆಲೆ ಏರಿಕೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅನುಮೋದನೆ ನೀಡಲಾಗಿದೆ ಎನ್ನುವ ವಾದವೂ ಇದೆ. ಇದೀಗ ಸಂಸದ ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆ.
ಬೆಂಗಳೂರಿನ ಸಾರಿಗೆ ಜೀವನಾಡಿಯಾಗಿ ಬದಲಾಗಿರುವ ನಮ್ಮ ಮೆಟ್ರೋದ ಪ್ರಯಾಣ ದರವನ್ನು ಏಕಾಏಕಿ ಶೇ 46ಕ್ಕೂ ಹೆಚ್ಚು ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದ್ದು. ಇದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಮೆಟ್ರೋ ಪ್ರಯಾಣ ದರ ಹೆಚ್ಚಳವಾದ ಬೆನ್ನಲ್ಲೇ ಹಲವರು ಮೆಟ್ರೋ ಬಳಸುವುದನ್ನು ಬಿಟ್ಟು ಸ್ವಂತ ವಾಹನಗಳಲ್ಲಿ ಓಡಾಡುವುದಕ್ಕೆ ಶುರು ಮಾಡಿಕೊಂಡಿದ್ದಾರೆ. ಆದರೆ, ಈ ವಿಚಾರ ಕೇಂದ್ರ ಹಾಗೂ ರಾಜ್ಯದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಇದೀಗ ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೆಟ್ರೊ ದರ ಏರಿಕೆ ವಿಚಾರದಲ್ಲಿ ಆರೋಪ ಪ್ರತ್ಯಾರೋಪ ವಿಚಾರವಾಗಿ ಮಾತನಾಡಿರುವ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ದರ ಏರಿಕೆ ಮಾಡುವುದಾದರೆ, ಬೇರೆ ರಾಜ್ಯದಲ್ಲಿ ದರ ಏರಿಕೆ ಆಗಬೇಕಿತ್ತು. ಅಲ್ಲಿ ದರ ಏರಿಕೆಯನ್ನು ಮಾಡಿಲ್ಲ. ಅಲ್ಲದೆ ದೆಹಲಿ ಹಾಗೂ ಮುಂಬೈ ಮೆಟ್ರೋ ಸೇವೆಯಲ್ಲೂ ಪ್ರಯಾಣ ದರಕ್ಕೆ ಸಂಬಂಧಿಸಿದಂತೆ ಏರಿಕೆ ಆಗಬೇಕಿತ್ತು. ಆದರೆ, ಅಲ್ಲಿ ಆ ರೀತಿ ಆಗಿಲ್ಲ. ಕರ್ನಾಟಕ ಸರ್ಕಾರದ ಪ್ರಸ್ತಾವನೆ ಮೇರೆಗೆ ದರ ಏರಿಕೆ ಆಗಿದೆ ಅಷ್ಟೇ. ಇದನ್ನು ಕೇಂದ್ರ ರೈಲ್ವೆ ಸಚಿವರೇ ಸ್ಪಷ್ಟಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಇನ್ನು ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಇನ್‌ಸೈಡ್ ಫೈಟ್ ನಡೆಯುತ್ತಿದೆ. ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಮುಖ್ಯಮಂತ್ರಿ ಆಯ್ಕೆಯ ವಿಚಾರವಾಗಿ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಬಹಳ ದಿನ ಈ ಸರ್ಕಾರ ಮುಂದುವರಿಯುವುದಿಲ್ಲ. ಕಾಂಗ್ರೆಸ್‌ನಲ್ಲಿ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಂತ್ರ ಪ್ರತಿತಂತ್ರ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಇನ್ನು ಬುರ್ಖಾ ಧರಿಸಿ ಆರ್‌ಎಸ್‌ಎಸ್ ಗಲಭೆ ಸೃಷ್ಟಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು,ಲ್ಪಸಂಖ್ಯಾತ ತೃಷ್ಟೀಕರಣಕ್ಕಾಗಿ ಈ ರೀತಿ ಮಾತನಾಡ್ತಾರೆ. ಜವಾಬ್ದಾರಿ ಸ್ಥಾನದಲ್ಲಿ ಇರುವ ಹರಿಪ್ರಸಾದ್ ತಿಳಿದು ಮಾತನಾಡಬೇಕು.
ನಿಮ್ಮದೇ ಸರ್ಕಾರ ಆಡಳಿತ ನಡೆಸುತ್ತಿದೆ. ತನಿಖೆ ಮಾಡಿ, ಸುಮ್ಮನೆ ಆರೋಪ ಮಾಡೋದು ಬಿಡಿ. ಬಿ.ಕೆ.ಹರಿಪ್ರಸಾದ್ ಅವರ ಈ ಹೇಳಿಕೆ ಬೇಜಾವಾಬ್ದಾರಿತನದ ಹೇಳಿಕೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.












Click it and Unblock the Notifications