ನಂದಿನಿ ಮೊಸರು ಬೆಲೆ ಇಳಿಕೆ: ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ; ಹಾಲಿನ ದರ ಕಡಿತಗೊಳಿಸಲು ಆಗ್ರಹ

ನಂದಿನಿ ಮೊಸರಿನ ಬೆಲೆ ಅಲ್ಪ ಇಳಿಕೆ ಮಾಡಿರುವುದನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕೆ ಮಾಡಿದ್ದಾರೆ. ಮೊಸರಿನ ದರದಲ್ಲಿ ಅಲ್ಪ ಇಳಿಕೆ ಮಾಡಿ ಜನರ ಆಕ್ರೋಶಕ್ಕೆ ತೇಪೆ ಹಚ್ಚುವ ಪ್ರಯತ್ನ ಬೇಡ, ಮುಖ್ಯಮಂತ್ರಿಗಳೇ ಎಂದು ಆರ್. ಅಶೋಕ್ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಮೊಸರಿನ ಪ್ರತಿ ಲೀಟರ್‌ಗೆ 14 ರೂಪಾಯಿ ಹೆಚ್ಚಳ ಮಾಡಿ, ಜನರಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಅಲ್ಪ ಪ್ರಮಾಣದಲ್ಲಿ ದರ ಇಳಿಸುವುದಾಗಿ ಹೇಳುವುದು ಯಾವ ರೀತಿಯ ಜನಪರ ಆಡಳಿತ? ಮೊದಲು ವಿಪರೀತವಾಗಿ ಬೆಲೆ ಏರಿಸಿ, ನಂತರ ಅಲ್ಪ ಇಳಿಕೆ ಮಾಡಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುವುದು ಸರಿಯಲ್ಲ.

Nandini Milk Price R Ashoka Criticises Price Hike Demands Relief for Consumers

ಹಾಲು ಮತ್ತು ಮೊಸರಿನ ದರ ಏರಿಕೆಯಿಂದ ಈಗಾಗಲೇ ಸಾಮಾನ್ಯ ಕುಟುಂಬಗಳ ಮಾಸಿಕ ಬಜೆಟ್ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತಷ್ಟು ಹೊರೆ ನೀಡುವುದು ಸರ್ಕಾರದ ಜವಾಬ್ದಾರಿಯುತ ಆಡಳಿತದ ಲಕ್ಷಣವಲ್ಲ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ. ಹಾಲು ಉತ್ಪಾದಕರಿಗೆ ಸೂಕ್ತ ಪ್ರೋತ್ಸಾಹಧನ ನೀಡುವ ಮೂಲಕ ಅವರ ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದು ಸರ್ಕಾರದ ಜವಾಬ್ದಾರಿ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಪ್ರೋತ್ಸಾಹಧನ ನೀಡುವ ಮೂಲಕ ರೈತರ ಹಿತವನ್ನೂ ಕಾಪಾಡಿ, ಅದರ ಹೊರೆಯನ್ನು ನೇರವಾಗಿ ಗ್ರಾಹಕರ ಮೇಲೆ ವರ್ಗಾಯಿಸದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ರೈತರಿಗೆ ನೆರವು ನೀಡುವ ನೆಪದಲ್ಲಿ ಜನರ ಜೇಬಿಗೆ ಕತ್ತರಿ ಹಾಕುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.

ಸರ್ಕಾರಕ್ಕೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದರೆ, ಅಗತ್ಯವಿರುವ ಪ್ರೋತ್ಸಾಹಧನವನ್ನು ಸರ್ಕಾರವೇ ಭರಿಸಲಿ. ರೈತರಿಗೆ ನೆರವು ನೀಡುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಂಡು ಅದರ ಹೊಣೆಯನ್ನು ಸಾಮಾನ್ಯ ಜನರ ಮೇಲೆ ಹಾಕುವುದು ಯಾವ ನ್ಯಾಯ. ನೀರಿನ ಬಾಟಲಿ ಬೆಲೆ ಏರಿಕೆಯಾದರೆ ಯಾರೂ ಪ್ರಶ್ನಿಸುವುದಿಲ್ಲ ಎಂದು ಹೇಳುವ ಮುಖ್ಯಮಂತ್ರಿಗಳು, ಜನರ ದಿನನಿತ್ಯದ ಅಗತ್ಯವಾದ ಹಾಲು ಮತ್ತು ಮೊಸರಿನ ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುವುದು ಹಾಸ್ಯಾಸ್ಪದ.

ಮೊಸರಿನ ದರದಲ್ಲಿ ಅಲ್ಪ ಇಳಿಕೆ ಸಾಕಾಗದು. ಹಾಲಿನ ದರ ಏರಿಕೆಯನ್ನೂ ಮರುಪರಿಶೀಲಿಸಿ, ಹಾಲು ಮತ್ತು ಮೊಸರಿನ ಬೆಲೆಯನ್ನು ಇಳಿಸಬೇಕು. ರೈತರಿಗೆ ಸರ್ಕಾರದಿಂದ ಸೂಕ್ತ ಪ್ರೋತ್ಸಾಹಧನ ನೀಡಿ, ಅದರ ಹೊರೆಯನ್ನು ಜನರ ಮೇಲೆ ಹಾಕಬಾರದು. ಜನರ ಜೇಬಿಗೆ ಹೊರೆ ಹಾಕುವುದಲ್ಲ ಸರ್ಕಾರದ ಜವಾಬ್ದಾರಿ; ಜನರ ಬದುಕಿಗೆ ನೆಮ್ಮದಿ ನೀಡುವುದೇ ನಿಜವಾದ ಜನಪರ ಆಡಳಿತ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದೇನು ?

ನಮ್ಮ ಹೈನುಗಾರರ ಜೀವನೋಪಾಯವನ್ನು ರಕ್ಷಿಸುವ ಹಾಗೂ ಗ್ರಾಹಕರಿಗೆ 'ನಂದಿನಿ' ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಸದಾ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನವೆಂಬರ್ 1ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿನ ದರವನ್ನು ₹8ರಷ್ಟು ಹೆಚ್ಚಿಸಲಾಗಿದೆ. ಜಾನುವಾರುಗಳ ಮೇವು ಮತ್ತು ಹಿಂಡಿ ದರದಲ್ಲಿನ ಹೆಚ್ಚಳ, ಇಂಧನ ಹಾಗೂ ಪ್ಯಾಕೇಜಿಂಗ್ ವೆಚ್ಚದ ಏರಿಕೆ ಮತ್ತು ಬರಗಾಲದ ಪರಿಣಾಮವಾಗಿ ದೈನಂದಿನ ಹಾಲಿನ ಸಂಗ್ರಹಣೆಯಲ್ಲಿ ಉಂಟಾಗಿರುವ ಕುಸಿತ ಈ ಅನಿವಾರ್ಯ ಪರಿಷ್ಕರಣೆಗೆ ಪ್ರಮುಖ ಕಾರಣಗಳಾಗಿವೆ ಎಂದಿದ್ದರು. ಅಲ್ಲದೆ ಈ ₹8ರ ಹೆಚ್ಚಳದಲ್ಲಿ ₹7 ನೇರವಾಗಿ ರೈತರಿಗೆ ತಲುಪಲಿದ್ದು, ಪ್ರತಿ ಲೀಟರ್‌ಗೆ ₹35ರಿಂದ ₹42ಕ್ಕೆ ಏರಿಕೆಯಾಗಲಿದೆ. ಸರ್ಕಾರ ನೀಡುವ ₹5 ಪ್ರೋತ್ಸಾಹಧನ ಸೇರಿ ರೈತರಿಗೆ ಪ್ರತಿ ಲೀಟರ್ ಹಾಲಿಗೆ ₹47 ಕೈಸೇರಲಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+