ಕನ್ನಡ ರಾಜ್ಯೋತ್ಸವ, ಶುಭಾಶಯ ತಿಳಿಸಿದ ನರೇಂದ್ರ ಮೋದಿ

ಬೆಂಗಳೂರು, ನವೆಂಬರ್ 1 : 62ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರಿಗೆ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ. ಮೋದಿ ತಮ್ಮ ಟ್ವಿಟರ್ ಖಾತೆ ಮೂಲಕ ಕನ್ನಡದಲ್ಲಿಯೇ ಟ್ವಿಟ್ ಮಾಡಿದ್ದಾರೆ.

ನವೆಂಬರ್ 1 ರ ಬುಧವಾರ ಪ್ರಧಾನಿ ನರೇಂದ್ರ ಮೋದಿ 'ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ' ಎಂದು ಟ್ವಿಟ್ ಮಾಡಿದ್ದಾರೆ.

kannada

ಶುಭಾಶಯ ತಿಳಿಸಿದ ಸಿದ್ದರಾಮಯ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 62 ಸಾಧಕರಿಗೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ಇಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರದಲ್ಲಿ ಪ್ರದಾನ ಮಾಡಲಾಗುತ್ತದೆ.

ಕರ್ನಾಟಕ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಂಟಿಯಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ 62ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ಆಯೋಜಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಯರ್ ಸಂಪತ್ ರಾಜ್ ಸೇರಿದಂತೆ ವಿವಿಧ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+