Nandini Ghee: ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ?
ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಂದಿನಿ ವಿಚಾರಕ್ಕೆ ಮತ್ತೊಮ್ಮೆ ಫೈಟಿಂಗ್ ಬಲು ಜೋರಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೊದಲು ಅಂದರೆ ಕೆಲ ತಿಂಗಳ ಹಿಂದಷ್ಟೇ ಅಮುಲ್ ಮತ್ತು ನಂದಿನಿ ವಿಚಾರಕ್ಕೆ ತಿಕ್ಕಾಟ ಶುರುವಾಗಿತ್ತು. ಇದೀಗ ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪ ಬಳಕೆ ನಿಲ್ಲಿಸಿರುವ ವಿಚಾರದಲ್ಲಿ ಇಬ್ಬರ ಮಧ್ಯೆ ವಾರ್ ಜೋರಾಗಿದೆ.
ಅಂದಹಾಗೆ ಬಿಜೆಪಿ ನಾಯಕರ ಆರೋಪಗಳಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಅದರಲ್ಲೂ ಇಷ್ಟುದಿನ ಕಾಂಗ್ರೆಸ್ ನಾಯಕರಿಗೆ ಮಾತ್ರ ಸೀಮಿತವಾಗಿದ್ದ ವಾಗ್ವಾದ ಈಗ ಸಿಎಂ ತನಕವೂ ಬಂದು ತಲುಪಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ಆರೋಪಕ್ಕೆ ಉತ್ತರ ನೀಡಿದ್ದಾರೆ. ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಯಾರ ಕಾಲದಲ್ಲಿ, ಬಿಜೆಪಿ ಅಥವಾ ಕಾಂಗ್ರೆಸ್? ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಅಲ್ಲದೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದರ ಜೊತೆಗೆ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಿರುದ್ಧ ಸಿಎಂ ಸಿದ್ದು ಅಸ್ತ್ರ!
ಸಿದ್ದರಾಮಯ್ಯ ಟ್ವೀಟ್ ಮೂಲಕ ನಳಿನ್ ಕುಮಾರ್ ಕಟೀಲ್ ಅವರಿಗೆ ಉತ್ತರ ನೀಡಿದ್ದು, 'ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ @BJP4Karnataka ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಮಾನ್ಯ ಸಂಸದ ನಳಿನ್ ಕುಮಾರ್ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ?' ಎಂದು ಪ್ರಶ್ನಿಸಿದ್ದಾರೆ ಸಿಎಂ ಸಿದ್ದರಾಮಯ್ಯ
ಧಾರ್ಮಿಕ ನಂಬಿಕೆ ಜೊತೆಗೆ ಬದುಕು ಮುಖ್ಯ!
ಹಾಗೇ ತಮ್ಮ ಟ್ವೀಟ್‌ನಲ್ಲಿ ನಳಿನ್ ಕುಮಾರ್ ಕಟೀಲ್ ಮಾತಿಗೆ ತಿರುಗೇಟು ಮುಂದುವರಿಸಿ, 'ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರಕ್ಕೆ ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ.' ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ಮೂಲಕ ಬಿಜೆಪಿ ಹೂಡಿದ್ದ ಅಸ್ತ್ರವನ್ನ ಪ್ರತ್ಯಸ್ತ್ರ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.
ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ @BJP4Karnataka ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.
— Siddaramaiah (@siddaramaiah) August 1, 2023
ಮಾನ್ಯ ಸಂಸದ @nalinkateel ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ… https://t.co/OegXNLp6HX
ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?
ಅಷ್ಟಕ್ಕೂ ಮೊದಲಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ರು, 'ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕರ್ನಾಟಕ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ. ತಿರುಪತಿಯೊಂದಿಗಿನ 50 ವರ್ಷ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ ಸಿದ್ದರಾಮಯ್ಯ ಅವರ ತಾತ್ಸಾರ ನೀತಿ ರುಜುವಾತಾಗಿದೆ.' ಎಂದು ಆರೋಪಿಸಿದ್ದರು. ಹೀಗೆ ಸಂಸದ ಕಟೀಲ್ ಅವರು ಮಾಡಿದ್ದ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.
ಬಿಜೆಪಿ ಉತ್ತರಿಸುವುದೇ? ಎಂದ ಕಾಂಗ್ರೆಸ್!
ಹಾಗೇ ಕರ್ನಾಟಕ ಕಾಂಗ್ರೆಸ್ ಘಟಕ ಕೂಡ ವಾಗ್ದಾಳಿ ನಡೆಸಿದ್ದು, 'ನಂದಿನಿ ತುಪ್ಪವನ್ನು ತಿರುಪತಿಗೆ ಸರಬರಾಜು ಮಾಡುವುದನ್ನು ನಿಲ್ಲಿಸಿ ಒಂದೂವರೆ ವರ್ಷವಾಗಿದೆ, ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಕ್ರಮ ಕೈಗೊಳ್ಳಲಾಗಿತ್ತು, ಬಿಜೆಪಿಗೆ ತಿರುಪತಿ ತಿಮ್ಮಪ್ಪನ ಮೇಲೆ ಗೌರವ, ಭಕ್ತಿ ಇರಲಿಲ್ಲವೇಕೆ? ತಿಮ್ಮಪ್ಪನಿಗೆ ತುಪ್ಪ ಕೊಡದ ಬಿಜೆಪಿ ಹಿಂದೂ ವಿರೋಧಿ ಅಲ್ಲವೇ? 2020 -2021ರಲ್ಲಿ ತುಪ್ಪ ಸರಬರಾಜನ್ನು ಸ್ಥಗಿತಗೊಳಿಸಿದ್ದೇಕೆ ಎಂಬುದಕ್ಕೆ ಬಿಜೆಪಿ ಉತ್ತರಿಸುವುದೇ?' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
)ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ @INCKarnataka ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ.
— Nalinkumar Kateel (@nalinkateel) July 31, 2023
ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ @siddaramaiah ಅವರ ತಾತ್ಸಾರ ನೀತಿ ರುಜುವಾತಾಗಿದೆ. pic.twitter.com/Z1daEjZtKe
ಹೀಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಂದಿನಿ ವಿಚಾರಕ್ಕೆ ಮತ್ತೆ ಕಿರಿಕ್ ಶುರುವಾಗಿದೆ. ಅವರು ಮಾಡಿದ್ದು ಅಂತಾ ಇವರು, ಇಲ್ಲ ಇವರೇ ಮಾಡಿದ್ದು ಅಂತಾ ಅವರು. ಒಟ್ಟಾರೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಜಗಳದಲ್ಲಿ ನಮ್ಮ ರಾಜ್ಯದ ರೈತರಿಗೆ ನಷ್ಟವಾಗದಿರಲಿ ಅನ್ನುವುದೇ ಕನ್ನಡಿಗರ ಆಶಯ. ಆದರೆ ಇದನ್ನ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಂಡು ಕರ್ನಾಟಕ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ಇಂತಹ ವಿಚಾರದಲ್ಲಿ ಒಂದಾಗುತ್ತಾರಾ? ಅಥವಾ ರಾಜಕೀಯ ಕಿತ್ತಾಟ ಮುಂದುವರಿಯುತ್ತಾ? ಅಂತಾ ಕಾದು ನೋಡಬೇಕು.












Click it and Unblock the Notifications