ThankYouModi ಎಂದು ಕರ್ನಾಟಕ ಕಾಂಗ್ರೆಸ್‌ ಟ್ವೀಟ್!

ಒಂದು ದಿನದ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಕಾಂಗ್ರೆಸ್ ಈ ಕುರಿತು ಸರಣಿ ಟ್ವೀಟ್‌ ಮಾಡಿದೆ.

ಬೆಂಗಳೂರು, ಫೆಬ್ರವರಿ 27; ಭಾರತದ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರ ಸೋಮವಾರ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಶಿವಮೊಗ್ಗ ಮತ್ತು ಬೆಳಗಾವಿಗೆ ಭೇಟಿ ನೀಡಲಿರುವ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್ ಮೋದಿ ಭೇಟಿ ಹಿನ್ನಲೆಯಲ್ಲಿ ಸರಣಿ ಟ್ವೀಟ್ ಮಾಡಿದೆ.

ಸೋಮವಾರ ಕಾಂಗ್ರೆಸ್ #ThankYouModi ಎಂಬ ಹ್ಯಾಷ್‌ಟ್ಯಾಗ್ ಬಳಕೆ ಮಾಡಿಕೊಂಡು ಟ್ವೀಟ್‌ ಮಾಡಿದೆ. ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ1 ಮಾಡಿದ್ದಕ್ಕೆ #ThankYouModi!! ಎಂದು ವ್ಯಂಗ್ಯವಾಡಿದೆ. ಸರಣಿ ಟ್ವೀಟ್‌ಗಳನ್ನು ಮಾಡುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದೆ.

Narendra Modi In Karnataka Congress Tweet With ThankYouModi Hashtag

ತನ್ನ ಒಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಪಕ್ಷ 40% ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ, ಕ್ರಮವೂ ಇಲ್ಲ. ಹಿಂದೆ ಪ್ರಧಾನಿ ಭೇಟಿಗಾಗಿ ಹಾಕಿದ್ದ ರಸ್ತೆ ಕಿತ್ತು ಬಂದಿದ್ದಕ್ಕೆ ವರದಿ ಕೇಳಿದ್ದರು, ಆ ಲೂಟಿಯ ಬಗ್ಗೆ ತನಿಖೆಯೇ ಇಲ್ಲ. ಸಂತೋಷ್ ಪಾಟೀಲ್ ಪತ್ರಕ್ಕೆ ಪ್ರಧಾನಿಯ ಉತ್ತರವಿಲ್ಲ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ1 ಮಾಡಿದ್ದಕ್ಕೆ #ThankYouModi !!. ಎಂದು ಟೀಕಿಸಿದೆ.

Narendra Modi In Karnataka Congress Tweet With ThankYouModi Hashtag

ಮತ್ತೊಂದು ಟ್ವೀಟ್‌ನಲ್ಲಿ, 'ಮೋದಿ ಸರ್ವಶಕ್ತ, ಸರ್ವಾಂತರ್ಯಾಮಿ ಎನ್ನುವ ಬಿಜೆಪಿ ಸರ್ವಶಕ್ತ ಮೋದಿಗೆ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗಿಲ್ಲವೇಕೆ ಎಂದರೆ ಪಾಕಿಸ್ತಾನದ ಕಡೆ ಕೈ ತೋರಿಸುತ್ತಾರೆ!. ಗ್ಯಾಸ್ ಬೆಲೆಯನ್ನು ₹1000 ದಾಟಿಸಿ, ಪೆಟ್ರೋಲ್ ಬೆಲೆಯನ್ನು ₹100 ದಾಟಿಸಿ, ಜನರ ಬದುಕಿನ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿರುವ ಮೋದಿಗೆ ಧನ್ಯವಾದಗಳು! #ThankYouModi ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಮತ್ತೊಂದು ಟ್ವೀಟ್‌ನಲ್ಲಿ, 'ಕರ್ನಾಟಕದಲ್ಲಿ ಭ್ರಷ್ಟಾಚಾರವು ಡಬಲ್ ವೇಗದಲ್ಲಿ ಮುನ್ನುಗ್ಗುತ್ತಿದೆ. @narendramodi ಅವರೇ, ಭ್ರಷ್ಟಾಚಾರಕ್ಕೆ ಯಾವುದೇ ತಡೆಯಿಲ್ಲದೆ, ಯಾವುದೇ ಅಂಜಿಕೆ, ಅಳುಕಿಲ್ಲದೆ #40PercentSarkara ನಡೆಸಿದ್ದಕ್ಕೆ ತಮಗೆ ಧನ್ಯವಾದಗಳು. "ಮೋದಿ ಹೈ ತೊ ಮುಮ್ಕಿನ್ ಹೈ" ಎನ್ನುವಂತೆ ಇದು ಸಾಧ್ಯವಾಗಿದ್ದು ನಿಮ್ಮಿಂದಲೇ ಅಲ್ಲವೇ! #ThankYouModi' ಎಂದು ಟೀಕಿಸಿದೆ.

ಸಿದ್ದರಾಮಯ್ಯ ವಾಗ್ದಾಳಿ; ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗಾಗಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

"ಪ್ರವಾಹ, ಜನ ಸತ್ತಾಗ ಬರಲಿಲ್ಲ ಈಗ ಬರಲು ಶುರು ಮಾಡಿದ್ದಾರೆ. ಯಾಕೆಂದರೆ ಬಿಜೆಪಿ ಅವರಿಗೆ ಲೀಡರ್ ಶಿಪ್ ಇಲ್ಲ. ಅದಕ್ಕೆ ಮೋದಿ‌ ಮುಖ ಇಟ್ಟೊಕೊಂಡು ವೋಟ್ ಕೇಳುತ್ತಾರೆ" ಎಂದು ಸಿದ್ದರಾಮಯ್ಯ ರಾಜ್ಯದ ಬಿಜೆಪಿ ನಾಯಕರಿಗೂ ಕುಟುಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+