ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ನಂದಿತಾ ಸಾವಲ್ಲಿ ಬಿಜೆಪಿ, ಕಾಂಗ್ರೆಸ್ ರಾಜಕೀಯ'

|
Google Oneindia Kannada News

ಬೆಂಗಳೂರು, ನ.6 : ತೀರ್ಥಹಳ್ಳಿಯ ಶಾಲಾ ಬಾಲಕಿ ನಂದಿತಾ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜಕಾರಣ ಮಾಡಲು ಪ್ರಯತ್ನಿಸುತ್ತಿವೆ ಎಂದು ಜೆಡಿಎಸ್ ಆರೋಪಿಸಿದೆ. ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ, ತಪ್ಪಿತಸ್ಥರನ್ನು ಬಂಧಿಸಬೇಕಾದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಪಕ್ಷ ದೂರಿದೆ.

ಜೆಡಿಎಸ್ ವಕ್ತಾರ ರಮೇಶ್ ಬಾಬು ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನ್ಯಾಯವನ್ನು ರಕ್ಷಿಸುವತ್ತ ಪ್ರಯತ್ನವನ್ನು ಮಾಡುವ ಬದಲು ಧರ್ಮದ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷವು ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. [ತೀರ್ಥಹಳ್ಳಿಯಲ್ಲಿ ಆಣೆ-ಪ್ರಮಾಣ ರಾಜಕೀಯ]

JDS

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅತ್ಯಾಚಾರ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಅಪ್ರಾಪ್ತ ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ಪ್ರಕರಣಗಳಿಂದ ರಾಷ್ಟ್ರಮಟ್ಟದಲ್ಲಿ ಬೆಂಗಳೂರು ಮತ್ತು ಕರ್ನಾಟಕಕ್ಕೆ ಕೆಟ್ಟ ಹೆಸರು ಬಂದಿದೆ. [ನಂದಿತಾ ಸಾವಿಗೆ ಕಂಬನಿ ಮಿಡಿದ ತೀರ್ಥಹಳ್ಳಿ]

ಬೆಂಗಳೂರಿನಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಕ್ರಮಕೈಗೊಂಡಿತ್ತು. ಅದೇ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಗೃಹ ಸಚಿವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ನೀಡಿ ಒಬ್ಬ ಸಲಹೆಗಾರರನ್ನು ನೇಮಿಸಿತು.

ಆದರೆ, ಸರ್ಕಾರದ ಯಾವುದೇ ಇಂತಹ ಪ್ರಯತ್ನಗಳು ಅಪರಾಧ ಸಂಖ್ಯೆಯನ್ನು ಕಡಿಮೆಗೊಳಿಸಲು ಅಥವಾ ಅತ್ಯಾಚಾರದ ಪ್ರಕರಣಗಳನ್ನು, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಕಡಿಮೆಗೊಳಿಸಲು ಫಲವನ್ನು ನೀಡಿರುವುದಿಲ್ಲ. ಇದರ ಹೊಣೆಯನ್ನು ರಾಜ್ಯ ಸರ್ಕಾರ ಹೊರಬೇಕಾಗುತ್ತದೆ ಎಂದು ರಮೇಶ್ ಬಾಬು ಹೇಳಿದ್ದಾರೆ.

ತೀರ್ಥಹಳ್ಳಿಯ ಶಾಲಾ ಬಾಲಕಿಯ ಸಾವಿನ ಪ್ರಕರಣದಲ್ಲಿ ಮೊದಲು ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯವನ್ನು ತುಂಬಬೇಕು. ಧಾರ್ಮಿಕ ವಿಚಾರಗಳನ್ನು ಆಚೆ ಇಟ್ಟು, ಸತ್ಯಾಂಶವನ್ನು ಹೊರಗೆಳೆದು ಮುಕ್ತವಾದ ತನಿಖೆಯ ಮೂಲಕ ಆರೋಪಿಯನ್ನು ಬಂಧಿಸಿ, ಶೋಷಣೆಗೆ ಒಳಗಾಗಿರುವ ಕುಟುಂಬಕ್ಕೆ ನ್ಯಾಯವನ್ನು ದೊರಕಿಸಿಕೊಡಬೇಕು ಎಂದು ರಮೇಶ್ ಬಾಬು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷಗಳು ಸಾವಿನ ಹೆಸರಿನಲ್ಲಿಯೂ ರಾಜಕಾರಣ ಮಾಡಲು ಮುಂದಾಗಿ ಜನರ ಭಾವನೆಗಳನ್ನು ಕೆರಳಿಸಿ, ಸಮಾಜವನ್ನು ಒಡೆಯುವ ಪ್ರಯತ್ನಕ್ಕೆ ಮುಂದಾಗಿವೆ. ಇದು ವ್ಯವಸ್ಥೆಯ ದುರಂತವಾಗಿರುತ್ತದೆ. ಎರಡು ರಾಜಕೀಯ ಪಕ್ಷಗಳು ಇಂತಹ ರಾಜಕೀಯ ನಾಟಕಗಳನ್ನು ಕೈಬಿಟ್ಟು, ಬಾಲಕಿ ನಂದಿತಾಳ ಕುಟುಂಬದವರಿಗೆ ನ್ಯಾಯದೊರಕಿಸಿ ಕೊಡಬೇಕೆಂದು ಒತ್ತಾಯಿಸಿದ್ದಾರೆ.

English summary
JDS alleged that BJP and Congress doing politics in Thirthahalli Nandita death case. JDS spokesperson Ramesh Babu demanded for justice to Nandita family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X