ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿ ಸರ್ಕಾರ: ಸಿದ್ದರಾಮಯ್ಯ ಲೇವಡಿ

ಬೆಂಗಳೂರು, ಆಗಸ್ಟ್‌ 5: ವಿರೋಧ ಪಕ್ಷಗಳ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿರುವ ಪ್ರಧಾನಿ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ಈ ದೇಶ ದಿವಾಳಿಯಾಗಿರುವುದು ಗ್ಯಾರಂಟಿ ಯೋಜನೆಗಳಿಂದ ಅಲ್ಲ. ಬದಲಾಗಿ ನರೇಂದ್ರ ಮೋದಿ ಅವರ ಸರ್ಕಾರದಿಂದ ಎಂದು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಕಲಬುರಗಿಯಲ್ಲಿ ಇಂದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ, ಮಾತನಾಡಿದೆ. 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು ಈ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ. ವಿರೋಧ ಪಕ್ಷದವರಲ್ಲದೇ ಈ ದೇಶದ ಪ್ರಧಾನಿಗಳು ಕೂಡ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿಲ್ಲ. ಈ ದೇಶವನ್ನು ದಿವಾಳಿ ಮಾಡಿರುವುದು ನರೇಂದ್ರ ಮೋದಿ ಸರ್ಕಾರ ಎಂದು ಹೇಳಿದ್ದಾರೆ.

narendra-modi-government-has-bankrupted

2013-18 ರ ಅವಧಿಯಲ್ಲಿ ನಮ್ಮ‌ ಸರ್ಕಾರವು ಎಲ್ಲ ಭರವಸೆಗಳನ್ನು ಈಡೇರಿಸಿದಾಗ ರಾಜ್ಯವು ಆರ್ಥಿಕವಾಗಿ ಸುಭದ್ರವಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ, ಬೆಲೆ ಏರಿಕೆ ಮಾಡಿ, ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚು ಮಾಡಿ, ರಾಜ್ಯದ ಬಡವರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಕರ್ನಾಟಕದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಹಿಂದುಳಿಯುವಂತೆ ಮಾಡಿದೆ. ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡುತ್ತಿರುವ ಹೊಟ್ಟೆಯುರಿಯಿಂದ ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರನ್ನು ಬದಲಾಯಿಸಿದ್ದೇ ಬಿಜೆಪಿ ಸರ್ಕಾರದ ಕೊಡುಗೆ ಎಂದಿದ್ದಾರೆ.

ವಿರೋಧ ಪಕ್ಷದವರು ಅನ್ನಭಾಗ್ಯ ಕಾರ್ಯಕ್ರಮದ ಬಗ್ಗೆಯೂ ಗುಲ್ಲೆಬ್ಬಿಸಿದರು. ಕೇಂದ್ರದಲ್ಲಿರುವುದು ಬಡವರ ವಿರೋಧಿ ಸರ್ಕಾರ. ಅಕ್ಕಿ ಕೊಡುವುದಾಗಿ ಮೊದಲು ಒಪ್ಪಿಗೆ ನೀಡಿ, ನಂತರ ಅಕ್ಕಿ ಕೊಡದೆ ರಾಜಕೀಯ ಮಾಡಿದರು. ರೂ.34 ರಂತೆ ಹಣ ಕೊಡುತ್ತೇವೆ ಎಂದರೂ ಅವರು ಬಡವರಿಗೆ 5 ಕೆಜಿ ಅಕ್ಕಿಯನ್ನು ನೀಡಲಿಲ್ಲ.

ಬಡತನ ಹಿಂಸೆಯ ಅತಿ ಕೆಟ್ಟ ರೂಪ ಎಂದು ಮಹಾತ್ಮಾ ಗಾಂಧಿ ಹೇಳಿದ್ದರು. ದೇಶದಲ್ಲಿ ಅಸಮಾನತೆ ಇದೆ, ಬಡತನ ಹಾಗೂ ಶ್ರೀಮಂತಿಕೆ ಇದೆ. ನಾವು ಇದನ್ನು ಹೋಗಲಾಡಿಸುವ ಕೆಲಸ ಮಾಡಬೇಕು. ಬೆಲೆ ಏರಿಕೆಯ ಮೂಲಕ ನರೇಂದ್ರ ಮೋದಿಯವರು ಜನರ ಬಳಿ ಇದ್ದ ದುಡ್ಡು ಕಿತ್ತುಕೊಳ್ಳತ್ತಾರೆ. ಜನತೆ ವಿರೋಧ ಪಕ್ಷದವರ ಮಾತುಗಳಿಗೆ ಕಿವಿ ಕೊಡಬೇಕಾದ ಅಗತ್ಯವಿಲ್ಲ. ಕಲಂ 371 (ಜೆ) ಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿಯವರು ಹೇಳಿದ್ದರು. ಅದನ್ನು ಕಾಂಗ್ರೆಸ್ ಸರ್ಕಾರ ಮಾಡಿ ತೋರಿಸಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಎಂದಿಗೂ ಮಾತಿಗೆ ತಪ್ಪುವುದಿಲ್ಲ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮೂಲಕ ಹೇಳಿಸಿರುವ ಗ್ಯಾರಂಟಿ ಯೋಜನೆಗಳು ಹಾಗೂ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳನ್ನು ಖಂಡಿತಾ ಜಾರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+