Nandini Ghee Export: ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; 3 ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ನವೆಂಬರ್ 25: ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು .
ಇಂದು ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ದಕ್ಕಿಲ್ಲ ಎಂದೂ ಕೂಡ ಅವರು ತಿಳಿಸಿದರು.
ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡುವ ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ. ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಸೂಚನೆ ನೀಡಿದರು. ಜಿಟಿಟಿಸಿ ಪ್ರವೇಶಾತಿಯನ್ನು 6 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇಲ್ಲಿಂದ ತರಬೇತಿ ಪಡೆದು ಹೊರಬರುವ ವಿದ್ಯಾರ್ಥಿಗಳಿಗೆ ವಿದೇಶಿ ಕಂಪನಿಗಳಲ್ಲಿಯೂ ಸೇರಿದಂತೆ ಶೇಕಡ 100 ರಷ್ಟು ನೇಮಕಾತಿ ಆಗುತ್ತಿದೆ .
ಯಾವ ಕೋರ್ಸ್ಗಳಿಗೆ ಬೇಡಿಕೆ ಇದೆ ಅಂತಹ ಕೋರ್ಸ್ಗಳನ್ನು ಪ್ರಾರಂಭಿಸಲು ಸೂಚನೆ. ಕೈಗಾರಿಕೆಗಳ ಬೇಡಿಕೆಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿ. ಕಾರ್ಮಿಕ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ಜಿಟಿಟಿಸಿ ಉತ್ಪಾದನಾ ಕೇಂದ್ರದಲ್ಲಿ ಇಸ್ರೋದ ಚಂದ್ರಯಾನ ನೌಕೆ ಲೂನಾರ್ ರೋವರ್ ಚಕ್ರದ ಉತ್ಪಾದನೆ ಸೇರಿದಂತೆ ಹಲವು ವೈಮಾನಿಕ ಉಪಕರಣಗಳ ಉತ್ಪಾದನೆ ಮಾಡಲಾಗುತ್ತಿದೆ. ಜಪಾನ್, ಜರ್ಮನಿ, ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳೊಂದಿಗೆ ಜಿಟಿಟಿಸಿ ಒಡಂಬಡಿಕೆ ಮಾಡಿಕೊಳ್ಳಲಿದೆ ಎಂದರು.












Click it and Unblock the Notifications