ಕನ್ನಡಿಗರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ಶುಭಾಶಯ

ಬೆಂಗಳೂರು, ನವೆಂಬರ್ 1: ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಹಾಗೂ ಕರ್ನಾಟಕದ ಜನತೆಗೆ ಟ್ವಿಟ್ಟರ್‌ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಕರ್ನಾಟಕ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರತಿಭಾವಂತರ ನೆಲೆಯಾಗಿದೆ ಎಂದು ಮೋದಿ ಶ್ಲಾಘಿಸಿದ್ದಾರೆ.

'ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ' ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ಇಂಗ್ಲಿಷ್‌ನಲ್ಲಿಯೂ ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಮೋದಿ ಅವರು ಕನ್ನಡದಲ್ಲಿ ಶುಭ ಹಾರೈಸಿದ್ದನ್ನು ಅನೇಕರು ಸ್ವಾಗತಿಸಿದ್ದಾರೆ. ಕರ್ನಾಟಕ, ಕನ್ನಡದ ಇತಿಹಾಸ, ಭಾಷೆ, ವೈವಿಧ್ಯಗಳ ಕುರಿತ ಬರಹಗಳನ್ನು ಪೋಸ್ಟ್ ಮಾಡಿ ಸಂಭ್ರಮಿಸಿದ್ದಾರೆ. ಕನ್ನಡಿಗರು ಮಾತ್ರವಲ್ಲದೆ, ಭಾರತದ ಇತರೆ ರಾಜ್ಯಗಳ ಅನೇಕರು ಕೂಡ ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ.

Narendra modi kannada tweet wishes to karnataka rajyotsava

ಇನ್ನು ಕೆಲವರು ಗುಜರಾತ್‌ನಲ್ಲಿ ನಿರ್ಮಿಸಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಯಲ್ಲಿ ಬೇರೆ ಭಾಷೆಗಳಿಗೆ ಮಾನ್ಯತೆ ನೀಡಿ ದಕ್ಷಿಣ ಭಾರತದ ಭಾಷೆಗಳನ್ನು ಕಡೆಗಣಿಸಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವುದಕ್ಕೂ ಮೋದಿ ಅವರ ಟ್ವೀಟ್ ಅನ್ನು ಬಳಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+