ಏಪ್ರಿಲ್ 30ಕ್ಕೆ ಚನ್ನಪಟ್ಟಣದಲ್ಲಿ ನರೇಂದ್ರ ಮೋದಿ ಚುನಾವಣಾ ರ‍್ಯಾಲಿ
ಬೆಂಗಳೂರು, ಏಪ್ರಿಲ್ 23: ಮೇ 10 ರಂದು ದಕ್ಷಿಣ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30 ರಂದು ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಬಿಜೆಪಿಯು ತನ್ನ ಭದ್ರಕೋಟೆಯಲ್ಲದೆ ರಾಜ್ಯದ ಕೆಲವು ಭಾಗಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರ ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆಗೆ ಸಾಕ್ಷಿಯಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಭಾವಿಸಿದ್ದಾರೆ.

ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪಕ್ಕದ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಪ್ರದೇಶವನ್ನು ಜೆಡಿಎಸ್‌ನ ಭದ್ರಕೋಟೆಯಾಗಿದೆ. ಹೀಗಾಗಿ ಇಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ. ಸದ್ಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸಿದ್ಧತೆ ನಡೆದಿದೆ.
ಮೂಲಗಳ ಪ್ರಕಾರ, 2ರಿಂದ 3 ಲಕ್ಷ ಜನರು ಕುಳಿತುಕೊಳ್ಳಲು ಬೃಹತ್ ವೇದಿಕೆ ಮತ್ತು ಶಾಮಿಯಾನ ನಿರ್ಮಿಸಲಾಗುತ್ತಿದೆ. ಪಕ್ಕದ ಜಿಲ್ಲೆಗಳಾದ ತುಮಕೂರು, ಮಂಡ್ಯ ಮತ್ತು ಮೈಸೂರಿನಿಂದ ಬಿಜೆಪಿ ಕಾರ್ಯಕರ್ತರನ್ನು ಕರೆ ತರಲಾಗುತ್ತದೆ ಎನ್ನಲಾಗಿದೆ.
ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಈ ಬಾರಿ ರೋಡ್ ಶೋ ಇರುವುದಿಲ್ಲ. ಸುಮಾರು 2 ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಹಳೇ ಮೈಸೂರು ಪ್ರದೇಶದಲ್ಲಿ (ದಕ್ಷಿಣ ಕರ್ನಾಟಕ) ಪಕ್ಷವು ಹೆಚ್ಚು ಸ್ಥಾನಗಳನ್ನು ಗೆಲ್ಲಲು ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆ ಚುನಾವಣೆ ಹಿನ್ನೆಲೆಯಲ್ಲಿ ಸರಣಿ ಚುನಾವಣಾ ರ‍್ಯಾಲಿ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ.
ಹಳೆ ಮೈಸೂರು ಭಾಗದಲ್ಲಿ ನೆಲೆ ಕಂಡುಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿರುವ ಬಿಜೆಪಿ ಎಚ್‌ಡಿ ಕುಮಾರಸ್ವಾಮಿ ಅವರ ಕ್ಷೇತ್ರ ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಅವರನ್ನು ಕರೆತರಲು ಮುಂದಾಗಿರುವ ಬೆನ್ನಲ್ಲೇ ಜೆಡಿಎಸ್ ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿತ್ತು. ಕರ್ನಾಟಕಕ್ಕೆ ನೆರೆ ಬಂದಾಗ ನಿರ್ಲಕ್ಷಿಸಿ, ಕೋವಿಡ್ ಸಮಯದಲ್ಲಿ ಆಕ್ಸಿಜನ್ ಕೊಡಲು ನಿರಾಕರಿಸಿ, ನಮ್ಮ ಪಾಲಿನ ತೆರಿಗೆ, ಜಿಎಸ್‌ಟಿ ಕೊಡದೆ ಸತಾಯಿಸಿ ರಾಜ್ಯ ನೆನಪಿಸಿಕೊಳ್ಳದ ಪ್ರಧಾನಿ ಮೋದಿಯವರಿಗೆ ಚುನಾವಣೆ ಬಂದಾಗ ಮಾತ್ರ ಎಲ್ಲಿಲ್ಲದ ಅತ್ಯುತ್ಸಾಹ. ಹಳೆ ಮೈಸೂರು ಭಾಗವೇ ಈ ಸಲ ಬಿಜೆಪಿಗೆ ದೊಡ್ಡ ಗುರಿ ಅಂತೆಲ್ಲ ಮಾಧ್ಯಮ ವರದಿ ಮಾಡುತ್ತಿದೆ.
ಇದೇ ಕಾರಣಕ್ಕೆ ಮೋದಿಯವರು ರ‍್ಯಾಲಿ, ಪ್ರಚಾರ ಸಭೆಗಳನ್ನು ಚನ್ನಪಟ್ಟಣ ಸೇರಿ ಹಳೆಮೈಸೂರಿನ ಕೆಲವು ಭಾಗಗಳಲ್ಲಿ ಮಾಡಲಿದ್ದಾರಂತೆ.ಸ್ವಂತ ಶಕ್ತಿ,ಕೆಲಸಗಳ ಆಧಾರದಲ್ಲಿ ಗೆಲ್ಲಲು ಆಗದ ಗುಲಾಮಿ ಮನಸ್ಥಿತಿಯ ಅಭ್ಯರ್ಥಿಗಳಿಗಾಗಿ ಕೇಂದ್ರದ ಬಿಜೆಪಿ ಸರ್ಕಾರ ಇಡಿಯಾಗಿ ಬಂದರೂ ಅಷ್ಟೆ,ಈ ಸಲದ ಚುನಾವಣೆಯಲ್ಲಿ ಕನ್ನಡಿಗರನ್ನು ಯಾಮಾರಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿತ್ತು.












Click it and Unblock the Notifications