ಬಜೆಟ್ ಬಳಿಕ ರಾಜ್ಯದಲ್ಲಿ ಹಾಲಿನ ದರ ಏರಿಕೆ ಫಿಕ್ಸ್, ಲೀಟರ್‌ಗೆ ಎಷ್ಟು?
ಈಗಾಗಲೇ ಬಸ್ ಪ್ರಯಾಣ ದರ, ಮೆಟ್ರೋ ಪ್ರಯಾಣ ದರ ಏರಿಕೆ ಶಾಕ್‌ನಿಂದ ರಾಜ್ಯದ ಜನ ಇನ್ನೂ ಹೊರಬಂದಿಲ್ಲ. ಇದೀಗ ಹಾಲಿನ ದರ ಏರಿಕೆ ಮಾಡುವ ಕುರಿತಾಗಿಯೂ ಭಾರಿ ಚರ್ಚೆಗಳು ನಡೆಯುತ್ತಿವೆ. ಮಾರ್ಚ್ ಮೊದಲ ವಾರದಲ್ಲಿ ಕರ್ನಾಟಕ ಬಜೆಟ್ ಮಂಡನೆಯಾಗಲಿದ್ದು, ಬಳಿಕ ರಾಜ್ಯಾದ್ಯಂತ ನಂದಿನಿ ಹಾಲಿನ ದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಹತ್ವದ ಮಾಹಿತಿ ತಿಳಿಸಿದ್ದಾರೆ.
ಬಜೆಟ್ ನಂತರ ರಾಜ್ಯ ಸರ್ಕಾರ ಕೆಎಂಎಫ್ ನಂದಿನಿ ಹಾಲಿನ ದರವನ್ನು ಲೀಟರ್‌ಗೆ 5 ರೂಪಾಯಿ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಲಿನ ದರ ಏರಿಕೆ ಮಾಡುವ ಸಂಬಂಧ ಭಾರಿ ಒತ್ತಡವಿದೆ. ಈ ಹಿನ್ನೆಲೆ ಹಾಲು ನಿಗಮಗಳ ಸಭೆ ಕರೆದು ಚರ್ಚೆ ಕೂಡ ನಡೆದಿದೆ. ಒಟ್ಟಾರೆ ಹಾಲಿನ ದರವನ್ನು ಐದು ರೂಪಾಯಿ ಹೆಚ್ಚಳ ಮಾಡಬೇಕು ಎಂದು ಒತ್ತಾಯ ಕೇಳಿಬಂದಿದೆ. ಈ ವಿಚಾರವನ್ನು ಸರ್ಕಾರಕ್ಕೆ ತಿಳಿಸಿದ್ದು, ಈ ಹೆಚ್ಚಿಸುವ ಹಣವನ್ನು ರೈತರಿಗೆ ನೀಡಬೇಕು ಎಂದು ನಿರ್ಧರಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದಾರೆ.

ಪಶುಸಂಗೋಪನೆ ಇಲಾಖೆಯೂ ಸೇರಿದಂತೆ ಹಲವರಿಂದ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಮೊದಲಿನಿಂದಲೂ ಒತ್ತಡವಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇವೆ. ಆದರೆ, ಸರ್ಕಾರದಿಂದ ಈವರೆಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ಹೊರಬಂದಿಲ್ಲ. ಹಾಗಾಗಿ ಸದ್ಯಕ್ಕೆ ಹಾಲಿನ ದರ ಏರಿಸುವ ಬಗ್ಗೆ ಸರ್ಕಾರ ತೀರ್ಮಾನವೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಲು ಒಕ್ಕೂಟಗಳಿಂದಲೂ ದರ ಏರಿಕೆಗೆ ಒತ್ತಡವಿದೆ. ಹಾಗಾಗಿ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಡಿಮ್ಯಾಂಡ್ ಮಾಡಿವೆ. ಈ ಸಂಬಂಧ ಕಳೆದ ತಿಂಗಳು ಕೂಡ ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ಸಭೆಯಲ್ಲೂ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯ ಎಂದೇ ಅಭಿಪ್ರಾಯ ವ್ಯಕ್ತವಾಗಿತ್ತು. ಕೊನೆಗೆ ಹಾಲಿನ ದರ ಲೀಟರ್‌ಗೆ 5 ರೂಪಾಯಿ ಹೆಚ್ಚಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸದ್ಯ ರಾಜ್ಯ ಬಜೆಟ್ ಇರುವುದರಿಂದ ದರ ಏರಿಕೆ ವಿಚಾರಕ್ಕೆ ಸರ್ಕಾರ ಸೈಲೆಂಟ್ ಆಗಿದೆ. ಬಜೆಟ್ ಮಂಡನೆ ಬಳಿಕ ದರ ಏರಿಕೆ ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ.

ಅಧಿಕಾರಕ್ಕೆ ಬಂದ 20 ತಿಂಗಳುಗಳಲ್ಲಿ ಈಗಾಗಲೇ ಎರಡೆರಡು ಬಾರಿ ಹಾಲಿನ ದರ ಏರಿಕೆ ಮಾಡಿ ಪ್ರತಿ ಹಾಲಿನ ಪಾಕೆಟ್ ದರ 5 ರೂಪಾಯಿ ದುಬಾರಿ ಮಾಡಿ ಗ್ರಾಹಕರ ಜೇಬಿಗೆ ಕನ್ನ ಹಾಕಿರುವ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೊಮ್ಮೆ ಪ್ರತಿ ಪಾಕೆಟ್ ಹಾಲಿನ ದರವನ್ನು 5 ರೂಪಾಯಿ ಹೆಚ್ಚಳ ಮಾಡುವ ಮೂಲಕ ಹಗಲು ದರೋಡೆ ಮಾಡಲು ಹೊರಟಿದೆ ಎಂದು ಬಿಜೆಪಿ ಶಾಸಕ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications