Nandini milk price: ನಂದಿನಿ ಹಾಲು, ಮೊಸರು ಬೆಲೆ ಏರಿಕೆ ಆಗಲಿದೆಯೇ: ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಏನಂದ್ರು ನೋಡಿ
ನಂದಿನಿ ಕನ್ನಡಿಗರ ಹೆಮ್ಮೆಯ ಪ್ರಾಡೆಕ್ಟ್. ಇದೀಗ ನಂದಿನಿ ರಾಜ್ಯ ರಾಜಧಾನಿಯಿಂದ ರಾಷ್ಟ್ರ ರಾಜಧಾನಿ ದೆಹಲಿಯತ್ತ ಸಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನ ಹಾಲಿಗೆ ಭಾರೀ ಡಿಮ್ಯಾಂಡ್ ಕೇಳಿ ಬಂದಿದೆ. ಆದರೆ, ಈ ನಡುವೆ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಾಗುವ ಬಗ್ಗೆ ಚರ್ಚೆಯಾಗುತ್ತಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ರಾಜ್ಯದಲ್ಲಿ ನಂದಿನಿ ಹಾಲು ಹಾಗೂ ಮೊಸರಿನ ದರ ಹೆಚ್ಚಳವಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಯಾಗಲಿದೆಯೇ ಎನ್ನುವ ಆತಂಕ ಜನರಲ್ಲಿ ಎದುರಾಗಿತ್ತು. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ನಂದಿನ ಹಾಲು ಹಾಗೂ ಅದರ ಉತ್ಪನ್ನಗಳಿಗೆ ಎಂದೂ ಬೇಡಿಕೆ ಕಡಿಮೆಯಾಗಿಲ್ಲ. ತಿರುಪತಿ ಲಡ್ಡು ವಿವಾದದ ನಂತರ ನಂದಿನ ಬ್ರ್ಯಾಂಡ್‌ನ ಗರಿಮೆ ಇನ್ನಷ್ಟು ಹೆಚ್ಚಳವಾಗಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ನಂದಿನಿ ಹಾಲು ಹಾಗೂ ಮೊಸರು ದರ ಹೆಚ್ಚಳವಾಗಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ದಿನ ನಿತ್ಯ ದೇಶದಲ್ಲಿ ಒಂದಿಲ್ಲೊಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದರಿಂದ ಮಧ್ಯಮವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಸ್ಥಿತಿ ಈ ರೀತಿ ಇರುವಾಗಲೇ ಮತ್ತೆ ಬೆಲೆ ಏರಿಕೆಯಾಗಲಿದೆಯೇ ಎನ್ನುವ ಚರ್ಚೆ ಶುರುವಾಗಿತ್ತು. ಈ ಎಲ್ಲಾ ಪ್ರಶ್ನೆ ಹಾಗೂ ಗೊಂದಲಗಳಿಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ತೆರೆ ಎಳೆದಿದ್ದಾರೆ.

ರಾಜ್ಯದಲ್ಲಿ ಸದ್ಯಕ್ಕೆ ನಂದಿನಿ ಹಾಲು ಹಾಗೂ ಮೊಸರು ದರ ಏರಿಕೆ ಮಾಡುವ ಬಗ್ಗೆ ಯಾವುದೇ ಚಿಂತನೆಯೂ ನಮ್ಮ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನಿ ಹಾಲಿನ ಮಾರಾಟವು ಯಶಸ್ವಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ನಾವು ಇನ್ನಷ್ಟು ಭಾಗದಲ್ಲಿ ವಿಸ್ತರಿಸುವ ಪ್ಲಾನ್ ಇದೆ ಎಂದಿದ್ದಾರೆ.
ರೈತರ ಬೇಡಿಕೆ: ನಂದಿನಿ ಹಾಲಿನ ದರ ಏರಿಕೆ ಮಾಡಬೇಕು ಅಂತ ರೈತರು ಮನವಿ ಮಾಡಿರುವುದು ನಿಜ. ಆದರೆ, ಈಗ ಬೆಲೆ ಏರಿಕೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೆ ಈಚೆಗೆ ದೆಹಲಿಯಲ್ಲಿ ಚಾಲನೆ ನೀಡಲಾಗಿದೆ. ದೆಹಲಿಯಲ್ಲಿ ಪ್ರತಿ ನಿತ್ಯವೂ 6 ಸಾವಿರ ಲೀಟರ್‌ಗೂ ಹೆಚ್ಚು ನಂದಿನಿ ಹಾಲು ಮಾರಾಟವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು 1 ಲಕ್ಷ ಲೀಟರ್‌ಗೆ ಹೆಚ್ಚಳ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.

ನಂದಿನಿ ಉತ್ಪನ್ನಕ್ಕೆ ಬೇಡಿಕೆ ಹೆಚ್ಚಳ: ಇನ್ನು ಕರ್ನಾಟಕದ ಹೆಮ್ಮೆಯ ನಂದಿನಿ ಹಾಲು ಹಾಗೂ ನಂದಿನಿ ಉತ್ಪನ್ನಗಳಿಗೆ ಇದೀಗ ದೇಶದಾದ್ಯಂತ ಹೆಚ್ಚು ಬೇಡಿಕೆ ಇದೆ. ದೇಶದ ವಿವಿಧ ಭಾಗದಲ್ಲಿ ನಂದಿನಿ ಉತ್ಪನ್ನ ಹಾಗೂ ಗುಣಮಟ್ಟಕ್ಕೆ ಜನ ಫಿದಾ ಆಗಿದ್ದು, ಈ ಉತ್ಪನ್ನಗಳ ಮಾರಾಟ ಜೋರಾಗಿದ್ದು, ಕೆಎಂಎಫ್‌ಗೂ ಆದಾಯ ಹರಿದು ಬರುತ್ತಿದೆ. ಉತ್ಪನ್ನ ಉತ್ತಮವಾಗಿದ್ದು, ಗುಣಮಟ್ಟ ಹಾಗೂ ಗ್ರಾಹಕರು ಮೆಚ್ಚಿಕೊಳ್ಳುವಂತೆ ಇದ್ದರೆ ಸಕ್ಸಸ್ ಆಗುತ್ತದೆ ಎನ್ನುವುದಕ್ಕೆ ನಮ್ಮ ನಂದಿನಿ ಉತ್ಪನ್ನವು ಬೆಸ್ಟ್ ಉದಾಹರಣೆಯಾಗಿದೆ.












Click it and Unblock the Notifications