ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ರಿಮೋಟ್ ಕಂಟ್ರೋಲ್ ಸಿಎಂ : ಮೋದಿ

|
Google Oneindia Kannada News

ಬೆಂಗಳೂರು, ಮಾರ್ಚ್ 06 : ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಕರ್ನಾಟಕ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಟೀಕಿಸಿದರು.

ಕರ್ನಾಟಕದ ಮುಖ್ಯಮಂತ್ರಿ ರಿಮೋಟ್ ಸಿಎಂ : ನರೇಂದ್ರ ಮೋದಿಕರ್ನಾಟಕದ ಮುಖ್ಯಮಂತ್ರಿ ರಿಮೋಟ್ ಸಿಎಂ : ನರೇಂದ್ರ ಮೋದಿ

Narendra Modi attacks on Karnataka government

ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು 'ರಿಮೋಟ್ ಕಂಟ್ರೋಲ್ ಸಿಎಂ' ಎಂದು ಮೋದಿ ವ್ಯಂಗ್ಯವಾಡಿದರು. ಕರ್ನಾಟಕದ ಸಮ್ಮಿಶ್ರ ಸರ್ಕಾರ ರೈತರ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ ಡಾ.ಉಮೇಶ್ ಜಾಧವ್ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ ಡಾ.ಉಮೇಶ್ ಜಾಧವ್

ಪ್ರಧಾನ್​ ಮಂತ್ರಿ ಕಿಸಾನ್​ ಸಮ್ಮನ್​ ನಿಧಿ ಯೋಜನೆ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, 'ಕರ್ನಾಟಕದ ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿಗಳು ಯೋಜನೆಗೆ ಅರ್ಹರಾದ ರೈತರ ಪಟ್ಟಿಯನ್ನು ಇನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿಲ್ಲ' ಎಂದು ದೂರಿದರು.

'ರೈತರು ಅವರ ಹಕ್ಕುಗಳನ್ನು ಪಡೆಯಲು ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಹಣವನ್ನು ಪಡೆಯಲು ಯಾವುದೇ ಮಧ್ಯವರ್ತಿಗಳಿಲ್ಲ ಎಂಬುದು ಅವರಿಗೆ ಗೊತ್ತು' ಎಂದು ನರೇಂದ್ರ ಮೋದಿ ಹೇಳಿದರು.

ಪ್ರಧಾನ್​ ಮಂತ್ರಿ ಕಿಸಾನ್​ ಸಮ್ಮನ್​ ನಿಧಿ ಯೋಜನೆಯಡಿ 2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವ ರೈತರ ಖಾತೆಗೆ ವಾರ್ಷಿಕ 6 ಸಾವಿರ ರೂ.ಗಳನ್ನು ನೀಡಲಾಗುತ್ತದೆ. ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಮೂರು ಕಂತುಗಳನ್ನು ಜಮಾ ಮಾಡಲಾಗುತ್ತದೆ.

English summary
Prime Minister of India Narendra Modi addressed rally in Kalaburagi. In a speech he attacked the Karnataka government and said CM of Karnataka has not sent the list of eligible farmers to the union govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X